ತಾಜಾ ಸುದ್ದಿ

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಪ್ಲಾಟಿನಂ ಅವಾರ್ಡ್

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಪೆಕ್ಸ್ ಇಂಡಿಯಾ ಫೌಂಡೇಶನ್ ನೀಡುವ 8ನೇ ಅಪೆಕ್ಸ್ ಇಂಡಿಯಾ ಆಕ್ಯುಪೇಶನಲ್ ಹೆಲ್ತ್ ಆ್ಯಂಡ್ ಸೇಫ್ಟಿ ಅವಾರ್ಡ್ಸ್-2023 ಸಮಾರಂಭದಲ್ಲಿ ಪ್ಲಾಟಿನಂ ಪ್ರಶಸ್ತಿ ಪಡೆದುಕೊಂಡಿದೆ. ವಿಮಾನ ನಿಲ್ದಾಣವು ತನ್ನ ಉದ್ಯೋಗಿಗಳಿಗೆ ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತೆಯ ಅತ್ಯುನ್ನತ ಮಾನದಂಡ ಕಾಪಾಡಿಕೊಳ್ಳುವ ಬದ್ಧತೆಯ ದೃಷ್ಟಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ವಾಣಿಜ್ಯ ಕಾರ್ಯಾಚರಣೆಯ ದಿನಾಂಕದಿಂದ ತನ್ನ ಕಾರ್ಯಾಚರಣೆಯ ಪ್ರಯಾಣದುದ್ದಕ್ಕೂ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶೂನ್ಯ ಕೆಲಸದ ಸ್ಥಳಕ್ಕೆ ಸಂಬಂಧಿಸಿದ ಘಟನೆಗಳಿಗೆ ಒತ್ತು ನೀಡುವ ಮೂಲಕ ದೃಢವಾದ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ಜಾರಿಗೆ …

Read More »

ಮೇ 9ಕ್ಕೆ SSLC ಫಲಿತಾಂಶ ಪ್ರಕಟ

ಬೆಂಗಳೂರು: SSLC ಪರೀಕ್ಷೆ- 1ರ ಫಲಿತಾಂಶವನ್ನು ಮೇ 9ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಕ್ರೋಢೀಕರಣ ಪ್ರಗತಿಯಲ್ಲಿದೆ. ಈಗಾಗಿ ಮೇ 9ರಂದು ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಇನ್ನು SSLC ಪರೀಕ್ಷೆ – 1 ಮಾರ್ಚ್ 25ರಂದು ಪ್ರಾರಂಭಗೊಂದು ಏಪ್ರಿಲ್ 6ರವರೆಗೂ ನಡೆದಿತ್ತು. ಹಾಗೂ ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ SSLC …

Read More »

ಕ್ರಿಕೆಟ್ ಆಡುವಾಗ ಮರ್ಮಾಂಗಕ್ಕೆ ಚೆಂಡು ಬಡಿದು 11 ವರ್ಷದ ಬಾಲಕ ಮೃತ್ಯು

ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ, ಕ್ರಿಕೆಟ್ ಚೆಂಡು ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಪುಣೆ ಇಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ ಹೊಡೆದಾಗ ಶೌರ್ಯ ಎಂಬ ಬಾಲಕ ಬೌಲಿಂಗ್ ಮಾಡುತ್ತಿದ್ದ. ವೇಗವಾಗಿ ಬಂದ ಚೆಂಡು ಶೌರ್ಯನ ಮರ್ಮಾಂಗಕ್ಕೆ ಬಡಿದಿದ್ದರಿಂದ, ಆತ ಮೈದಾನದಲ್ಲೇ ಕುಸಿದು ಬಿದ್ದಿರುವುದು ವಿಡಿಯೊದಲ್ಲಿ ದಾಖಲಾಗಿದೆ. ನಂತರ ಬಾಲಕನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಆಕಸ್ಮಿಕ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

Read More »

ಮಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಂಗಳೂರು : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾಸರಗೋಡಿನ ಮಂಜೇಶ್ವರ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತಪಟ್ಟ ಕೈದಿ. 2022ರ ಡಿಸೆಂಬರ್ ಸಂದರ್ಭ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೊಣಾಜೆ ಪೊಲೀಸರಿಂದ ಅರೆಸ್ಟ್ ಆಗಿದ್ದ. ಆ ಬಳಿಕದಿಂದ ಆತ ಮಂಗಳೂರು ಜೈಲಿನಲ್ಲೇ ಇದ್ದನು. ಆತನಿಗೆ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ. ಜೈಲಿನಲ್ಲಿ ಈತ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ನೌಫಾಲ್ ನನ್ನು ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಎಪ್ರಿಲ್ 25ರಂದು ದಾಖಲಿಸಲಾಗಿತ್ತು. ಮೇ …

Read More »

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದಿದ್ದಾರೆ. ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು …

Read More »

ಬಂಟ್ವಾಳ: ಕಾರಿಗೆ ಸೈಡ್‌ ನೀಡಿಲ್ಲವೆಂದು ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ

ಬಂಟ್ವಾಳ: ಕಾರಿನ ಚಾಲಕರಿಗೆ ಸೈಡ್ ಕೊಟ್ಟಿಲ್ಲ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿ,ಬಸ್ ಗೆ ಹಾನಿಗೊಳಿಸಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಆದಿತ್ಯವಾರ ಸಂಜೆ ವೇಳೆ ನಡೆದಿದೆ. ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು ಬಸ್ ಚಾಲಕನಾಗಿದ್ದು, ಅವರ ಮೇಲೆ ಹಲ್ಲೆ ಯಾಗಿದೆ ಎಂದು ಬಂಟ್ವಾಳ ನಗರ ಪೋಲಿಸ್ ‌ಠಾಣೆಗೆ ದೂರು ನೀಡಿದ್ದಾರೆ. ಘಟನೆಯಿಂದ ಸುಮಾರು 30 ಸಾವಿರ ರೂ ನಷ್ಟ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ.ಗೆ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮಕ್ಕೆ ಕೃಷ್ಣಪ್ಪ …

Read More »

ಪಣೋಲಿಬೈಲು ಕೋಲಸೇವೆ 25ವರ್ಷಕ್ಕೆ ಬುಕ್ಕಿಂಗ್- ನಿತ್ಯವೂ ನಾಲ್ಕರ ಬದಲು 8ಕೋಲಗಳಿಗೆ ಅವಕಾಶ

ಮಂಗಳೂರು: ನಗರದ ಪ್ರಸಿದ್ಧ ಕಲ್ಲುರ್ಟಿ ಕ್ಷೇತ್ರ ಪಣೋಲಿಬೈಲು ದೈವಸ್ಥಾನದಲ್ಲಿ ಭಕ್ತರು ನೀಡುವ ಕೋಲಸೇವೆಯ ಬುಕ್ಕಿಂಗ್ ಹೆಚ್ಚಾಗಿದ್ದು, ಆದ್ದರಿಂದ ಕೋಲ ಸೇವೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಸದ್ಯ ಪಣೋಲಿಬೈಲ್ ಕ್ಷೇತ್ರದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್‌ ಆಗಿದೆ. ಭಕ್ತರಿಗೆ ಶೀಘ್ರ ಸೇವೆ ಸಂದಾಯದ ಅವಕಾಶದ ಹಿನ್ನೆಲೆಯಲ್ಲಿ ಪ್ರತೀದಿನ ನಡೆಯುತ್ತಿದ್ದ ಕೋಲದಲ್ಲಿ ಬದಲಾವಣೆ ಮಾಡಲಾಗಿದೆ. ಈವರೆಗೆ ಪ್ರತೀದಿನ 4 ಮಂದಿಗೆ ಕೋಲ ಸೇವೆ ಮಾಡಲಾಗುತ್ತಿತ್ತು. ಇದೀಗ ಅದನ್ನು 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ನೀಡಲಾಗಿದೆ. ಮೇ 3ರಿಂದಲೇ ಈ ಅವಕಾಶ ನೀಡಲಾಗಿದೆ. ಪಣೋಲಿಬೈಲು …

Read More »

ಉಡುಪಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ- ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಉಡುಪಿ: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯ ಖಾತೆಯಿಂದ ಲಕ್ಷಾಂತರ ರೂ. ಎಗರಿಸಿದ ಸೈಬರ್ ಕಳ್ಳರು!

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ. ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಾರವಾರ: ಪತಿ-ಪತ್ನಿ ನಡುವೆ ಜಗಳ- ಆರು ವರ್ಷದ ಮಗುವನ್ನು ಕಾಲುವೆಗೆ ಎಸೆದ ತಾಯಿ

ಕಾರವಾರ: ಪತ್ನಿ ಮತ್ತು ಪತಿ ನಡುವಿನ ಘರ್ಷಣೆ ವಿಕೋಪದಿಂದ ಅವರ ಮಗು ಪ್ರಾಣ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಪತಿಯೊಂದಿಗೆ ತೀವ್ರ ವಾಗ್ವಾದದಲ್ಲಿ ಪತ್ನಿ ಆರು ವರ್ಷದ ಮಗುವನ್ನು ಕಾಲುವೆಗೆ ಎಸೆದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ದಾಂಡೇಲಿ ಗ್ರಾಮಾಂತರ ಠಾಣೆ ಪೊಲೀಸರು ಮಗುವನ್ನು ಕಾಲುವೆಗೆ ಎಸೆದಿದ್ದು, ಮಗುವಿನ ಮೃತದೇಹವನ್ನು ಹೊರತೆಗೆದಿದ್ದಾರೆ. ಮಗುವಿನ ಒಂದು ಕೈಯನ್ನು ಮೊಸಳೆ ತಿಂದು ಹಾಕಿದೆ.

Read More »

You cannot copy content of this page.