ತಾಜಾ ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ವಿಧಿವಶ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮೇ 8 ರಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕುವೆಟ್ಟು ಗ್ರಾಮದವರು. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರರಾಗಿರುವ ಬಂಗೇರರು 15 ಜನವರಿ 1946ರಂದು ಜನಿಸಿದ್ದರು. ವಸಂತ ಬಂಗೇರ ಅವರು ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಎಸ್. ಎಸ್. ಎಲ್. ಸಿ. ಯನ್ನು ಮಾಡಿದರು. ಮುಲ್ಕಿ ಮತ್ತು ಉಜಿರೆಯ …

Read More »

ಬೆಳ್ತಂಗಡಿ: ಕೌಟುಂಬಿಕ ಕಲಹ-ಸೊಸೆಯಿಂದ ಮಾವನ ಮೇಲೆ ಹಲ್ಲೆ..!

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ವ್ಯಕ್ತಿಯೋರ್ವರಿಗೆ ಸೊಸೆ ಮತ್ತು ಆಕೆಯ ತವರು ಮನೆಯವರು ಅವ್ಯಾಚ್ಯವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ಮೂಡುಕೋಡಿ ಗ್ರಾಮ, ಬೆಳ್ತಂಗಡಿಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಆರೋಪಿತೆ ಶ್ರೀಮತಿ ವಸಂತ @ ಮೋಹನಾಕ್ಷಿ ಎಂದು ಎನ್ನಲಾಗಿದೆ. ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ದೂರಿನಂತೆ, ಅವರ ಸೊಸೆ ವಸಂತ @ ಮೋಹನಾಕ್ಷಿ ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ …

Read More »

ಕಾರ್ಕಳ : ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಕಾರ್ಕಳ : ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ಸಂಭವಿಸಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು, ಒಂದು ಕಟ್ಟಡ …

Read More »

ಗವನ್ಗಾರ್ ಕುಟುಂಬದ ಹೊಸ ಆಡಳಿತ ಮಂಡಳಿಯ ಪ್ರಥಮ ಸಭೆ

ಗವನ್ಗಾರ್ ಕುಟುಂಬದ ಧಾರ್ಮಿಕ ಅನುಷ್ಠಾನ ಅಭಿವೃದ್ಧಿ ಸಾಧನ ಪ್ರತಿಷ್ಠಾನ (ರಿ) ಬುಳೇರಿಕಟ್ಟೆ ಪುತ್ತೂರು  ಕುಟುಂಬದ 2024ರ ನಂತರದ ಅವಧಿಯ ಹೊಸ ಆಡಳಿತ ಮಂಡಳಿಯ ಪ್ರಥಮ ಸಭೆಯು ದಿನಾಂಕ 05-05-2024 ರಂದು ಬುಳ್ಳೇರಿಕಟ್ಟೆಯ ಕುಟುಂಬದ ತರವಾಡು ಮನೆಯಲ್ಲಿ ನಡೆಯಿತು.ಸಭೆಯಲ್ಲಿ ಶ್ರೀಯುತ ಬಿ. ಜಯರಾಮ ನಾಯ್ಕ್ ರವರು ದಾನಪತ್ರ ರೂಪದಲ್ಲಿ ಕೊಡುವ 20ಸೆಂಟ್ಸ್ ಹಾಗೂ 10ಸೆಂಟ್ಸ್ ಕ್ರಯಪತ್ರ ಜಾಗವನ್ನು ಕುಟುಂಬದ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವ ಬಗ್ಗೆ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮಗಳ ಬಗ್ಗೆ ನಿರ್ಧಾಗಳನ್ನು ತೆಗೆದುಕೊಳ್ಳಲಾಯತು. ಸಭೆಯಲ್ಲಿ ಅಧ್ಯಕ್ಷರಾದ ಶ್ರೀ A. ಶಿವಣ್ಣ ನಾಯ್ಕ್, ಉಪಾಧ್ಯಕ್ಷರು ಶ್ರೀ …

Read More »

ಉಡುಪಿ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ

ಉಡುಪಿ: ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ನಲ್ಲಿ ಬುಧವಾರ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26) ಎಂಬ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿಯ ಯುವಕರ ಗುಂಪು ಸಮುದ್ರಕ್ಕೆ ಬಂದಿದ್ದರು. ಇವರು ಸಮುದ್ರದಲ್ಲಿ ಈಜುತ್ತಿದ್ದಾಗ ಭಾರಿ ಅಲೆಯೊಂದು ತೀರಕ್ಕೆ ಅಪ್ಪಳಿಸಿದೆ. ಪರಿಣಾಮ ಇಬ್ಬರು ಯುವಕರು ಸಮುದ್ರದ ಪಾಲಾಗಿದ್ದಾರೆ. ಬಳಿಕ ಯುವಕರನ್ನು ಜೀವರಕ್ಷಕರು ರಕ್ಷಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಅಧಿಕಾರಿಗಳು ಸಮುದ್ರ ತೀರಕ್ಕೆ ಹೋಗುವವರಿಗೆ ತೀವ್ರ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ. ಜೊತೆಗೆ ನೀರಿಗೆ …

Read More »

ಮಂಗಳೂರು: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ರಹಸ್ಯ ಚಿತ್ರೀಕರಣ; ಅಪ್ರಾಪ್ತ ಬಾಲಕ ವಶಕ್ಕೆ

ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ ಒಂದರಲ್ಲಿ ಮೊಬೈಲ್ ಇಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆದಿದೆ. ಮೇ 06ರಂದು ಮೆಡಿಕಲ್ ಕಾಲೇಜಿಗೆ ರೋಗಿಯಂತೆ ಬಂದಿದ್ದ ಅಪ್ರಾಪ್ತ ಯುವಕ ಲೇಡಿಸ್ ಟಾಯ್ಲೆಟ್‌ ಗೆ ಹೋಗಿ ಮೊಬೈಲ್ ಇಟ್ಟಿದ್ದ. ತದನಂತರ ಲೇಡಿಸ್ ಟಾಯ್ಲೆಟ್ ಒಳಗಿನಿಂದ ಮೊಬೈಲ್ ರಿಂಗ್ ಆದ ಸದ್ದು ಕೇಳಿಸಿದ್ದು ಪರಿಶೀಲನೆ ಮಾಡಿದಾಗ ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಸಿಕ್ಕ ಬಳಿಕ ಕಾಲೇಜು ಸಿಬ್ಬಂದಿ ಬಂದರು ಪೊಲೀಸ್ ಠಾಣೆಗೆ …

Read More »

ಮಂಗಳೂರು: ಮೆಡಿಕಲ್ ಕಾಲೇಜು ಲೇಡಿಸ್ ಟಾಯ್ಲೆಟ್‌ನಲ್ಲಿ ರಹಸ್ಯ ಮೊಬೈಲ್ ಇಟ್ಟು ಚಿತ್ರೀಕರಣ-ದೂರು ದಾಖಲು

ಮಂಗಳೂರು: ನಗರದ ಬಾವುಟಗುಡ್ಡ ಮುಲ್ಕಿ ಸುಂದರರಾಮ್ ಶೆಟ್ಟಿ ರಸ್ತೆಯ ಕಸ್ತೂರ್ ಬಾ ಮೆಡಿಕಲ್ ಕಾಲೇಜಿನ ಲೇಡೀಸ್ ಟಾಯ್ಲೆಟ್ ನಲ್ಲಿ ರಹಸ್ಯವಾಗಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಲಾಗಿದೆ ಎಂದು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯುರಿಟಿ ಫೀಲ್ಡ್ ಮ್ಯಾನೇಜರ್ ರಾಜು ಅವರಿಗೆ ಮೇ 06ರಂದು ಸಂಜೆ ಸುಮಾರು 3:30ರ ಸುಮಾರಿಗೆ ಒಂದನೇ ಮಹಡಿಯ ಮಹಿಳೆಯರ ಶೌಚಾಲಯದಲ್ಲಿ, ಮೊಬೈಲ್ ಫೋನ್ ರಿಂಗ್ ಆಗುತ್ತಿರುವ ಶಬ್ದ ಕೇಳುತ್ತಿದೆ ಆದರೆ ಯಾರೂ ಇಲ್ಲ ಎಂದು ಮಾಹಿತಿ ಲಭ್ಯವಾಗುತ್ತದೆ. ತಕ್ಷಣ ಅಲ್ಲಿಗೆ ಹೋಗಿ ಅವರು ಪರಿಶೀಲನೆ …

Read More »

ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಅಂಗಡಿಗಳು; ಲಕ್ಷಾಂತರ ರೂ. ನಷ್ಟ

ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸುಟ್ಟು ಕರಕಲಾದ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಕುಂದಾಪುರದ ಸಿದ್ದಾಪುರದಲ್ಲಿ ಸೋಮವಾರ ನಡೆದಿದೆ. ಅಗ್ನಿ ಅವಘಡದಿಂದ ಸ್ಪೇರ್ ಪಾರ್ಟ್ಸ್ ಅಂಗಡಿ ಅದೇ ಕಟ್ಟಡದಲ್ಲಿದ್ದ ಮಿಲ್ಕ್ ಪಾರ್ಲರ್ ಸುಟ್ಟು ಕರಕಲಾಗಿದೆ. ಜೊತೆಗೆ ಸ್ಪೇರ್ ಪಾರ್ಟ್ಸ್ ಅಂಗಡಿಯಲ್ಲಿದ್ದ ಬಿಡಿಭಾಗಗಳು, ಟಯರ್, ಆಯಿಲ್ ಡಬ್ಬಗಳು ಸೇರಿ ಹಲವು ವಸ್ತುಗಳ ಸುಟ್ಟುಹೋಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಮಿಲ್ಕ್ ಪಾರ್ಲರ್ ನಲ್ಲಿದ್ದ ಉತ್ಪನ್ನಗಳು ಫ್ರಿಡ್ಜ್‌ ಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ಅವಘಡ …

Read More »

ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ

ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ ಏಳರಂದು ಮಂಗಳವಾರ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ ಕೃತಿಗಳು ಓದುಗರನ್ನು ಸಹೃದಯಿಗಳನ್ನಾಗಿ ಮಾಡುತ್ತದೆ. ವೈಚಾರಿಕ ದೃಷ್ಟಿಕೋನ …

Read More »

ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ

ವಿಟ್ಲ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ವಿಟ್ಲ ಪೊಲೀಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದು, ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದಾರೆ.ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್ ಮಂಗಳೂರು, ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದರು.

Read More »

You cannot copy content of this page.