ತಾಜಾ ಸುದ್ದಿ

ಉಡುಪಿ: ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಅಣ್ಣ- ತಂಗಿ ಸಾವು..!

ಕುಂದಾಪುರ: ಆಕಸ್ಮಿಕವಾಗಿ ಕೆರೆಯ ನೀರಿಗೆ ಜಾರಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಳ್ಳಾಲ ಸಮೀಪದ ಅಣ್ಣ ತಂಗಿ ಧನರಾಜ್ (13) ಮತ್ತು ಛಾಯಾ (7) ಕೆರೆಗೆ ಬಿದ್ದು ಮೃತಪಟ್ಟ ದುರ್ದೈವಿಗಳು.ಶನಿವಾರ  ಈ ದುರಂತ ಸಂಭವಿಸಿದೆ. ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಶೀಲಾ ತೀವ್ರ ಅಸ್ವಸ್ಥಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Read More »

ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ನಾಯಿ..!

ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ಉಪ್ಪಿನಂಗಡಿ ಬಳಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಕಿ.ಮೀ. ದೂರದ ಉಪ್ಪಿನಂಗಡಿಗೆ ರಾತ್ರಿ ವೇಳೆ ನಡೆದುಕೊಂಡು ಬಂದಿದ್ದಾರೆ. ಅವರನ್ನು ಸಾಕು ನಾಯಿ ಹಿಂಬಾಲಿಸಿಕೊಂಡು ಬಂದಿದ್ದು, ನದಿಗೆ ಹಾರಲು ಸೇತುವೆ ಬಳಿ ಹೋಗುವಾಗ ಚೂಡಿದಾರ ಹಿಡಿದಿಳೆದು ನಿರಂತರವಾಗಿ ಬೊಗಳಿದೆ. ನಾಯಿ ನಿರಂತರವಾಗಿ ಬೊಗಳುಗುವುದನ್ನು ಗಮನಿಸಿದ ಬೈಕ್ ಸವಾರ ಹಾಗೂ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. 16 ವರ್ಷದ ಹಿಂದೆ ದಂಪತಿ ಪ್ರೀತಿಸಿ ಮದುವೆಯಾಗಿದ್ದು, ಕೆಲವು ವರ್ಷಗಳಿಂದ ವಿರಸವಾಗಿತ್ತು. ಗುರುವಾರ ರಾತ್ರಿ …

Read More »

ಗುಡ್ ನ್ಯೂಸ್ : ಇಂದು, ನಾಳೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ

ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ …

Read More »

ಹೊಸ ‘ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸುವವರೇ- ಈ ದಾಖಲೆಗಳು ಕಡ್ಡಾಯ

ಹೊಸ ರೇಷನ್ ಕಾರ್ಡ್ ಪಡೆಯಲು ಇಚ್ಚಿಸುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ಜುಲೈ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ರಾಜ್ಯದ ನಾಗರೀಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಪಡಿತರಚೀಟಿಗಾಗಿಅರ್ಜಿಸಲ್ಲಿಸಲುಬೇಕಿರುವಅಗತ್ಯದಾಖಲೆಗಳು ವೋಟರ್ ಐಡಿ ಆಧಾರ್ ಕಾರ್ಡ್ …

Read More »

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಉದ್ಯಮಿಯ ಪುತ್ರ ಕೊನೆಯುಸಿರು

ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ. ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ರಸ್ತೆಯಾಗಿ ಅಪಘಾತ ನಡೆದಿದೆ.ವೇಗವಾಗಿ ಬಂದ ಕಾರು ಡಿವೈಡರ್ ಮೇಲಿನ ಬೀದಿದೀಪಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಪ್ರಜ್ವಲ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ …

Read More »

ಇನ್ನು ಮುಂದೆ ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲೂ ತುಳುಭಾಷೆ

ಮಂಗಳೂರು: ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ. ಗೂಗಲ್ ಟ್ರಾನ್ಸ್‌ಲೆಟರ್ ಆ್ಯಪ್‌ನಲ್ಲಿ ಅಪ್ಡೇಟ್ ಮಾಡಿದರೆ, ಅಥವಾ ವೆಬ್‌ಸೈಟ್‌ನಲ್ಲಿ ಸರ್ಚ್ ಮಾಡಿದ್ದಲ್ಲಿ ತುಳು ಭಾಷೆ ಸೇರ್ಪಡೆಯಾಗಿದ್ದು ಗೊತ್ತಾಗುತ್ತದೆ. ತುಳು ಭಾಷೆಗೆ ಪ್ರತ್ಯೇಕ ಲಿಪಿಯಿದ್ದರೂ, ಈ ಲಿಪಿ ಬಗ್ಗೆ ಹೆಚ್ಚಿನ ತುಳುವರಿಗೆ ಜ್ಞಾನವಿಲ್ಲ. ಸದ್ಯ ಗೂಗಲ್ ಟ್ರಾನ್ಸ್‌ಲೇಟರ್ ತುಳು ಲಿಪಿಯ ಬದಲು ಕನ್ನಡಲಿಪಿಯಲ್ಲಿ ತುಳು ಭಾಷೆಗೆ ಭಾಷಾಂತರವಾಗುತ್ತದೆ. ಇದರಿಂದ ಜಗತ್ತಿನ ಯಾವುದೇ ಭಾಷೆಯಿಂದ ತುಳು ಭಾಷೆಗೆ …

Read More »

BREAKING : ‘ಪೋಕ್ಸೋ’ ಕೇಸ್ ನಲ್ಲಿ B.S ಯಡಿಯೂರಪ್ಪಗೆ ಬಿಗ್ ರಿಲೀಫ್ ; ಮಧ್ಯಂತರ ಜಾಮೀನು ವಿಸ್ತರಣೆ..!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ಹಾಗೂ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಿ.ಎಸ್ ಯಡಿಯೂರಪ್ಪ …

Read More »

ಉಳ್ಳಾಲ: ಬಟ್ಟಪಾಡಿಯಲ್ಲಿ ಅಲೆಗಳ ಅಬ್ಬರಕ್ಕೆ ಮನೆ ಸಮುದ್ರಪಾಲು

ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ನಿನ್ನೆ ಮನೆಯೊಂದು ಸಮುದ್ರಪಾಲಾಗಿದೆ. ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಬುಧವಾರವೇ ಸ್ಥಳಾಂತರ ಮಾಡಿದ್ದರಿಂದ ಅಪಾಯ ತಪ್ಪಿದೆ. ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿರುವ ಮೂರು ಮನೆಗಳ ಕುಟುಂಬಗಳ ಸದಸ್ಯರನ್ನು ನಿನ್ನೆ ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದರಿಂದ ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ, ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್‌ ಸಹಿತ ಅಧಿಕಾರಿಗಳು ತೆರಳಿ ಬೀಫಾತುಮ್ಮ ಅವರಲ್ಲಿ ಮನೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದರು.

Read More »

ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಆಗುಂಬೆ: ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ರವಿರಾಜ್ ಎಚ್ ಪಿ ಹಾಗೂ ಶಶಿ ರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಉಡುಪಿ: ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿ ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ ವಿ ಕಾರಂತರಂತ ಶ್ರೇಷ್ಠ ಕಲಾವಿದರ ರಂಗಭೂಮಿ ಕ್ಷೇತ್ರದ ಕೊಡುಗೆ ಬಗ್ಗೆ ಮಾತನಾಡಿದರು. ತುಳುಕೂಟ ಉಡುಪಿಯ …

Read More »

You cannot copy content of this page.