ತಾಜಾ ಸುದ್ದಿ

ಕಾಪು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ- ಆರೋಪಿಯ ಬಂಧನ

ಉಡುಪಿ ಜಿಲ್ಲೆಯ ಕಾಪು ಸಮೀಪ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ 2 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ. ವಿಜಯನಗರ ಜಿಲ್ಲೆಯ ಹಟ್ಟಿ ಚಿರಾತಗುಂದ ನಿವಾಸಿ ಚೇತನ್‌ ಯಾನೆ ತಿಪ್ಪೇಶ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಕಳೆದ ವರ್ಷ ಅ.15ರಿಂದ 25ರ ನಡುವಿನ ಅವಧಿಯಲ್ಲಿ ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ್ದ. ಎರಡು ತಿಂಗಳ ಬಳಿಕ ಈ ವಿಚಾರ ಮನೆಯವರಿಗೆ ಗೊತ್ತಾಗಿ ಬಾಲಕಿಯನ್ನು ಆಸ್ಪತ್ರೆಗೆ …

Read More »

ನಟ ದರ್ಶನ್ ಗೆಳತಿ ಪವಿತ್ರಾಗೌಡ ಅರೆಸ್ಟ್‌..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್. ಆರ್ ನಗರ ಠಾಣೆ ಪೊಲೀಸರು ದರ್ಶನ್‌ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.   ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 …

Read More »

ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More »

ಬೆಳ್ತಂಗಡಿ: ವಿಚ್ಚೇದನಕ್ಕೂ ಮುನ್ನ ಎರಡನೇ ವಿವಾಹ- ಪತ್ನಿಯ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಗೆ ಕೋರ್ಟ್ ಆದೇಶ

ಬೆಳ್ತಂಗಡಿ: ವಿವಾಹ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯ ದಲ್ಲಿ ಇರುವಾಗಲೇ ಪತ್ನಿ 2ನೇ ವಿವಾಹ ವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದಗಳನ್ನು ಆಲಿಸಿದ ಬೆಳ್ತಂಗಡಿ ನ್ಯಾಯಾಲಯವು ಪತ್ನಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ. ಪಣಕಜೆ ಮುಂಡಾಡಿ ನಿವಾಸಿ ಉದಯ ನಾಯಕ್ ಅವರು ಮುಂಬಯಿಯ ಅನಿತಾ ನಾಯಕ್ ಅವರನ್ನು 2018ರಲ್ಲಿ ವಿವಾಹವಾಗಿದ್ದರು. ಒಂದು ವರ್ಷದ ಬಳಿಕ ದಾಂಪತ್ಯ ದಲ್ಲಿ ಅಡೆತಡೆ ಬಂದ ಹಿನ್ನೆಲೆ ಮಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕೆ ಮುಂದಾಗಿದ್ದರು. ಪ್ರತೀ ತಿಂಗಳು 30 ಸಾವಿರ ರೂ. ನೀಡುವಂತೆ ಪತ್ನಿ ಕೋರಿದ್ದರು. ಈಮಧ್ಯೆ ಪತ್ನಿ ಪತಿಗೆ …

Read More »

“ನಾವು ಆ ವಿಚಾರಕ್ಕೆ ವಿಚ್ಛೇದನ ಪಡೆದಿಲ್ಲ” – ಚಂದನ್‌-ನಿವೇದಿತಾ ಸ್ಪಷ್ಟನೆ

ಬೆಂಗಳೂರು : ನಾವಿಬ್ಬರೂ ಸ್ವಯಿಚ್ಛೆಯಿಂದ ವಿಚ್ಛೇದನ ಪಡೆಯುತ್ತಿದ್ದು, ನಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಸುಖಾಸುಮ್ಮನೆ ಹಬ್ಬಿಸಬೇಡಿ ಎಂದು ಚಂದನ್ ಶೆಟ್ಟಿ ಮನವಿ ಮಾಡಿದ್ದಾರೆ ವಿಚ್ಛೇದನ ಅರ್ಜಿ ಸಲ್ಲಿಸಿದ ನಂತರ ಇಂದು ಬಹಿರಂಗವಾಗಿ ಪತ್ರಿಗೋಷ್ಠಿಯಲ್ಲಿ ಮಾತನಾಡಿದ ಚಂದನ್, ಜನ ಗಾಳಿ ಮಾತುಗಳಿಗೆ ಕಿವಿಗೊಡಬೇಡಿ ಎಂದ್ರು. ನಿವೇದಿತಾ ಯಾವುದೇ ರೀತಿಯ ಜೀವನಾಂಶ ಕೇಳಲಿಲ್ಲ, ನಾನು ಕೊಟ್ಟಿಲ್ಲ, ಮಕ್ಕಳಿಗೆ ಸಂಬಂಧ ಪಟ್ಟಂತೆ ಯಾವ ಕಾರಣಕ್ಕೂ ನಮ್ಮ ವಿಚ್ಛೇದನ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ರು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರ ಎಲ್ಲೆಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. …

Read More »

ಪುತ್ತೂರು: ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆ..!

 ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ‌ ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಘಟನೆ ಸ್ಥಳಕ್ಕೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ‌ಬೆಳ್ಳಾರೆ ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More »

ಉಡುಪಿ: ಪರಿಸರ ದಿನಾಚರಣೆ

ಶ್ರೀನಿವಾಸ ನಗರ, ಕುಂಜಿಬೆಟ್ಟು ಉಡುಪಿ ಇಲ್ಲಿಯ ನಾಗರಿಕರು ತಾರೀಕು 9/6/24ರಂದು ‘ ಪರಿಸರ ದಿನಾಚರಣೆ ‘ ಯನ್ನೂ ಸಂಭ್ರಮದಿಂದ ಆಚರಿಸಿದರು. ಉಡುಪಿ ತಾಲೂಕು ಕ ಸಾ ಪ ಅಧ್ಯಕ್ಷ ಹಾಗು ವೃಕ್ಷಪ್ರೇಮಿ ಶ್ರೀ ರವಿರಾಜ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ,(4) ಹಣ್ಣಿನ ಗಿಡಗಳನ್ನು ನೆಟ್ಟರು. ಶ್ರೀನಿವಾಸ್ ನಗರದ ನಾಗರಿಕರು ವಿವಿಧ ಬಗೆಯ ಹೂವಿನ ಗಿಡಗಳನ್ನು ಉದ್ಯಾನವನದಲ್ಲಿ ನೆಟ್ಟರು.ಮನೆಗೊಂದ ರಂತೆ ಹೂವಿನ ಸಸಿಗಳನ್ನು ಹಂಚಲಾಯಿತು.ಸುಮಾರು 30ಜನರು ಭಾಗವಹಿಸಿದ್ದರು.

Read More »

ಮಂಗಳೂರು: ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿ ಅಗ್ನಿಅವಘಡ – ಅಪಾರ ನಾಶ

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕೆಟ್ ನಲ್ಲಿ ನಡೆದಿದೆ. ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ. ಮಾರುಕಟ್ಟೆ ಮೇಲೆ ಹಾಕಲಾಗಿದ್ದ ಶೀಟು, ಅಂಗಡಿಗಳಲ್ಲಿ ಆಹಾರ ಸಾಮಗ್ರಿ ಶೇಖರಣೆ ಮಾಡಿಕೊಡುವ ಕಪಾಟು, ಟೇಬಲ್ ಫ್ರೂಟ್ಸ್, ನಗದು ಸಹಿತ ಇತರ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.ಘಟನಾ …

Read More »

ಕಡಬ: ರೆಫ್ರಿಜರೇಟರ್ ಸ್ಪೋಟ- ಸುಟ್ಟು ಕರಕಲಾದ ಮನೆಯ ಉಪಕರಣ, ದಾಖಲೆ ಪತ್ರಗಳು

ಕಡಬ: ಮನೆಯಲ್ಲಿದ್ದವರು ಮನೆಯಿಂದ ಹೊರಟ ಒಂದು ಗಂಟೆಯ ಅವಧಿಯಲ್ಲಿ ಮನೆಯೊಳಗಿದ್ದ ರೆಫ್ರಿಜರೇಟರ್ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರ( ಜೂ. 9 ರಂದು) ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ 3 ಘಂಟೆ ಸುಮಾರಿಗೆ ನಡೆದಿದೆ. ಮದ್ಯಾಹ್ನದ ವೇಳೆ ಫಾರುಕ್ ಮತ್ತು ಅವರ ಪತ್ನಿ ಸಹಿತ ಮಕ್ಕಳು ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರುಕ್ ಅವರು ತಹಶಿಲ್ದಾರ್ ಕಚೇರಿ ಬಳಿ ಇರುವ …

Read More »

ಮಂಗಳೂರು: ಮೋದಿ ಪದಗ್ರಹಣ ವಿಜಯೋತ್ಸವ – ಇಬ್ಬರಿಗೆ ಚೂರಿ ಇರಿತ

ಮಂಗಳೂರು : ಪ್ರಧಾನಿ ಮೋದಿಯವರ ಪದಗ್ರಹಣದ ಹಿನ್ನಲೆಯಲ್ಲಿ ನಡೆದ ವಿಜಯೋತ್ಸವದ ಬಳಿಕ 20-25 ಮಂದಿಯ ತಂಡವೊಂದು ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ರವಿವಾರ ರಾತ್ರಿ ಚೂರಿ ಇರಿದ ಘಟನೆ ಮಂಗಳೂರು ನಗರದ ಮುಡಿಪು ಸಮೀಪದ ಬೋಳಿಯಾರು ಎಂಬಲ್ಲಿ ನಡೆದಿದೆ. ಇನ್ನೋಳಿ ನಿವಾಸಿಗಳಾದ ಹರೀಶ್ (41) ಹಾಗೂ ನಂದಕುಮಾರ್ (24 ವರ್ಷ) ಚೂರಿ ಇರಿತಕ್ಕೆ ಒಳಗಾದವರು. ಇನ್ನೋಳಿ‌ ನಿವಾಸಿ ಕೃಷ್ಣ ಕುಮಾರ್ ಎಂಬವರು ಹಲ್ಲೆಗೊಳಗಾಗಿದ್ದಾರೆ. ನಿನ್ನೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿ ಪದಗ್ರಹಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬೋಳಿಯಾರುವಿನಲ್ಲಿ ವಿಜಯೋತ್ಸವ ನಡೆದಿತ್ತು. ಈ ವೇಳೆ ಮೂವರು ಬಿಜೆಪಿ …

Read More »

You cannot copy content of this page.