ತಾಜಾ ಸುದ್ದಿ

ಸೋರುತ್ತಿದೆ ರಾಮ ಮಂದಿರದ ಗರ್ಭಗೃಹ! ಸಮಗ್ರ ತನಿಖೆಗೆ ಆಗ್ರಹಿಸಿದ ಪ್ರಧಾನ ಅರ್ಚಕರು

ಆಯೋಧ್ಯೆ: ಅಯೋಧ್ಯೆಯಲ್ಲಿ  ನಿರ್ಮಾಣವಾಗಿರುವ ರಾಮಮಂದಿರ  ಮಾಳಿಗೆ ಮೊದಲ ಮಳೆಗೆ ಸೋರುತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ  ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣೆಯಿಂದ ನೀರು ಸೋರಿಕೆಯಾಗುತ್ತಿದೆ. ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಈ ಕುರಿತು ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ …

Read More »

ಕಸಾಪ ವತಿಯಿಂದ ಕನ್ನಡ ಶಾಲೆಗೆ ಕೊಡುಗೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಹಾಗೂ ಉಡುಪರತ್ನ ಪ್ರತಿಷ್ಠಾನ ಕೊಡವೂರು ವತಿಯಿಂದ ಸರಕಾರಿ ಶಾಲೆ ಉಳಿಸಿ, ಬೆಳೆಸಿ ಅಭಿಯಾನದಲ್ಲಿ ಹಟ್ಟಿಕದ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಮಾರು ಇಪ್ಪತ್ತು ಸಾವಿರಕ್ಕೂ ಮಿಕ್ಕಿ ವೆಚ್ಚದ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರಾಘವೇಂದ್ರ ಉಡುಪ ಸಹಕಾರದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ನರೇಂದ್ರ ಉಡುಪ, ಪತ್ರಕರ್ತರು ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಕಾರ್ಯದರ್ಶಿ ಮೋಹನ ಉಡುಪ ಹಂದಾಡಿ, ಪತ್ರಕರ್ತರು, ಕಸಾಪ ಉಡುಪಿ ಘಟಕದ ಕಾರ್ಯದರ್ಶಿ ಜನಾರ್ದನ್ ಕೊಡವೂರು, ಮುಖ್ಯ …

Read More »

ಪ್ರಿಯತಮೆಯನ್ನ ಭೀಕರವಾಗಿ ಹತ್ಯೆಗೈದು, ತಾನು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿ ಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಮೂಲದ ಪ್ರಿಯತಮೆ ಹೇಮಾವತಿ (35) ಎನ್ನುವವಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಾಲ್ಕು ತಿಂಗಳ ಹಿಂದೆ ವೇಣು ಹೇಮಾವತಿಯನ್ನು ಹೊಸಕೋಟೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಇರಿಸಿದ್ದ ಎನ್ನಲಾಗಿದೆ. ಹೇಮಾವತಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು …

Read More »

ಉಪ್ಪಿನಂಗಡಿ:  2 ಕಾರುಗಳಿಗೆ ಲಾರಿ ಢಿಕ್ಕಿ- ನಾಲ್ವರು ಗಂಭೀರ

ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ. ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ ಮನೋಹರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮನೆಯವರೊಂದಿಗೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನಕ್ಕೆಂದು ಕಾರಿನಲ್ಲಿ ತೆರೆಳುತ್ತಿದ್ದ ವೇಳೆ, ಲಾರಿಯೊಂದು ಎದುರಿನಲ್ಲಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು ದೂಡಿಕೊಂದು ಬಂದು ಇವರಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದ ನಾರಾಯಣ, ದಮಯಂತಿ, ಕೂಸಮ್ಮ ಎಂಬವರಿಗೆ ಗಂಭೀರ …

Read More »

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಿನ್ನೆ ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮ ಭಾಗದಲ್ಲಿ ಬರಗಾಲವಿದ್ದು, ಮಳೆಯಾಗಿ ಸಮೃದ್ಧಿಯಿಂದ …

Read More »

ಮಣಿಪಾಲ: ಫ್ಯಾನಿಗೆ ನೇಣು ಬಿಗಿದು PHD ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಮಾನಸಿಕ ಖಿನ್ನತೆ ಒಳಗಾಗಿದ್ದ ಮಣಿಪಾಲದ ಎಂಐಟಿಯ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಎಂಐಟಿ ಕ್ವಾರ್ಟಸ್‌ನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಕೋಡಿಕಲ್ ಜೆ.ಬಿ.ಲೋಬೊ ರಸ್ತೆ ನಿವಾಸಿ ಬಸವ ಕುಮಾರ್ ಎಂಬವರ ಮಗಳು ವೈದೇಹಿ(26) ಎಂದು ಗುರುತಿಸಲಾಗಿದೆ. ಮಣಿಪಾಲದ ಎಂಐಟಿಯಲ್ಲಿ ಬಯೋ ಮೆಡಿಕಲ್ ವಿಭಾಗದಲ್ಲಿ ಪಿಎಚ್‌ಡಿ 3ನೇ ವರ್ಷದ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಇವರು, ಎಂಐಟಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ವಿದ್ಯಾಭ್ಯಾಸದ ಒತ್ತಡದಿಂದ ಎರಡು ತಿಂಗಳ ಹಿಂದೆ ಖಿನ್ನತೆಗೆ ಒಳಗಾಗಿದ್ದ ಇವರು, ಜೀವನದಲ್ಲಿ ಜಿಗುಪ್ಸೆಗೊಂಡು ಬೆಳಗ್ಗೆ 11:30 ಗಂಟೆಯಿಂದ ಸಂಜೆ 6:15 ಗಂಟೆಯ ಮಧ್ಯಾವಧಿಯಲ್ಲಿ ತಾನು …

Read More »

ಕಾರ್ಕಳ: ಬೈಕ್ ಢಿಕ್ಕಿ- ವಿದ್ಯಾರ್ಥಿನಿ ಮೃತ್ಯು..!

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ 14 (ವ). ಮೃತ ಬಾಲಕಿ.ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಅಜಾಗರೂಕತೆ ಹಾಗೂ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಪಾದಚಾರಿ ಬಾಲಕಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಮುಲ್ಲಡ್ಕ …

Read More »

ಉಡುಪಿ: ಕೃಷ್ಣಾನುಗ್ರಹ ಮಕ್ಕಳ ಕೇಂದ್ರದಲ್ಲಿ ವನಮಹೊತ್ಸವ

ಉಡುಪಿ :- ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಹಾಗೂ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಶ್ರೀ ಕೃಷ್ಣಾನುಗ್ರಹ ಮಕ್ಕಳ ಕೇಂದ್ರ ಮಮತೆಯ ತೊಟ್ಟಿಲಿನಲ್ಲಿ ವನಮಹೋತ್ಸವ ಕಾಯ೯ಕ್ರಮ ಜೂನ್.23ರಂದು ನಡೆಯಿತು. ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಸಂಸ್ಥೆಯ ಅಧ್ಯಕ್ಷ ಡಾI ಉಮೇಶ್ ಪ್ರಭು, ಪರಿಸರವನ್ನು ಚೆನ್ನಾಗಿ ಸಂರಕ್ಷಣೆ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಗಿಡಗಳನ್ನು ನೆಟ್ಟು ಪಾಲನೆ ಮಾಡಬೇಕು ಈ ಸಂಸ್ಥೆಯಲ್ಲಿ ಈ ರೀತಿಯ ಕಾಯ೯ಕ್ರಮ ಮೊದಲಾಗಿ ನಡೆಯುತ್ತಿದೆ ಎಂದರು. …

Read More »

ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ- ಡಾ.ಅಶೋಕ್

ಉಡುಪಿ: ಕನ್ನಡ ಮಾಧ್ಯಮದಲ್ಲಿ ಓದುತ್ತಿರುವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿ ಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಅಶೋಕ್ ರವರು ಹೇಳಿದರು. ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ 2024 ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ರಾಜ್ಯದ, ದೇಶದ ಮಾತ್ರವಲ್ಲ ಹೊರ ದೇಶಗಳಲ್ಲಿಯೂ ಉನ್ನತ ಹುದ್ದೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಕೆಲಸ ಮಾಡುತ್ತಿದ್ದಾರೆ. 116 ವರ್ಷಗಳ ಇತಿಹಾಸವಿರುವ …

Read More »

ಕುಂದಾಪುರ: ದೇವಸ್ಥಾನದ ಗೋಶಾಲೆಯಲ್ಲಿ ದನ ಕಳವಿಗೆ ಯತ್ನ – ಇಬ್ಬರು ಆರೋಪಿಗಳು ಅಂದರ್

ಕುಂದಾಪುರ: ಕಮಲಶಿಲೆ ದೇವಸ್ಥಾನದ ಗೋಶಾಲೆಯ ದನಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಾಜೀದ್ ಜೆ (26) ಮತ್ತು ಫೈಜಲ್ (40) ಬಂಧಿತರು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಹುಂಡೈ ಕ್ರೆಟಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Read More »

You cannot copy content of this page.