ತಾಜಾ ಸುದ್ದಿ

 ಉಡುಪಿ: ದೈವಸ್ಥಾನಕ್ಕೆ ನುಗ್ಗಿದ ಕಳ್ಳರು- ಕಾಣಿಕೆ ಡಬ್ಬಿಯಿಂದ ಹಣ ಕಳವು

 ಉಡುಪಿ ಜಿಲ್ಲೆಯ ಕಾಪು ಸಮೀಪ ಕಟಪಾಡಿ ಏಣಗುಡ್ಡೆ ಗ್ರಾಮದ ಫಾರೆಸ್ಟ್‌ ಗೇಟ್‌ ಬಬ್ಬು ಸ್ವಾಮಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯನ್ನು ಕದ್ದೊಯ್ದ ಘಟನೆ ನಡೆದಿದೆ ‌ ಮುಂಜಾನೆಯ ನಡುವೆ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ದೈವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗವನ್ನು ಮುರಿದಿದ್ದು ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ 4 ಸಾವಿರ ರೂಪಾಯಿ ಹಾಗೂ ಆವರಣದಲ್ಲಿರುವ ಚಾಮುಂಡಿ ಗುಡಿ ಹಾಗೂ ಕೊರಗಜ್ಜನ ಗುಡಿಯ ಬೀಗ ವನ್ನು ಮುರಿದು ಹುಂಡಿ ಯಲ್ಲಿದ್ದ 1 ಸಾವಿರ ರೂ.ಗಳನ್ನು ಕಳವುಗೈದಿದ್ದಾರೆ. ರಾತ್ರಿ 11.20ರ ವೇಳೆಗೆ ಕಳವು ನಡೆದಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ದೈವಸ್ಥಾನದ ಸದಸ್ಯ …

Read More »

ಉಡುಪಿ: ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರು- ಮೂವರು ಪ್ರಾಣಾಪಾಯದಿಂದ ಪಾರು

ಉಡುಪಿ: ನೆರೆಗೆ ಕಾರೊಂದು ಕೊಚ್ಚಿಹೋದ ಘಟನೆ ಉಡುಪಿ ಕನ್ನರ್ಪಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು‌ ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು‌ ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ‌ ಸಿಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

Read More »

ನಾಳೆ ದ‌.ಕ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09/07/2೦24 ರಂದು ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜುಲೈ 9ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Read More »

ಉಡುಪಿ : ಮಗಳನ್ನು ಶಾಲೆಗೆ ಬಿಟ್ಟು ಬಂದು ತಂದೆ ಆತ್ಮಹತ್ಯೆ..!

ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್ ಉದ್ಯಾವರ ಗುಡ್ಡೆಯಂಗಡಿಯಲ್ಲಿ ಟೆಂಪೋರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಬಿಲ್ಲವ ಮಹಾಜನ ಸಂಘ, ಉದ್ಯಾವರ …

Read More »

ಮಳೆ ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲಾದ್ಯಂತ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಮಳೆ ತೀವ್ರವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಸೋಮವಾರ ರಜೆ ಘೋಷಣೆ ಮಾಡಿದ್ದಾರೆ. ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ. ಭಾನುವಾರ …

Read More »

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್‌ ಘೋಷಣೆ..!

ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಬದಲಾದ ಹವಾಮಾನ ವೈಪರಿತ್ಯದಿಂದ ರಾಜ್ಯ ಕರಾವಳಿಯಲ್ಲಿ ಎಡಬಿಡದೆ ನಿರಂತರ ಮಳೆ ಸುರಿಯುತ್ತಿ್ದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಎಲ್ಲಡೆ ಮಳೆ ಅಬ್ಬರ ಜೋರಾಗಿದೆ. …

Read More »

ಉಡುಪಿ: ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಸುರಿದ ಬಿರುಸಿನ ಮಳೆಗೆ ನಗರ ಹಾಗೂ ಸುತ್ತಮುತ್ತಲಿನ ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಉಡುಪಿ ನಗರದ ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ ಪ್ರದೇಶದಲ್ಲಿ ಭಾರಿ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹ ಗೊಂಡು ವಾಹನ ಸವಾರರು ಪರದಾಡಿದರು ಸೋಮವಾರ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಕೆಲಸಕ್ಕೆ ತೆರಳುವವರು, ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು. ಧಾರಾಕಾರ ಮಳೆ ಮುಂದುವರಿದಿರುವುದರಿಂದ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. …

Read More »

ಬಂಟ್ವಾಳ :‌ ಬಸ್‌-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು..!

ಬಂಟ್ವಾಳ :‌ ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ  ದಕ್ಷಿಣ ಕನ್ನಡ ಬಂಟ್ವಾಳ  ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಯುವಕನಾಗಿದ್ದಾನೆ.  ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಕೆ ಎಸ್ ಆರ್‌ಟಿಸಿ ಬಸ್ ದ್ವಿಚಕ್ರ ವಾಹನ‌ಕ್ಕೆ ಢಿಕ್ಕಿ ಹೊಡೆದಿದೆ . ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸಾಕು ನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಬೆಲೆ ಬಾಳುವ ಚಿನ್ನದ ಸರ ಗಿಫ್ಟ್​​ ಮಾಡಿದ ಮಹಿಳೆ

ಮುಂಬೈ:  ತಮ್ಮ ಮಕ್ಕಳಿಗಿಂತ ತಮ್ಮ ಸಾಕುಪ್ರಾಣಿಗಳನ್ನು ಹೆಚ್ಚು ಪ್ರೀತಿಸುತ್ತಾರೆ.   ಮಹಿಳೆಯೊಬ್ಬರು  ಗಂಟೆಗಟ್ಟಲೆ ಶಾಪಿಂಗ್ ಮಾಡಿ ಮಗುವಿನಂತೆ ಹುಟ್ಟುಹಬ್ಬದಂದು ಆಭರಣದ ಅಂಗಡಿಗೆ ಸಾಕು ನಾಯಿಯನ್ನು ಕರೆದುಕೊಂಡು ಹೋದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಸರಿತಾ ಸಲ್ಡಾನ್ಹಾ ಎಂಬ ಮಹಿಳೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವಳು ನಾಯಿಯನ್ನು ಮುದ್ದಿಸುತ್ತಾಳೆ. ಅವಳು ಅದಕ್ಕೆ ‘ಟೈಗರ್’ ಎಂದು ಹೆಸರಿಟ್ಟಿದ್ದಾಳೆ. ಆದರೆ ಟೈಗರ್ ಹುಟ್ಟುಹಬ್ಬ ಕಳೆದ ತಿಂಗಳು ಬಂದಿತ್ತು. ಸರಿತಾ ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲು ಬಯಸಿದ್ದರು. ಟೈಗರ್ ನನ್ನು ತೆಕ್ಕೆಗೆ ಹಾಕಿಕೊಂಡು ನಗರದ …

Read More »

ಮಂಗಳೂರು/ಉಡುಪಿ: ಅವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ -ಮರವಂತೆಯಲ್ಲಿ ತ್ರೀವಗೊಂಡ ಕಡಲ್ಕೊರೆತ

ಮಂಗಳೂರು/ಉಡುಪಿ:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ.ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದಿದೆ. ಕಾರಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಕಾಶಿಬೆಟ್ಟು ಹೆದ್ದಾರಿಯಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಧಾರಾಕಾರ ಮಳೆ ಸುರಿದಿದ್ದು, ನಂತರದ ತೀವ್ರತೆ ಕಡಿಮೆಯಾಗಿದೆ. IMD ಪ್ರಕಾರ ಜುಲೈ 7 ರಿಂದ 9 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ದಿನವಿಡೀ ತುಂತುರು ಮಳೆ ಸುರಿದಿದೆ. ಕಾರ್ಕಳ, ಹೆಬ್ರಿ ಮತ್ತು ಉಡುಪಿಯಲ್ಲಿ …

Read More »

You cannot copy content of this page.