ತಾಜಾ ಸುದ್ದಿ

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಎಲ್ಲಾ ಮೂರು ಅರ್ಜಿಗಳನ್ನ ಕರ್ನಾಟಕ ಹೈಕೋರ್ಟ್ ವಜಾ ಗೊಳಿಸಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಲಾಗಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ಪಾತ್ರವಿಲ್ಲ ಎಂದು ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಈಗ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಮರು ತನಿಖೆ ಕೋರಿ ಸೌಜನ್ಯ ಪೋಷಕರು ತಾಯಿ ಕುಸುಮಾವತಿ …

Read More »

ಉಡುಪಿ: ಪಡುಕೆರೆ ಬೀಚ್​ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌- ಪೊಲೀಸರ ಅಡ್ಡಿಗೆ ಯುವತಿಯ ಆಕ್ಷೇಪ

ಉಡುಪಿ : ಪಡುಕೆರೆ ಬೀಚ್‌ನಲ್ಲಿ ಯುವತಿಯೊಬ್ಬರು ಬಿಕಿನಿ ಫೋಟೋಶೂಟ್ ಮಾಡಿಸಿಕೊಳ್ಳುವ ವೇಳೆ ಪೊಲೀಸರು ತಡೆದ ಘಟನೆ ನಡೆದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಯುವತಿ, ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಎಚ್ಚರಿಕೆ ನೀಡುವಂತೆಯೂ ತಿಳಿಸಿದ್ದರು ಎನ್ನಲಾಗಿದೆ. ಸಂಭಾವ್ಯ ಸಮಸ್ಯೆಯ ಬಗ್ಗೆ ಅರಿತುಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಬಟ್ಟೆ ಬದಲಾಯಿಸುವಂತೆ ಸೂಚಿಸಿದ್ದರು. ಈ ವಿಚಾರವಾಗಿ …

Read More »

ಅರುಣ್ ಪುತ್ತಿಲ ವಿರುದ್ಧ ತೇಜೋವಧೆ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ..!

ಪುತ್ತೂರು : ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾ‌ರ್ ಪುತ್ತಿಲ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಅರುಣ್ ಕುಮಾ‌ರ್ ಪುತ್ತಿಲ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿದ್ದು, ಸಮಾಜದಲ್ಲಿ ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿದ್ದು, ನ್ಯಾಯಾಲಯವು ಯಾವುದೇ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯ ಪ್ರತಿಬಂಧಕಾಜ್ಞೆ ನೀಡಿರುತ್ತದೆ.

Read More »

ಮಂಗಳೂರು : ಮಾದಕ ವಸ್ತು MDMA ಸಾಗಾಟ ಮಾಡುತ್ತಿದ್ದ 3 ಮಂದಿಯ ಬಂಧನ

ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ …

Read More »

 ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ-ಮತ್ತಿಬ್ಬರು ಆರೋಪಿಗಳ ಬಂಧನ

ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್‌ ನೊರೋನ್ಹಾ (30) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್‌ ವಶಕ್ಕೆ ನೀಡಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್‌ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು. ಒಟ್ಟು ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.

Read More »

ಉಡುಪಿ: ಮಹಿಳೆ ಮೃತ್ಯು , ಸಾವಿನಲ್ಲಿ ಸಂಶಯ-ಠಾಣೆಯಲ್ಲಿ ಮಗಳು ದೂರು

ಉಡುಪಿ: ಮಹಿಳೆಯೊಬ್ಬರ ಸಂಶಯಾಸ್ಪದ ಸಾವಿನ ಕುರಿತು ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ತಾಯಿ ಸುಮತಿ (66) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆಂದು ಮೃತರ ಮಗಳು ದೂರಿನಲ್ಲಿ ತಿಳಿಸಿದ್ದಾರೆ‌.   ಮೃತರಿಗೆ 5 ಜನ ಮಕ್ಕಳಿದ್ದು ಅವರ ಗಂಡ 3 ವರ್ಷದ ಹಿಂದೆ ಮರಣ ಹೊಂದಿದ ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಮಕ್ಕಳು ಆಗಾಗ್ಗೆ ಬಂದು ಹೋಗುತಿದ್ದರು. ಆ.26ರಂದು ಮಗಳು ವಿಜಯ್ ಅವರು ಸುಮತಿ ರವರನ್ನು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದು ಪ್ರತಿ ನಿತ್ಯದಂತೆ ಆಗಸ್ಟ್ 27 ರಂದು ರಾತ್ರಿ 10:30 ಗಂಟೆಗೆ ತಾಯಿಗೆ ಕರೆ …

Read More »

ಉಡುಪಿ: ಅನಾಮಧೇಯ ಲಿಂಕ್‌ ಕ್ಲಿಕ್‌ ಮಾಡಿ ಲಕ್ಷಾಂತರ ರೂ ಕಳೆದುಕೊಂಡರು!

ಉಡುಪಿ: ಅನಾಮಧೇಯ ಲಿಂಕ್‌ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಮಾರ್ಕ್‌ ಪ್ರೇಮ ಕುಮಾರ್‌ ಅವರು ಫೇಸ್‌ಬುಕ್‌ನಲ್ಲಿ ಬ್ರೌಸಿಂಗ್‌ ಮಾಡುತ್ತಿದ್ದಾಗ ಕೋಟಾಕ್‌ ಸೆಕ್ಯೂರಿಟಿಯ ಲಿಂಕ್‌ ಅನ್ನು ಕ್ಲಿಕ್‌ ಮಾಡಿದ ಅನಂತರ ಯಾವುದೋ ಅನಾಮಧೇಯ ವಾಟ್ಸಪ್‌ ಗ್ರೂಪ್‌ಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಅದರಲ್ಲಿದ್ದ ವ್ಯಕ್ತಿಗಳು ಉತ್ತಮ ಸಂವಹನಕಾರರಾಗಿ ತಮ್ಮನ್ನು ಕೋಟಾಕ್‌ ಸೆಕ್ಯುರಿಟಿಸ್‌ ಪ್ರತಿನಿಧಿಗಳು ಎಂಬಂತೆ ಬಿಂಬಿಸಿಕೊಂಡಿದ್ದು ಅವರು ನೋಂದಾಯಿಸಿದ ಸೇಬಿ ನಂಬರ್‌ ಅನ್ನು ಮಾರ್ಕ್‌ ಪ್ರೇಮ ಕುಮಾರ್‌ ಅವರಿಗೆ ತೋರಿಸಿ ಲಿಂಕ್‌ ಕಳುಹಿಸಿದ್ದಾರೆ. ಅನಂತರ ಮಾರ್ಕ್‌ ಪ್ರೇಮ ಕುಮಾರ್‌ ಅವರು ಟ್ರೇಡಿಂಗ್‌ …

Read More »

ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ; ಇಬ್ಬರ ಬಂಧನ

ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ (30), ಸೂರಜ್ ರೈ(26) ಬಂಧಿತ ಆರೋಪಿಗಳು. ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಸಾಗಿಸುತ್ತಿದ್ದರು. ಇಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಕೆ.ಸಿ.ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ …

Read More »

80 ಸಾವಿರ ಮಂದಿಗೆ ಇನ್ನೂ ಬಾರದ ಜೂನ್ ತಿಂಗಳ `ಗೃಹಲಕ್ಷ್ಮಿ’ ಹಣ : ಮಹಿಳೆಯರ ಆಕ್ರೋಶ..!

ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಮತ್ತೆ ತಾಂತ್ರಿಕ ದೋಷ ಎದುರಾಗಿದ್ದು, ಸುಮಾರು 80 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿಯೋಜನೆಯ ಹಣ ತಲುಪಿಲ್ಲ. ತಾಂತ್ರಿಕ ಸಮಸ್ಯೆಯಿಂದಾಗಿ 80 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ತಲುಪಿಲ್ಲ. ಲೋಕಸಭೆ ಚುನಾವಣೆ ಬಳಿಕ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನ ಖಾತೆಗೆ ಹಾಕಿರಲಿಲ್ಲ. ಮೂರು ತಿಂಗಳ ಬಳಿಕ ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನ ಕಳೆದ ತಿಂಗಳಿನಿಂದ ಹಾಕಲಾಗುತ್ತಿದೆ. ಆದರೆ ಹಣ ಹಾಕುವಾಗ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿದ್ದು, ಒಟ್ಟು 80 ಸಾವಿರ ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿಯ ಹಣ ಖಾತೆಗೆ ಬಂದಿಲ್ಲ. …

Read More »

ಮಣಿಪಾಲ: ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು; ಮತ್ತೋರ್ವ ಗಂಭೀರ..!

ಮಣಿಪಾಲ: ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟ ವಿದ್ಯಾರ್ಥಿ ತ್ರಿವೆಂಡಮ್‌ನ ಆರೊನ್ ರೋಜರ್ ಲೀನ್(17) ಹಾಗೂ ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ ಮುಳುಗಡೆಯಾಗಿದ್ದರು. ಇದೀಗ ಆರೊನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮಾಧವ್ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಘಟನೆ ನಡೆದ ವೇಳೆ …

Read More »

You cannot copy content of this page.