ತಾಜಾ ಸುದ್ದಿ

ಮಂತ್ರಿ ಮಾಲ್ ಗೆ ಮತ್ತೆ ಬೀಗ ಜಡಿದ ಬಿಬಿಎಂಪಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಲಾಗಿದ್ದು, ಸೀಸ್ ಮಾಡಲಾಗಿದೆ ಎನ್ನಲಾಗಿದೆ. ತೆರಿಗೆ ಬಾಕಿಯನ್ನು ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆಯೇ ಬೀಗ ಜಡಿದಿದ್ದಾರೆ ಎನ್ನಲಾಗಿದೆ. ಇದಲ್ಲದೇ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನಲೆಯಲ್ಲಿ ಮಂತ್ರಿ ಮಾಲ್ ಲೈಸನ್ಸ್ ರದ್ದುಪಡಿಸಿ, ನೋಟಿಸ್ ಅಂಟಿಸಿದೆ.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದು ಬೆಳಿಗ್ಗೆ ಮಂತ್ರಿ ಮಾಲ್ ಮೇಲೆ ದಾಳಿ ನಡೆಸಿ, ಅದರ ಬಾಗಿಲುಗಳನ್ನು ಲಾಕ್ ಮಾಡಿ, ತೆರಿಗೆ ಬಾಕಿಯಿಂದಾಗಿ ಟ್ರೇಡ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿದ್ದಾರೆ. ಮಾಲ್, ಇಂತಹ …

Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಎನ್ಐಎ ಬಲೆಗೆ

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಕಲೇಶಪುರದಲ್ಲಿ ಎನ್ಐಎ ತಂಡ ವಶಕ್ಕೆ ಪಡೆದಿದೆ. ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಮುಖ ಆರೋಪಿಯಾಗಿದ್ದ ಮುಸ್ತಫಾ ಪೈಚಾರು ಸುಳಿವು ನೀಡಿದವರಿಗೆ 5 ಲಕ್ಷ ಹಣ ನೀಡುವುದಾಗಿ ಎನ್ಐಎ ಘೋಷಿಸಿತ್ತು. ಇದೀಗ ಆರೋಪಿಯನ್ನು ಇಂದು ಬೆಳಿಗ್ಗೆ ಸಕಲೇಶಪುರದಲ್ಲಿ ಎನ್ಐಎ ಅರೆಸ್ಟ್ ಮಾಡಿದೆ. 2022 ಜೂನ್ 26 ರಂದು ನಡೆದಿದ್ದ …

Read More »

ಕೋಟ: ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

ಕೋಟ: ಕುಡಿದು ಬಂದು ಪತ್ನಿಗೆ ಹೊಡೆದು ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿಯಾಗಿರುವ ಘಟನೆ ಮೇ 8ರಂದು ರಾತ್ರಿ ವೇಳೆ ನಡೆದಿದೆ. ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಶುಭಲತಾ ಎಂಬವರ ಪತಿ ದಿನೇಶ ಎಂಬಾತ ಮೇ 8ರಂದು ರಾತ್ರಿ ವಿಪರೀತ ಕುಡಿದು ಮನೆಗೆ ಬಂದು ವಿನಾಃಕಾರಣ ಅವಾಚ್ಯ ಶಬ್ದದಿಂದ ಬೈದು ಕೈಯಿಂದ ಹೊಡೆದಿದ್ದನು. ಅದಕ್ಕಾಗಿ ಶುಭಲತಾ ತನ್ನ ಮನೆ ಅಂಪಾರಿಗೆ ಹೋಗಿದ್ದರು. ಮರುದಿನ ಬೆಳಗ್ಗೆ ವಾಪಾಸ್ಸು ಮನೆಗೆ ಬಂದು ನೋಡುವಾಗ ದಿನೇಶನು ದ್ವೇಷದಿಂದ ಮನೆಗೆ ಬೆಂಕಿ ಹಚ್ಚಿರುವುದು ಕಂಡುಬಂದಿದೆ. …

Read More »

ಪಣಂಬೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಹಲ್ಲೆ; ಪ್ರಕರಣ ದಾಖಲು

ಮಂಗಳೂರು: ರಿಕ್ಷಾ ಚಾಲಕನಿಗೆ ಮಾರಕಾಸ್ತ್ರದಿಂದ ಇರಿದಿರುವ ಘಟನೆ ಪಣಂಬೂರು ಬೀಚ್‌ ರಸ್ತೆಯಲ್ಲಿ ಗುರುವಾರ ನಡೆದಿದೆ. ಮಾರಕಾಸ್ತ್ರದಿಂದ ಇರಿತಕ್ಕೆ ಒಳಗಾದವರನ್ನು ಮಂಗಳೂರು ಬಂದರ್ ನಿವಾಸಿ ಅರಾಫತ್ (30) ಎಂದು ಗುರುತಿಸಲಾಗಿದೆ‌. ಅರಾಫತ್ ಮಂಗಳೂರು ನಗರ ವಲಯದ ರಿಕ್ಷಾ ಚಾಲಕರಾಗಿದ್ದು, ನಗರದಿಂದ ಪಣಂಬೂರಿಗೆ ಬಾಡಿಗೆ ಹೋಗಿ ಪ್ರಯಾಣಿಕರನ್ನು ಬಿಟ್ಟು ಪಣಂಬೂರು ಬೀಚ್ ಬಳಿಯ ಪಾರ್ಕ್ ನಲ್ಲಿ ಬಾಡಿಗೆಗಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಅದೇ ರಿಕ್ಷಾ ಪಾರ್ಕ್‌ನಲ್ಲಿ ಬಾಡಿಗೆ ಮಾಡುತ್ತಿದ್ದ ನಾಲ್ವರು ರಿಕ್ಷಾ ಚಾಲಕರು “ಮ‌ಂಗಳೂರು ನಗರದ ರಿಕ್ಷಾ ಚಾಲಕರು ಇಲ್ಲಿ ಬಾಡಿಗೆ ಮಾಡಬಾರದೆಂದು ಆಕ್ಷೇಪಿಸಿ ಮಾರಕಾಸ್ತ್ರದಿಂದ ಇರಿದಿದ್ದಾರೆ …

Read More »

ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಮೃತ್ಯು

ಉಡುಪಿ: ಬಾವಿ ಸ್ವಚ್ಛ ಮಾಡಲು ಇಳಿದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತೊಬ್ಬನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಬುಧವಾರ ಸಂಜೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ದುರ್ಗೇಶ್ (34) ಮೃತಪಟ್ಟವರು. ಅಡಿವೆಪ್ಪ ಕುರಿ (50) ರಕ್ಷಣೆಗೊಳಗಾದವರು. ಇಬ್ಬರು ಕೂಡ ಕೊಪ್ಪಳ ಜಿಲ್ಲೆಯವರಾಗಿದ್ದು, ಬ್ರಹ್ಮಾವರದ ಸಾಲಿಕೆರೆಯಲ್ಲಿ ವಾಸಮಾಡಿಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. 35 ಅಡಿ ಆಳದ ಬಾವಿ ಅದಾಗಿತ್ತು. ಕೆಸರು ಇದೆ ಎಂದು ಬಾವಿಯೊಳಗೆ ಬ್ಲೀಚಿಗ್ ಪೌಡರ್ ಹಾಕಿ ಸ್ವಚ್ಛ ಮಾಡುತ್ತಿದ್ದರು. ಆಕ್ಸಿಜನ್ ಕೊರತೆಯಾಗಿರುವುದೇ …

Read More »

ಮಂಜೇಶ್ವರ: ಪಿಕಪ್ ಡಿಕ್ಕಿ; ಪಾದಚಾರಿ ಮೃತ್ಯು..!

ಮಂಜೇಶ್ವರ: ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಉದ್ಯಾವರ ದ ಹಮೀದ್ ( 54) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಎಸ್ಸೆಸ್ಸೆಲ್ಸಿ ಫಲಿತಾಂಶ : ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.

Read More »

ಮುಸ್ಲಿಂ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕ : ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ ಪ್ರೀತಿಸಿ ಮದುವೆಯಾದ ಹಿನ್ನೆಲೆ ಮುಸ್ಲಿಂ‌ ಸಮುದಾಯದ ಪರ ಪೊಲೀಸರು ಇದ್ದಾರೆ ಎಂದು ಆರೋಪಿಸಿ ಬಾಗಲಕೋಟೆ ನಗರದಲ್ಲಿ ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನೆ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ಹಿಂದೂ ಸಂಘಟನೆ ಪ್ರತಿಭಟನೆ ವೇಳೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನಲೆ ಹಿಂದೂ …

Read More »

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು

ಮಂಗಳೂರು: ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಗರದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಉಡುಪಿ ಜಿಲ್ಲೆಯ ನಿವಾಸಿಯಾಗಿರುವ ನಿತೇಶ್ ರಾವ್ ಕಳೆದ 2 ವರ್ಷಗಳಿಂದ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇವರು ಮಂಗಳೂರಿನ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜು ವ್ಯಾಸಂಗ ಮಾಡುತ್ತಿದ್ದರು. ಆದರೆ ಬುಧವಾರ ಬೆಳಗ್ಗೆ 10:30ರ ಸುಮಾರಿಗೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿತೇಶ್ ರಾವ್ ತಾಯಿ ಮತ್ತು …

Read More »

ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ಕ್ಲಿಕ್ಕಿಸಿದ ಇಬ್ಬರು ಯುವಕರಿಗೆ ಧರ್ಮದೇಟು..!

ಪುತ್ತೂರು ಸಮೀಪ ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ತಿಳಿದು ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ ಎಂದು ತಿಳಿಯಲಾಗಿದೆ.     ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್‌ …

Read More »

You cannot copy content of this page.