ತಾಜಾ ಸುದ್ದಿ

ಕುಂದಾಪುರ : ಕಮಲಶಿಲೆ ದೇವಸ್ಥಾನದಲ್ಲಿ ಗೋ ಕಳ್ಳತನಕ್ಕೆ ಯತ್ನ…!!

ಕುಂದಾಪುರ : ಸಿದ್ದಾಪುರ ಸಮೀಪ ಕಮಲಶಿಲೆ ದೇವಸ್ಥಾನದಲ್ಲಿ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಸೈನ್‌ ಇನ್‌ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ ಎಂದು ವಿಚಾರ ಬೆಳಕಿಗೆ ಬಂದಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ 2.46ರ ವೇಳೆಗೆ ಇಬ್ಬರು ವ್ಯಕ್ತಿಗಳು ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲ ಮೂಲಕ ನುಗ್ಗಿ ಮೂರು ಹಸುಗಳ ಹಗ್ಗವನ್ನು ಕತ್ತಿಯಿಂದ ಕಡಿದು ಸಾಗಾಟಕ್ಕೆ ಯತ್ನಿಸಿದ್ದರು. ದೇವಸ್ಥಾನದ ವತಿಯಿಂದ ಸೈನ್‌ ಇನ್‌ ಸೆಕ್ಯುರಿಟೀಸ್‌ ಸಂಸ್ಥೆಯ ಲೈವ್‌ ಮಾನಿಟರಿಂಗ್‌ ಸಿಸಿಟಿವಿ ಹಾಕಿಸಲಾಗಿದ್ದು ಈ ಸಂಸ್ಥೆ 24 ತಾಸು …

Read More »

ಮುಂದಿನ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ: ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ‘ಎಲೆಕ್ಟ್ರಾನಿಕ್’ ಯೋಜನೆ

ನವದೆಹಲಿ: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಗಳ ಪ್ರಕಾರ, ಭಾರತ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಸಾಧ್ಯತೆಯಿದೆ, ಇದು ಭಾರಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಮುಂದಿನ 5 ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್ ಉತ್ಪಾದನೆಯು ಸುಮಾರು 250 ಬಿಲಿಯನ್ ಡಾಲರ್ ತಲುಪುವ ಸಾಧ್ಯತೆಯಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದ ಪ್ರಸ್ತುತ ಎಲೆಕ್ಟ್ರಾನಿಕ್ ರಫ್ತು 125-130 ಬಿಲಿಯನ್ ಡಾಲರ್ ಆಗಿದೆ. ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ, ಭಾರತ ಸರ್ಕಾರವು ಎಲೆಕ್ಟ್ರಾನಿಕ್ ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗಗಳನ್ನು ಸೃಷ್ಟಿಸಲು ಯೋಜಿಸುತ್ತಿದೆ. ಪ್ರಸ್ತುತ, ಎಲೆಕ್ಟ್ರಾನಿಕ್ …

Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ಪೊಳಲಿ ಕಮ್ಮಾಜೆ ಸಮೀಪದ ಕಾಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಬಿ.ಸಿ. ರೋಡಿನಿಂದ ಕಲ್ಪನೆ ಮಾರ್ಗವಾಗಿ ಕೊಳತ್ತಮಜಲು ಮೂಲಕ ಮಂಗಳೂರು ಸಂಚಾರ ಮಾಡುವ ಖಾಸಗಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಬಸ್ ನೊಳಗಿದ್ದ ಇಬ್ಬರು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.ಬಸ್‌ನ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದಲ್ಲಿ ಬಸ್‌ನ ಮುಂಭಾಗದ ಗಾಜು ಪುಡಿಯಾಗಿದ್ದು, ಪ್ರಯಾಣಿಕರು ಬಸ್‌ನ ಮುಂಭಾಗದಿಂದ ಹೊರಬಂದಿದ್ದಾರೆ. ಆದಿತ್ಯವಾರ ಆದ ಕಾರಣ ಬಸ್ ನಲ್ಲಿ ಕೇವಲ ಎರಡು ಜನ …

Read More »

ಉಡುಪಿ: ಬಕ್ರೀದ್ ಸಂದರ್ಭ ಅನಧಿಕೃತ ಜಾನುವಾರುಗಳ ವಧೆ ,ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ

ಉಡುಪಿ: ಬಕ್ರೀದ್‌ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಕ್ರೀದ್‌ ಹಬ್ಬದ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಟ ಕಂಡುಬಂದಲ್ಲಿ ಹತ್ತಿರದ ಪೋಲೀಸ್‌ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ …

Read More »

ಪುತ್ತೂರು: ತಾಳಿಯನ್ನು ಮನೆಯಲ್ಲಿಟ್ಟು ವಿವಾಹಿತೆ ನಾಪತ್ತೆ..!

ಪುತ್ತೂರು: ಪುತ್ತೂರು ಸಮೀಪ ತಾಳಿಯನ್ನು ಮನೆಯಲ್ಲಿಟ್ಟು ವಿವಾಹಿತೆ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ವೆ ಗ್ರಾಮದ ಭಕ್ತಕೋಡಿಯ ಕಲ್ಲಗುಡ್ಡೆಯ ಹರೀಶ ಅವರ ಪತ್ನಿ ದೀಪಿಕಾ (23) ನಾಪತ್ತೆಯಾದವರು ಎಂದು ತಿಳಿಯಲಾಗಿದೆ. ಜೂ.13ರಂದು ಮನೆಯಿಂದ ಕಾಣೆಯಾಗಿದ್ದು ಮನೆಯ ಸುತ್ತ ಮುತ್ತಲ ಪರಿಸರ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡುಕಾಡಿದರೂ ಆಕೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೂರು ತಿಂಗಳ ಹಿಂದೆ ಕಡಬದ ಕರ್ಮಾಯಿ ನಿವಾಸಿ ಪ್ರಶಾಂತ್‌ ಜತೆಗೆ ಹೋಗಿದ್ದ ದೀಪಿಕಾ ಅವರನ್ನು ಮಂಗಳೂರಿನಲ್ಲಿ ಪತ್ತೆ ಮಾಡಿ ಅಲ್ಲಿಂದ ಕರೆದುಕೊಂಡು ಬರಲಾಗಿತ್ತು. ಈ …

Read More »

ಬೆಳ್ತಂಗಡಿ : ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಜ್ವರ ಹಾವಳಿ- ಓರ್ವ ಮೃತ್ಯು..!

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಮಲ್ನೋಡಿ ಎಂಬಲ್ಲಿಯ ನಿವಾಸಿ ದಿವಾಕರ ಶೆಟ್ಟಿ (50) ಎಂಬವರು ಡೆಂಗಿ ಜ್ವರಕ್ಕೆ ತುತ್ತಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಕಳೆದ 15 ದಿನಗಳಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ – ಅವರನ್ನು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕವಾಗಿ …

Read More »

ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ : ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ …

Read More »

ಉಪ್ಪಿನಂಗಡಿ:’ಮೀಶೋ’ ಹೆಸರಲ್ಲಿ ವಂಚನಾ ಜಾಲ- ಎಚ್ಚರಿಕೆ

ಉಪ್ಪಿನಂಗಡಿ: ಸೈಬರ್ ಕ್ರೈಮ್ ನಡಿ ಹಲವು ವಂಚನಾ ಜಾಲ ಕಾರ್ಯಾಚರಿಸುತ್ತಿದೆ. ಈಗ ‘ಮೀಶೋ’ ಹೆಸರಲ್ಲಿ ವಂಚನಾ ಜಾಲವೊಂದು ಇದೇ ಗುಂಪಿಗೆ ಸೇರಿಕೊಂಡಿದೆ. ಈ ಜಾಲವು ಈಗ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿ ನಿವಾಸಿ, ಉದ್ಯಮಿ ಜಿ.ಎಂ. ಮುಸ್ತಾಫ ಅವರಿಗೂ ಜಾಲ ಬೀಸಿದೆ. ಆದರೆ ಅವರು ಜಾಗೃತರಾಗಿದ್ದರಿಂದಾಗಿ ಅಪಾಯದಿಂದ ತಪ್ಪಿಸಿಕೊಂಡರು. ಈ ಬಗ್ಗೆ ವಿವರಿಸಿರುವ ಮುಸ್ತಾಫ, ಎಲ್ಲರೂ ಇಂತಹ ವಂಚನಾ ಜಾಲಗಳ ಬಗ್ಗೆ ಜಾಗೃತರಾಗುವಂತೆ ಎಚ್ಚರಿಸಿದ್ದಾರೆ. ನನ್ನ ಪತ್ನಿಯ ಹೆಸರಿನಲ್ಲಿ ರಿಜಿಸ್ಟರ್ಡ್ ಪೋಸ್ಟ್ ವೊಂದು ಮನೆಗೆ ಬಂದಿತು. ಅದನ್ನು ತೆರೆದು ನೋಡಿದಾಗ’ಮೀಶೋ’ಸಂಸ್ಥೆಎಂಬ ಉಲ್ಲೇಖವಿತ್ತು. ಸಂಸ್ಥೆಯ 8ನೇ …

Read More »

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ದೂರು ದಾಖಲು

ಉಳ್ಳಾಲ: ಕುತ್ತಾರು ದೆಕ್ಕಾಡಿನ ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್‌ ಆಫ್‌ ಕುತ್ತಾರು ಕೊರಗಜ್ಜ’ ಎಂಬ ಶಿರೋನಾಮೆಯಲ್ಲಿ ಖಾತೆ ತೆರೆದು ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವ ಸಂಸ್ಥೆಯ ವಿರುದ್ಧ ಸೈಬರ್‌ ಎಕಾನಾಮಿಕ್‌ ಎಂಡ್‌ ನಾರ್ಕೊಟಿಕ್‌ (ಸೆನ್‌) ಪೊಲೀಸ್‌ ಠಾಣೆಗೆ ಕುತ್ತಾರು ಆಡಳಿತ ಮಂಡಳಿ ದೂರು ನೀಡಿದೆ. ಕೊರಗಜ್ಜನ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್‌ಲೈನ್‌ ಮುಖಾಂತರ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿಲ್ಲ. ಕೊರಗಜ್ಜ ದೈವದ ಮೇಲೆ ಸಾರ್ವಜನಿಕರಿಗೆ ಇರುವ ಭಕ್ತಿಯನ್ನೇ ಪ್ರಧಾನವಾಗಿರಿಸಿಕೊಂಡು …

Read More »

ಉಡುಪಿ : ಡಿವೈಡರ್‌ಗೆ ಕಾರು ಡಿಕ್ಕಿ – ನಾಲ್ವರಿಗೆ ಗಾಯ

ಉಡುಪಿ : ಉಡುಪಿಯ ಅಂಬಾಗಿಲು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯೆಲ್ಲ ಕಾರಿನ ಬಿಡಿಭಾಗಗಳು ಹರಡಿಕೊಂಡು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ. ಇನ್ನು, ಕಾರಿನ ಇಂಜಿನ್ ಬೇರ್ಪಟ್ಟು ಮಾರುದ್ದ ಹೋಗಿ ಬಿದ್ದಿದೆ.

Read More »

You cannot copy content of this page.