ತಾಜಾ ಸುದ್ದಿ

ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಆಗುಂಬೆ: ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ರವಿರಾಜ್ ಎಚ್ ಪಿ ಹಾಗೂ ಶಶಿ ರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಉಡುಪಿ: ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿ ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ ವಿ ಕಾರಂತರಂತ ಶ್ರೇಷ್ಠ ಕಲಾವಿದರ ರಂಗಭೂಮಿ ಕ್ಷೇತ್ರದ ಕೊಡುಗೆ ಬಗ್ಗೆ ಮಾತನಾಡಿದರು. ತುಳುಕೂಟ ಉಡುಪಿಯ …

Read More »

ಮಣಿಪಾಲ: ಹೊತ್ತಿ ಉರಿದ ಕಾರು- ತಪ್ಪಿದ ಅನಾಹುತ

ಮಣಿಪಾಲ: ಕಾರೊಂದು ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ತಡರಾತ್ರಿ ಸುಮಾರು 1.35ಕ್ಕೆ ಸಂಭವಿಸಿದೆ. ಕುಂದಾಪುರದಿಂದ ಕೆಎಂಸಿ ಆಸ್ಪತ್ರೆಗೆ ಬಂದ ರೋಗಿಗಳ ಪೈಕಿಯವರ ಕಾರು ಎಂದು ತಿಳಿದು ಬಂದಿದೆ. ಇಬ್ಬರು ವ್ಯಕ್ತಿಗಳು ರಸ್ತೆ ಬದಿ (ಪರ್ಕಳದಿಂದ ಮಣಿಪಾಲಕ್ಕೆ ಬರುವ ರಸ್ತೆಯಲ್ಲಿ MIT ಬಸ್ ನಿಲ್ದಾಣಕ್ಕಿಂತ ಸ್ವಲ್ಪ ಕೆಳಗೆ ಇಳಿಜಾರಿನಲ್ಲಿ) ಕಾರನ್ನು ನಿಲ್ಲಿಸಿ ಒಳಗಡೆ ಮಲಗಿದ್ದರಂತೆ. ಬೆಂಕಿ ಹತ್ತಿಕೊಂಡದ್ದು ಗೊತ್ತಾದ ತಕ್ಷಣ ಇಬ್ಬರೂ ಹೊರಗೆ ಬಂದು ಪಾರಾಗಿದ್ದಾರೆ. ಧಗಧಗಿಸಿ ಉರಿಯುತ್ತಿದ್ದಂತೆ ಹ್ಯಾಂಡ್ ಬ್ರೇಕ್ ಮುಕ್ತವಾದ ಕಾರು ಹಿಮ್ಮುಖವಾಗಿ ಚಲಿಸಿದೆ ಎನ್ನಲಾಗಿದೆ. ಧಗಧಗಿಸುತ್ತಿದ್ದ ಕಾರು ಹಾಗೆಯೇ ರಸ್ತೆಯಲ್ಲಿ ಹಿಂದಕ್ಕೆ ಹೋಗಿದ್ದರೆ …

Read More »

ಮಣಿಪಾಲ: ಚಾಲಕನಿಗೆ ಮೂರ್ಛೆ ರೋಗ- ಹಿಮ್ಮುಖವಾಗಿ ಚಲಿಸಿದ ಬಸ್

ಉಡುಪಿ: ಮಣಿಪಾಲದಿಂದ ಹೆರ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಕೆಳಪರ್ಕಳದ ಬಳಿ ತೆರಳುತ್ತಿದ್ದಾಗ ಚಾಲಕನ ಮೂರ್ಛೆ ಬಂದಿದ್ದು ಕೂಡಲೇ ಅವರು ಸ್ಟೇರಿಂಗ್‌ ಬಿಟ್ಟಿದ್ದಾರೆ. ಈ ವೇಳೆ ಬಸ್‌ ಹಿಮ್ಮುಖವಾಗಿ ಚಲಿಸಿದೆ. ಕೂಡಲೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಹಾರಲು ಯತ್ನಿಸಿದ್ದಾರೆ. ಬಸ್‌ ತೋಡಿಗೆ ಬಿದ್ದು ಅಲ್ಲೇ ನಿಂತಿದೆ. ಸ್ವಲ್ಪ ಹಿಂದಕ್ಕೆ ತೆರಳುತ್ತಿದ್ದರೆ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ 30-40 ಮಂದಿ ಪ್ರಯಾಣಿಕರು ಇದ್ದರು. ಚಾಲಕನನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆ …

Read More »

ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ನಾಳೆಯೂ ಮಳೆಯ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದು, ಹವಾಮಾನ ಇಲಾಖೆಯಿಂದ ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿರೋದಾಗಿ ತಿಳಿಸಿದ್ದಾರೆ. ಇಂದು ದಕ್ಷಿಣ …

Read More »

ಕಾರ್ಕಳ : ಮೀನು ಮಾರುಕಟ್ಟೆ ಶೆಡ್ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ -ಮೀನು ಸಾಗಾಟದ ವಾಹನ ಜಖಂ..!

ಕಾರ್ಕಳ :  ಇಂದು ಬೆಳಗ್ಗೆ 11.15 ರ ಸುಮಾರಿಗೆ ಬೀಸಿದ ಭಾರೀ ಗಾಳಿಮಳೆಯ ಪರಿಣಾಮ ಕಾರ್ಕಳ ತಾಲೂಕಿನ ನೀರೆ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆಗೆ ಮರ ಉರುಳಿ ಬಿದ್ದು ಮೀನು ಮಾರಾಟ ಮಾಡುತ್ತಿದ್ದ ಇಬ್ಬರು ಗಾಯಗೊಂಡು, ಮಾರುಕಟ್ಟೆ ಶೆಡ್ ಹಾಗೂ ಮೀನು‌ ಸಾಗಾಟ ವಾಹನ ಜಖಂಗೊಂಡ ಘಟನೆ ನಡೆದಿದೆ.  ಮೀನು ವ್ಯಾಪಾರಿ ಭಾಸ್ಕರ ಹಾಗೂ ಎರ್ಲಪಾಡಿ ಗ್ರಾಮದ ಕಾಂತರಗೋಳಿಯ ಸುಮಿತ್ರಾ ಎಂಬವರು ಗಾಯಗೊಂಡಿದ್ದಾರೆ‌. ಘಟನಾ ಸ್ಥಳಕ್ಕೆ ನೀರೆ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ಪ್ರಭು, ಪಿಡಿಒ ಅಂಕಿತಾ ನಾಯಕ್ ಧಾವಿಸಿ ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Read More »

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಹೊಸ ಫಾರ್ಚೂನರ್ ಢಿಕ್ಕಿ..! ನಜ್ಜುಗುಜ್ಜಾದ ಕಾರು

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ ಹೊಸ ಫಾರ್ಚೂನರ್ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ ಶೋರೂಂ ನಿಂದ ಮಂಗಳೂರು ಶೋರೂಂಗೆ ಹೊಸ ಕಾರನ್ನು ಚಾಲಕ ಕೊಂಡೊಯ್ಯುತ್ತಿದ್ದನು. ನಿಟ್ಟೂರಿಗೆ ತಲುಪುತ್ತಿದ್ದಂತೆಯೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಿಟಿ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಬಸ್ ನ ಹಿಂಬದಿಗೂ ಹಾನಿಯಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಕೆಲಹೊತ್ತು …

Read More »

ಮಂಗಳೂರು : ವಿದ್ಯುತ್​ ತಂತಿ ಸ್ಪರ್ಶಿಸಿ ಆಟೋ ಚಾಲಕನ ದುರ್ಮರಣ, ರಕ್ಷಣೆಗೆ ತೆರಳಿದ ಮತ್ತೊಬ್ಬ ರಿಕ್ಷಾ ಚಾಲಕನೂ ಸಾವು

ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ರೊಸಾರಿಯೋ ಬಳಿ ನಡೆದಿದೆ. ಮೃತಪಟ್ಟ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು …

Read More »

ಉಡುಪಿ: ಧಾರಾಕಾರ ಮಳೆ: ಅಂಬಾಗಿಲು ರಸ್ತೆಯಲ್ಲಿ ಉರುಳಿದ ಮರಗಳು

ಉಡುಪಿ; ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು,ಹಲವೆಡೆ ಹಾನಿಯುಂಟಾಗಿದೆ. ಉಡುಪಿಯ ಅಂಬಾಗಿಲು ಕಲ್ಸಂಕ ರಸ್ತೆ ಮತ್ತು ಅಂಬಾಗಿಲು ಮಣಿಪಾಲ ರಸ್ತೆಗೆ ಮರಗಳು ಉರುಳಿ ಬಿದ್ದ ಘಟನೆ ಗುರುವಾರ ನಡೆದಿದೆ. ಇದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ರಸ್ತೆಯಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಇದರಿಂದ ಸಂಭಾವ್ಯ ಅಪಾಯ ತಪ್ಪಿದೆ.

Read More »

ಉಡುಪಿ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಪಷ್ಟನೆ

ಉಡುಪಿ : ಕರಾವಳಿಯ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ಬಾರೀ ಮಳೆಯಾಗುತ್ತಿದ್ದು, ಈ ಹಿನ್ನಲೆ ಈಗಾಗಲೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಇಂದು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ಇಂದು ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದರೂ, ನಿರೀಕ್ಷಿತ ಮಟ್ಟದ ಭಾರೀ ಮಳೆಯಾಗದೇ ಇರುವುದರಿಂದ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಜೂ.27) ಗುರುವಾರ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.

Read More »

You cannot copy content of this page.