ತಾಜಾ ಸುದ್ದಿ

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ ಶುರುವಾಯ್ತು ನವೋದಯ.. ತ್ರಿವಿಕ್ರಮನಂತೆ ಮೂರನೇ ಬಾರಿಗೆ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ . ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್​ ಮಂತ್ರಿಯಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.

Read More »

ಬಂಟ್ವಾಳ: ಲಾರಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತ್ಯು..!

ಬಂಟ್ವಾಳ: ಲಾರಿಯೊಂದು ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ ( 47) ಮೃತಪಟ್ಟವರು. ರಾಮನಾಯ್ಕ ಅವರು ಸ್ಕೂಟರ್ ನಲ್ಲಿ ಬಿ.ಸಿ.ರೋಡಿನಿಂದ ಮುಡಿಪು ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಕಂದೂರಿಗೆ ಬರುತ್ತಿದ್ದಂತೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಾಮ ನಾಯ್ಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಅವರ ತಲೆಗೆ ಗಂಭೀರವಾಗಿ ಗಾಯಗೊಂಡು …

Read More »

ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಜೂ.12 ಕ್ಕೆ ಅಂತಿಮ ಗಡುವು

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಮೂರು ದಿನಗಳಲ್ಲಿ ಮುಕ್ತಾಯವಾಗಲಿದೆ.   ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ …

Read More »

ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೇಜಾವರ ಸ್ವಾಮೀಜಿಗೆ ಆಹ್ವಾನ

ಉಡುಪಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯ ಪ್ರಮಾಣವಚನಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತೆಯ ನಡುವೆ ಬಿರುಸಿನ ಸಿದ್ಧತೆಗಳು ನಡೆಯುತ್ತಿದ್ದು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಆಹ್ವಾನ ಲಭಿಸಿದ್ದು ಭಾನುವಾರ ದೆಹಲಿಗೆ ತೆರಳಲಿದ್ದಾರೆ. ಶನಿವಾರ ತಡರಾತ್ರಿ ಪ್ರಧಾನ ಮಂತ್ರಿ ಕಚೇರಿಯಿಂದ ಪೇಜಾವರ ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಫೋನ್ ಕರೆ ಬಂದಿದ್ದು, ಭಾನುವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11.30ಕ್ಕೆ ನವದೆಹಲಿಗೆ ಪೇಜಾವರ ಸ್ವಾಮೀಜಿಗಳು ಹೊರಡಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ. ಪ್ರಮಾಣವಚನ ಕಾರ್ಯಕ್ರಮವು ರಾಷ್ಟ್ರಪತಿ ಭವನದ ಮುಂಭಾಗದ …

Read More »

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನಿರಾಸೆ – ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

ಬೆಂಗಳೂರು : ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕೆಂಬ ಚರ್ಚೆ ಜೋರಾಗಿಯೇ ನಡೆದಿದೆ. ಆಡಳಿತ ಪಕ್ಷದ ಶಾಸಕರು, ಮುಖಂಡರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಟೀಕಿಸಿದ ಬಿಜೆಪಿ ಪರವಾಗಿ ಜನ ಮತ ಹಾಕಿದ್ದಾರೆ. ಹೀಗಾಗಿ, ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಹೇಳಿದ್ದಾರೆ. ಜನರಿಗೆ …

Read More »

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ಪರಿಷತ್‌ ಸ್ಥಾನಕ್ಕೆ ಯಾರು?

ಮಂಗಳೂರು: ಕೋಟ ಶ್ರೀನಿವಾಸ್ ಪೂಜಾರಿ ಅವರು ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವುದರಿಂದ ಕೋಟರಿಂದ ವಿಧಾನ ಪರಿಷತ್ ಸ್ಥಾನ ತೆರವಾಗಲಿದೆ. ಹೀಗಾಗಿ ಈ ಕ್ಷೇತ್ರದ ಉಪಚುನಾವಣೆಯು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ಒಳಗೊಂಡ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ದ್ವಿಸದಸ್ಯರನ್ನು ಒಳಗೊಂಡಿದೆ. 2021ರ ಡಿಸೆಂಬರ್‌ನಲ್ಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಆಯ್ಕೆಯಾಗಿದ್ದರು. ವಿಧಾನ ಪರಿಷತ್ ಸದಸ್ಯರ ಅವಧಿ 6 ವರ್ಷ ಆಗಿರುವುದರಿಂದ ಕೋಟ ಶ್ರೀನಿವಾಸ್ ಪೂಜಾರಿ ಅವರ …

Read More »

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಯುವತಿ ನಾಗನೂರಿನಿಂದ ಬಸ್ ಹತ್ತಿ ಸ್ಟೇಟ್ ಬ್ಯಾಂಕ್ ಬಳಿ ಇಳಿದು ಬಳಿಕ ಮರೋಳಿ ಎಂಬ ಹೆಸರಿನ ಬಸ್ ನಲ್ಲಿ ಬಜಪೆ ಕಡೆ ತೆರಳುತ್ತಿದ್ದಳು. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕುಳಿತಿದ್ದ ಹಿಂಬದಿಯ ಸೀಟಿನಲ್ಲಿ ಕುಳಿತುಕೊಂಡಿದ್ದ. ಅಲ್ಲದೇ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಯುವತಿ ಈ ವಿಷಯವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ತಕ್ಷಣ …

Read More »

ಶಾಸಕ ಹರೀಶ್‌ ಪೂಂಜಾ ಬಂಧನ ಬೇಡ ಎಂದ ಹೈಕೋರ್ಟ್‌

ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ಮತ್ತು ಪೊಲೀಸರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರಕಾರದ ಹೆಚ್ಚುವರಿ ಅಭಿಯೋಜಕರು ಹೈಕೋರ್ಟ್‌ಗೆ ತಿಳಿಸಿದ್ದಾರೆ. 2 ಎಫ್‌ಐಆರ್‌ ಪ್ರಶ್ನಿಸಿ ಪೂಂಜಾ ಹೈಕೋರ್ಟ್‌ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆಯು ನ್ಯಾ.ಕೃಷ್ಣ ದೀಕ್ಷಿತ್‌ ಅವರ ಪೀಠದಲ್ಲಿ ನಿನ್ನೆ ನಡೆದಿತ್ತು. ತಮ್ಮ ಕಕ್ಷಿದಾರರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಪೂಂಜಾ ಪರ ವಕೀಲರು ಹೇಳಿದಾಗ, ಅರ್ಜಿದಾರರನ್ನು ಬಂಧಿಸದಂತೆ ಕೋರ್ಟ್‌ ಸೂಚಿಸಿದೆ.

Read More »

ಕುಂದಾಪುರ: ವೈದ್ಯೆಗೆ ಕಿರುಕುಳ : ಆರೋಪಿ ವೈದ್ಯಾಧಿಕಾರಿ ಅರೆಸ್ಟ್

ಕುಂದಾಪುರ: ತನ್ನ ಸಹೋದ್ಯೋಗಿ ವಿವಾಹಿತ ವೈದ್ಯೆಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ, ಕುಂದಾಪುರ ಸರ್ಕಾರೀ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋ ಅವರನ್ನು ಪೊಲೀಸರು ಗುಜರಾತಿನ ಲಾಡ್ಜ್ ಒಂದರಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಮೊಬೈಲ್ ಇಂಟರ್ನೆಟ್ ನೆಟ್ ವರ್ಕ್ ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಗುಜರಾತಿ ನಿಂದ ಆರೋಪಿಯನ್ನು ಪೊಲೀಸರು ರೈಲಿನಲ್ಲಿ ಕರೆತಂದಿದ್ದು ಶುಕ್ರವಾರ ರಾತ್ರಿ 10:00 ಸುಮಾರಿಗೆ ಕುಂದಾಪುರಕ್ಕೆ ಆಗಮಿಸಿದ್ದಾರೆ ಪ್ರಕರಣದ ಬಗ್ಗೆ ಆರೋಪಿಯ ವಿಚಾರಣೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮಕ್ಕೆ ಸಿದ್ಧತೆಗಳನ್ನು …

Read More »

ಉಡುಪಿ: ಹೊಂಡಕ್ಕೆ ಮಗುಚಿ ಬಿದ್ದ ಟ್ಯಾಂಕರ್

ಉಡುಪಿ: ಇಲ್ಲಿನ ಸಂತೆಕಟ್ಟೆ ಬಳಿ ಟ್ಯಾಂಕರ್ ಒಂದು ಮಗುಚಿ ಬಿದ್ದ ಘಟನೆ ಶನಿವಾರ ಮುಂಜಾನೆ ವೇಳೆ ನಡೆದಿದೆ. ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಟ್ಯಾಂಕರ್ ಬಿದ್ದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ.

Read More »

You cannot copy content of this page.