ತಾಜಾ ಸುದ್ದಿ

ಮಂಗಳೂರು: ಪಟಾಕಿ ಸಿಡಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

ಮಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ದಿನ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಕಾಂಗ್ರೇಸ್ ಕಾರ್ಯಕರ್ತ ಹಲ್ಲೆ ನಡೆಸಿದರುವ ಆರೋಪ ಕೇಳಿ ಬಂದಿದೆ. ಕುಂಪಲ ನಿವಾಸಿಯಾಗಿರುವ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಹಲ್ಲೆಗೊಳಗಾದ ವ್ಯಕ್ತಿ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿರುವ ಸ್ಥಳೀಯ ಕೇಸರಿ ಮಿತ್ರ ವೃಂದ ಸಂಘಟನೆಯ ಸದಸ್ಯ ಗೌತಮ್ ಎಂಬಾತನಿಂದ ಹಲ್ಲೆ‌ ನಡೆದಿದೆ ಎಂದು ಆರೋಪಿಸಲಾಗಿದ್ದು, ಗಾಯಾಳು ಪ್ರವೀಣ್ ಪೂಜಾರಿಯನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೂನ್ 04ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ …

Read More »

ಉಡುಪಿ : ಶಾಲಾ ಬಸ್‌ ಚಾಲನೆ ವೇಳೆ ಹೃದಯಾಘಾತ :ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ.

ಉಡುಪಿ : ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.  ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಆಲ್ವಿನ್ ಅವರು ಬಸ್‌ನನ್ನು ಸಂಪೂರ್ಣ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಚಾಲಕನನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರದ ಖಾಸಗಿ ಶಾಲೆಯಿಂದ ಮಣಿಪಾಲದತ್ತ …

Read More »

ನೀರಿಗೆ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಹೆಪ್ಪುಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಖಂಡಿತಾ !

 ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ರೋಗಗಳ ಭಯ ನಮ್ಮನ್ನು ಕಾಡುತ್ತಲೇ ಇರುತ್ತದೆ. ಅದರಲ್ಲಿಯೂ ಮಧುಮೇಹ, ಯೂರಿಕ್ ಆಸಿಡ್, ಕೊಲೆಸ್ಟ್ರಾಲ್ ನಂಥಹ ಸಮಸ್ಯೆಗಳು ಅತಿಯಾಗಿ ಬಾಧಿಸುವ ಕಾಯಿಲೆಗಳಾಗಿವೆ.ಈ ರೋಗಗಳ ಅಪಾಯವು ನಿರಂತರವಾಗಿ ಹೆಚ್ಚುತ್ತಿದೆ. ಅದು ನಮಗೆ ಆಗ ಮಾತ್ರ ತಿಳಿಯುತ್ತದೆ.ಬಿಡುವಿಲ್ಲದ ಜೀವನಶೈಲಿಯಿಂದಾಗಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಕೂಡಾ ಸಾಧ್ಯವಾಗುವುದಿಲ್ಲ. ಹೃದಯ ಸಂಬಂಧಿ ಕಾಯಿಲೆಗಳು ಕೂಡಾ ಬಾಧಿಸಲು ಆರಂಭವಾಗುತ್ತದೆ.ಕೆಟ್ಟ ಕೊಲೆಸ್ಟ್ರಾಲ್ ಒಮ್ಮೆ ಜಾಸ್ತಿಯಾಗಲು ಆರಂಭಿಸಿದರೆ ನಂತರ ಅದು ಶರ ವೇಗದಲ್ಲಿ ಹೆಚ್ಚುತ್ತಾ ಹೋಗುತ್ತದೆ.ಕೆಟ್ಟ ಕೊಲೆಸ್ಟ್ರಾಲ್‌ಗೆ ಹಲವಾರು ಔಷಧಿಗಳು ಲಭ್ಯವಿದೆ. ಆದರೆ ಮನೆ ಮದ್ದಿನ ಮೂಲಕವೂ …

Read More »

ಪಡುಬಿದ್ರಿ: ಯುವತಿ ನಾಪತ್ತೆ..!

ಪಡುಬಿದ್ರಿ: ಕಾಪು ಮಾರಿಗುಡಿ ಬಳಿ ಸ್ಕೂಟರ್ ಇಟ್ಟು ಹೋಗಿರುವ ಎರ್ಮಾಳು ಗ್ರಾಮದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಎರ್ಮಾಳು ಗ್ರಾಮದ ನಿವಾಸಿ ವರ್ಷಾ (27) ಎಂದು ಗುರುತಿಸಲಾಗಿದೆ. ಕಾಪು ಮಾರಿಗುಡಿ ಬಳಿ ಸ್ಕೂಟರ್ ಇಟ್ಟು ಹೋಗಿರುವ ಎರ್ಮಾಳು ಗ್ರಾಮದ ನಿವಾಸಿ ವರ್ಷಾ ನಾಪತ್ತೆಯಾಗಿರುವ ಬಗ್ಗೆ ಅವರ ಅಣ್ಣ ಪಡುಬಿದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಅವರ ಪತಿ ಪಾದೂರು ಐಎಸ್‌ಪಿಆರ್‌ಎಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದು, ಕೆಲಸಕ್ಕೆ ಹೋಗಿದ್ದರು. ಮನೆ ಬಿಟ್ಟು ತೆರಳುವ ವೇಳೆ ಅತ್ತೆ, ಮಾವ ಕೂಡ ಮನೆಯಲ್ಲಿ ಇರಲಿಲ್ಲ. ವರ್ಷಾ …

Read More »

ಉಡುಪಿ : ಬಿಜೆಪಿಯಿಂದ ಉಚ್ಚಾಟನೆಗೊಂಡರೂ ಪಕ್ಷ ಪ್ರೇಮ ಬಿಡದ ರಘುಪತಿ ಭಟ್ !

ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್ ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ‌. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ ಶಾಸಕ ಕೆ.ರಘುಪತಿ ಭಟ್, ಸಾಮಾಜಿಕ ಜಾಲ ತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ. ಬ್ರಜೇಶ್ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ. …

Read More »

ಎನ್‌ಡಿಎ ಜೊತೆಗೆ ಇರುತ್ತೇನೆ – ದೆಹಲಿ ಎನ್‌ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ : ಚಂದ್ರಬಾಬು ನಾಯ್ಡು

ಅಮರಾವತಿ: ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ರಾಜ್ಯದ ಜನತೆ ನೀಡಿದ ಅಭೂತಪೂರ್ವ ಬೆಂಬಲಕ್ಕಾಗಿ ಜನತೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಧನ್ಯವಾದ ಹೇಳಿದ್ದಾರೆ. ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸೋಷಿಯಲ್ ಮೀಡಿಯಾ ಪೋಸ್ಟ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಭವಿಷ್ಯಕ್ಕಾಗಿ ತಮ್ಮ ಬದ್ಧತೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂದು ಎನ್ ಡಿಎ ಮೈತ್ರಿಕೂಟಗಳ ಸಭೆ ಸಾಯಂಕಾಲ …

Read More »

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್‌

ಸುಳ್ಯ:ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಇತ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​ನ ನಾಲ್ಕನೇ ಆರೋಪಿಯನ್ನು ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ​ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ …

Read More »

ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಭರ್ಜರಿ ಗೆಲುವು

ವಾರಾಣಸಿ : ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ ಮೂರನೇ ಬಾರಿಗೆ ಮೋದಿ ವಾರಾಣಸಿ ಕ್ಷೇತ್ರದಿಂದ ದಿಗ್ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಅಜಯ್ ರೈ ವಿರುದ್ಧ ಪ್ರಧಾನಿ ಮೋದಿ ಭರ್ಜರಿ ಗೆಲುವು ಕಂಡಿದ್ದಾರೆ. 1,52, 513 ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಮೋದಿ 6,12,970 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 4,60,457 ಮತಗಳನ್ನು ಪಡೆದಿದ್ದಾರೆ.

Read More »

ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲುವು, ಅಣ್ಣಾಮಲೈ ಸೋಲು

ಬೆಂಗಳೂರು; ತಮಿಳುನಾಡಿನಲ್ಲಿ ಚುನವಣಾ ಕಣಕ್ಕೆ ಇಳಿದಿದ್ದ ಕರ್ನಾಟಕದ ಇಬ್ಬರು ಅಧಿಕಾರಿಗಳಲ್ಲಿ ಸಸಿಕಾಂತ್ ಸೆಂಥಿಲ್ ಗೆಲವುವನ್ನು ಪಡೆದರೆ ಅನ್ನಾ ಮಲೈ ಅವರು ಸೋಲನ್ನು ಕಂಡುದ್ದಾರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಅವರು ಗೆಲುವನ್ನು ಪಡೆದಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರ್ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿದಿದ್ದರು. ಇದೀಗ ಅವರು ಗೆಲುವನ್ನು ಪಡೆದುಕೊಂಡಿದ್ದಾರೆ. ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಚುನಾವಣೆಯಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿದ್ದು ಸೋಲನ್ನು ಕಂಡಿದ್ದಾರೆ. ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾ ಮಲೈ …

Read More »

You cannot copy content of this page.