ತಾಜಾ ಸುದ್ದಿ

ಬೆಳ್ತಂಗಡಿ: ಅಂಬಡಬೆಟ್ಟು ಸೇತುವೆ ಶಿಥಿಲ – ಘನವಾಹನ ಸಂಚಾರ ನಿಷೇಧ..!

ಬೆಳ್ತಂಗಡಿ ತಾಲೂಕಿನ ಕಲ್ಲಂಜ ಗ್ರಾಮದ ನಿಡಿಗಲ್ ಮೂಲಕ ನಡ ಗ್ರಾಪಂ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಪಂ ವ್ಯಾಪ್ತಿಯ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿರುವ ಅಂಬಡಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಸೇತುವೆಯು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಹಾಗಾಗಿ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿಬರ್ಂಧಿಸಲಾಗಿದೆ. ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ. ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ದ್ವಾರದಿಂದ, ಸೂರ್ಯ, …

Read More »

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ ಅವರ ಬ್ಯಾಂಕ್ ಖಾತೆಯಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು 2,08,004ರೂ. ವರ್ಗಾವಣೆಗೊಂಡಿದೆ. ಸುಮಾರು 177 ಬಾರಿ ಬೇರೆ ಬೇರೆ ಕಂತು ಗಳಲ್ಲಿ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬ್ಯಾಂಕ್‌ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್‌ ಕಾರ್ಡ್‌ ಮೂಲಕ ಹಣ ವರ್ಗಾ ವಣೆಯಾಗಿದೆ ಎಂದಿದ್ದಾರೆ. ಬಳಿಕ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಅವರು, ನನಗೆ ಹಣ ವರ್ಗಾವಣೆಗೆ …

Read More »

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಸೋಮವಾರ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೋಟರಿ ಉಡುಪಿ ಮಾದರಿ ಕಾರ್ಯ ಮಾಡುತಿದ್ದು, ಈ ಸಾಲಿನ ಪ್ರಥಮ ದಿನದಂದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿ ದಾಖಲೆ ನಿರ್ಮಿಸಿದ್ದಾರೆ ಎಂದರು. ರೋಟರಿ ಉಡುಪಿ ಅಧ್ಯಕ್ಷ ರೋ। ಗುರುರಾಜ್ ಭಟ್ ಟಿ ಅಧ್ಯಕ್ಷತೆ ವಹಿಸಿದ್ದರು. ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ೨೧ ವಿದ್ಯಾರ್ಥಿಗಳನ್ನು …

Read More »

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ.. ಬೆಳಗ್ಗೆ ಉಯ್ಯಾಲೆಯಲ್ಲಿ ಪ್ರತ್ಯಕ್ಷ..!

ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಎನ್ನುವಷ್ಟರಲ್ಲಿ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬುವರ ಒಂದೂವರೆ ವರ್ಷದ ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿದ್ದರು. ಆದರೆ ಮರುದಿನ ಅಂದರೆ ಜೂನ್ 30ರ ಬೆಳಗ್ಗೆ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಪ್ರತ್ಯಕ್ಷವಾಗಿದೆ. ಇದರಿಂದ ಕುಟುಂಬಸ್ಥರು ಹಾಗೂ …

Read More »

ಜಲಪಾತದ ನೀರಲ್ಲಿ ಕೊಚ್ಚಿ ಹೋದ 5 ಮಂದಿ: ಭಯಾನಕ ದೃಶ್ಯ ಸೆರೆ

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಮುಳುಗಿದ್ದು, 4-9 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಕಾಣೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಶೋಧ ಮತ್ತು ರಕ್ಷಣಾ ತಂಡಗಳು ಅಲ್ಲಿಗೆ ಧಾವಿಸಿ ನೀರಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸಿವೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಪಂಕಜ್ ದೇಶಮುಖ್ ತಿಳಿಸಿದ್ದಾರೆ. ಅವರು ಭೂಶಿ ಅಣೆಕಟ್ಟಿನಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತದ ನೀರಲ್ಲಿ …

Read More »

ಬೆಳ್ತಂಗಡಿ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಕಾರ್ಕಳದಲ್ಲಿ ಶವವಾಗಿ ಪತ್ತೆ..!

ಬೆಳ್ತಂಗಡಿ: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಉಜಿರೆಯ ಆಟೋ ಚಾಲಕ ಸುಧಾಕರ ಮಾಚಾರ್ (35) ಕಾರ್ಕಳದ ನಲ್ಲೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುಧಾಕರ್ ಶುಕ್ರವಾರ ಜೂನ್ 28 ರಂದು ಆಟೋರಿಕ್ಷಾ ಚಲಾಯಿಸಿಕೊಂಡು ಮನೆಯಿಂದ ಹೋದವರು ವಾಪಸ್ ಬಂದಿಲ್ಲ. ಅವರ ಕುಟುಂಬ ಸದಸ್ಯರು ವ್ಯಾಪಕ ಹುಡುಕಾಟ ನಡೆಸಿದರೂ ಅವರನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಕಾರ್ಕಳದ ನಲ್ಲೂರು ಸಮೀಪದ ಪಾಡೆಗುಡ್ಡೆ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Read More »

ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಏಕೆ ಕುಡಿಯಬಾರದು ಗೊತ್ತಾ …

ಬೆಂಗಳೂರು: ಫ್ರಿಡ್ಜ್‌ನಿಂದ ನೀರು ತೆಗೆದಾಗ ಮತ್ತು ಅದು ತುಂಬಾ ತಂಪಾಗಿರುವಾಗ, ಅನೇಕ ಜನರು ಅದಕ್ಕೆ ಬಿಸಿನೀರನ್ನು ಸೇರಿಸುತ್ತಾರೆ. ಇನ್ನೂ ಕೆಲವರು ಕೆಲವರು ಬಿಸಿ ನೀರಿಗೆ ತಣ್ಣೀರು ಸೇರಿಸಿ ಕುಡಿಯುವುದನ್ನು ಕೂಡ ಕಾಣಬಹುದಾಗಿದೆ. ಆದರೆ ಆರೋಗ್ಯ ತಜ್ಞರು ಇದನ್ನು ಆರೋಗ್ಯಕ್ಕೆ ಸೂಕ್ತವೆಂದು ಪರಿಗಣಿಸುವುದಿಲ್ಲ.   ತಜ್ಞನರ ಪ್ರಕಾರ ಯಾರೂ ಬಿಸಿ ಮತ್ತು ತಣ್ಣೀರನ್ನು ಒಟ್ಟಿಗೆ ಕುಡಿಯಬಾರದು. ತಣ್ಣೀರು ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಬಿಸಿ ನೀರು ಭಾರವಾಗಿರುತ್ತದೆ, ಬಿಸಿನೀರು ಹಗುರವಾಗಿರುತ್ತದೆ, ಎರಡೂ ಒಟ್ಟಿಗೆ ಸೇರಿದಾಗ ಅಜೀರ್ಣ ಸಮಸ್ಯೆಯಾಗಬಹುದು ಅಂತ ಹೇಳಿದ್ದಾರೆ. ನೀವು ಬಿಸಿ ಮತ್ತು ತಣ್ಣೀರನ್ನು ಏಕೆ ಬೆರೆಸಬಾರದು: ಅಲ್ಲದೆ, ಬಿಸಿನೀರು …

Read More »

ಮೋದಿ ಸರ್ಕಾರದಿಂದ ಗುಡ್ ನ್ಯೂಸ್ : ಗ್ಯಾಸ್ ಸಿಲಿಂಡರ್ ದರ ಇಳಿಕೆ

ನವದೆಹಲಿ : ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್.ಪಿ.ಜಿ. ದರದಲ್ಲಿ ಮೊದಲ ಬಾರಿಗೆ ಇಳಿಕೆಯಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ದರವನ್ನು 31 ರೂಪಾಯಿ ಇಳಿಕೆ ಮಾಡಲಾಗಿದೆ. ಗೃಹಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 19 ಕೆಜಿ ಸಿಲಿಂಡರ್ ದರ ಬೆಂಗಳೂರಲ್ಲಿ 1724 ಇದೆ. ದೆಹಲಿಯಲ್ಲಿ 1745 ರೂ., ಮುಂಬೈನಲ್ಲಿ 1698 ರೂ. ಇದೆ. ಕಳೆದ ತಿಂಗಳು ವಾಣಿಜ್ಯ ಬಳಕೆ ಸಿಲಿಂಡರ್ ದರ 72 ರೂ. ಕಡಿತ ಮಾಡಲಾಗಿತ್ತು. …

Read More »

ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಯಿ ಲಚ್ಚಿ ಪೂಜಾರ್ತಿ ನಿಧನ!

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್‌ 30 ರಂದು ನಿಧನರಾದರು. ಕೋಟದ ಕೋಟತಟ್ಟು ನಿವಾಸಿಯಾಗಿದ್ದ ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಂಸದ ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದ್ದೆ ಎಂದು ಕಾರ್ಯಕ್ರಮಗಳ ವೇದಿಕೆ ಭಾಷಣಗಳಲ್ಲಿ ನೆನಪಿಸಿಕೊಳ್ಳುತ್ತಿದ್ದರು. ಮೃತರಿಗೆ ಸಂತಾಪ ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ …

Read More »

ಉಡುಪಿ: ಪರ್ಕಳದ ಕೆರೆದಂಡೆ ನಾಲ್ಕನೇ ಬಾರಿ ಕುಸಿತ, ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪರ್ಕಳ: ಇಲ್ಲಿನ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಸಾಧಾರಣ ಮಳೆಗೇ ಕುಸಿದಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಭೇಟಿ ನೀಡಿ ಪರಿಶೀಲಿಸಿದರು. ಸಣ್ಣ ನೀರಾವರಿ ಇಲಾಖೆಯಿಂದ ಬಹುಕೋಟಿ ಅನುದಾನದಿಂದ ನಿರ್ಮಾಣವಾಗುತ್ತಿರುವ ಈ ಕರೆ ಈಗ ನಾಲ್ಕನೇ ಬಾರಿಯೂ ಕೆರೆದಂಡೆ ಕುಸಿಯಲು ಅವೈಜ್ಞಾನಿಕ ಕಾಮಗಾರಿ ಕಾರಣ ಎನ್ನಲಾಗುತ್ತಿದೆ. ಕೆರೆಯ ವಿನ್ಯಾಸ ಹಾಗೂ ಕಾಮಗಾರಿಯ ಗುಣಮಟ್ಟ ಕಳಪೆ ಎಂದು ಸ್ಥಳೀಯರು ದೂರಿದ್ದಾರೆ. ಮಳೆ ನೀರು ಹರಿದು ಹೋಗಲು ಸರಿಯಾದ ತೋಡು ಕೆರೆಯ ಅಕ್ಕಪಕ್ಕದಲ್ಲಿ ನಿರ್ಮಾಣ ಮಾಡದೇ ಇರುವುದು ಮತ್ತು ಈ …

Read More »

You cannot copy content of this page.