ತಾಜಾ ಸುದ್ದಿ

ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ..!

ಬಂಟ್ವಾಳ: ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಕಾರಿನಲ್ಲಿ ಒಟ್ಟು ನಾಲ್ಕು ಜನಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.ಚಲಿಸುತ್ತಿದ್ದಾಗಲೇ ಮರ ಮುರಿದು ಬಿದ್ದ ಕಾರಣ ಕಾರು ಜಖಂಗೊಂಡಿದೆ. ಘಟನೆಯಿಂದ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಮುರಿದು ಬಿದ್ದಿದೆ,ಹಾಗೂ ವಿದ್ಯುತ್ ತಂತಿಗಳು …

Read More »

ಬಂಟ್ವಾಳ: ಬೈಕ್ ಢಿಕ್ಕಿ : ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಮೃತ್ಯು

ಬಂಟ್ವಾಳ : ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಸಜೀಪ ನಿವಾಸಿ ಅಲ್ತಾಫ್ (18) ಎಂದು ಗುರುತಿಸಲಾಗಿದೆ. ಬಿ.ಸಿ.ರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತ ಸಂದರ್ಭ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ರಿಕ್ಷಾದಲ್ಲಿದ್ದ ಪ್ರಯಾಣಿಕ ಅಲ್ತಾಫ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರವಾದ ಗಾಯವಾಗಿತ್ತು. …

Read More »

ಶಿರಾಡಿ ಘಾಟ್ ನಲ್ಲಿ ಕಾರು ಅಪಘಾತ: ಪಾಣೆಮಂಗಳೂರು ಮೂಲದ ತಾಯಿ, ಮಗ ಮೃತ್ಯು

ಕಂಟೈನರ್ ಲಾರಿ ಮತ್ತು ಇನ್ನೋವಾ ಕಾರು ಢಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ.   ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಢಿಕ್ಕಿ ಹೊಡೆದಿದೆ. ಅನಾರೋಗ್ಯ (ಕ್ಯಾನ್ಸರ್)ದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …

Read More »

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ-2ರ ಫಲಿತಾಂಶ

ಬೆಂಗಳೂರು: ಇಂದು ಅಂದರೆ ಮೇ 21ರಂದು(ಮಂಗಳವಾರ) ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ(Karnataka Second PUC Exam 2nd Result 2024) ಪ್ರಕಟವಾಗಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಏಪ್ರಿಲ್ 29 ರಿಂದ ಮೇ 16 …

Read More »

ಉಳ್ಳಾಲ: ಶಾಲೆಯ ಆವರಣಗೋಡೆ ಕುಸಿದು ವಿಧ್ಯಾರ್ಥಿನಿ ಸಾವು..!

ಉಳ್ಳಾಲ : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್‌– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಎಂದು ಗುರುತಿಸಲಾಗಿದೆ. ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್‌) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು. ಮಳೆಯಿಂದಾಗಿ ಆವರಣಗೋಡೆ …

Read More »

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳಿಗೂ ಸೂಚನೆ ನೀಡಲಾಗಿದ್ದು, ಈ ರೋಗಕ್ಕೆ ಸಂಬಂಧಪಟ್ಟ ಲಕ್ಷಣ ಹೊಂದಿದ ರೋಗಿಗಳು ಚಿಕಿತ್ಸೆಗೆ ಬಂದರೆ ಮಾಹಿತಿ ನೀಡಲು ಸೂಚಿಸಲಾಗಿದೆ. ಸದ್ಯಕ್ಕೆ ದ.ಕ. ಜಿಲ್ಲೆಯಲ್ಲಿ ರೋಗ ಪತ್ತೆಯಾಗದಿದ್ದರೂ ಗಡಿಭಾಗದಲ್ಲೂ ಎಚ್ಚರ ವಹಿಸಲಾಗುತ್ತಿದೆ. ಆರೋಗ್ಯ ಇಲಾಖೆಯ ಸಿಬಂದಿಗೆ ಮೇ 20ರಿಂದ ಕೆಲವು ದಿನಗಳ ಕಾಲ ತರಬೇತಿ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಡಿಎಚ್‌ಒ …

Read More »

ಕಾರ್ಕಳ: ಟಿಪ್ಪರ್‌ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ

ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಮೇ 20ರ ಬೆಳಿಗ್ಗೆ ಸಂಭವಿಸಿದೆ. ಪಳ್ಳಿ ಗರಡಿಗೆ ಸಾಗುವ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ಪರಿಣಾಮವಾಗಿ ಸ್ಕೂಟಿ ಸವಾರ ನೇಪಾಳಿ ಮೂಲದ ಕಮಲ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಸನ್ನ ಮತ್ತು ಬಚ್ಚನ್‌ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇವರಲ್ಲಿ ಓರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡಿಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀಸರು ಘಟನಾ ಸ್ಥಳಕ್ಕೆ …

Read More »

ಉಳ್ಳಾಲ: ಯುವಕನಿಗೆ ಚೂರಿ ಇರಿತ..!

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ಸಂಭವಿಸಿದೆ. ಕಿನ್ಯ ನಿವಾಸಿ ಮನೋಜ್ ಆಚಾರ್ಯ (31) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಶರತ್ ಎಂಬಾತ ಚೂರಿಯಿಂದ ಇರಿದ ಆರೋಪಿ ಎಂದು ತಿಳಿಯಲಾಗಿದೆ. ಘಟನೆ ವಿವರ: ಮನೋಜ್ ಮತ್ತು ಶರತ್ ಗೆ ಕುಟುಂಬ ಹಾಗೂ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶರತ್ ಮನೋಜ್ ಆಚಾರ್ಯ ಎಂಬಾತನನ್ನು ಆಗಾಗ ತಗಾದೆ ಎತ್ತುತ್ತಿದ್ದ. ರವಿವಾರ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮನೋಜ್ …

Read More »

ಇಂಚರ ಸರ್ಜಿಕಲ್ ಕ್ಲಿನಿಕ್ ನಲ್ಲಿ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಶ್ರೀ ಎಲ್ಲೂರು ಲಕ್ಷ್ಮೀನಾರಾಯಣರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ತಾರೀಕು 19.05.2024ರ ರವಿವಾರ ಪ್ರಬಂಧ ಸ್ಪರ್ಧೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಜರಗಿತು. ಹತ್ತನೆಯ ಹನ್ನೊಂದನೆಯ ಹಾಗೂ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶ್ರೀ ಆದಿಶಂಕರಚಾರ್ಯರ ಸಂಕ್ಷಿಪ್ತ ಜೀವನ ಚರಿತ್ರೆ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಶ್ರೀ ಶಂಕರಾಚಾರ್ಯರ ಚಿತ್ರಕ್ಕೆ …

Read More »

ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಕೋರೆಯನ್ನು ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ನಡೆಸುತ್ತಿದ್ದಾರೆ …

Read More »

You cannot copy content of this page.