ತಾಜಾ ಸುದ್ದಿ

ಉಳ್ಳಾಲ: ಕೋಮುಗಲಭೆ ವೇಳೆ ಕೊಲೆಯಾದ ರಾಜೇಶ್ ಕೋಟ್ಯಾನ್ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು:  2016ರಲ್ಲಿ ನಡೆದ ಕೋಮುಗಲಭೆ ವೇಳೆ ಉಳ್ಳಾಲದಲ್ಲಿ ಕೊಲೆಯಾದ ರಾಜೇಶ್ ಕೋಟ್ಯಾನ್ ಅಲಿಯಾಸ್‌ ರಾಜ (44) ಅವರನ್ನು ಹತ್ಯೆ ಮಾಡಿದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ತಲಾ ₹ 25 ಸಾವಿರ ದಂಡ ವಿಧಿಸಿದೆ. ಉಳ್ಳಾಲ ಆಲದ ಮರದ ಬಳಿಯ ನಿವಾಸಿ, ಚಾಲಕ ಮೊಹಮ್ಮದ್ ಆಸಿಫ್‌ ಅಲಿಯಾಸ್‌ ಆಚಿ (23), ಉಳ್ಳಾಲ ಕೋಡಿಯ ನಿವಾಸಿ ಲೋಡರ್‌ ಮೊಹಮ್ಮದ್ ಸುಹೈಲ್ ಅಲಿಯಾಸ್‌ ಸುಹೈಲ್ (20), ಕೋಡಿ ಮಸೀದಿಯ ಬಳಿಯ ನಿವಾಸಿ, ಕೂಲಿ ಕಾರ್ಮಿಕ ಅಬ್ದುಲ್ …

Read More »

ಊಟಿಗೆ ಹೋಗುವ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್; ಹೊಸ ರೂಲ್ಸ್ ಜಾರಿ; ಏನದು?

ಹನಿಮೂನ್‌ಗೆ ಬೆಸ್ಟ್‌ ಪ್ಲೇಸ್ ಅಂದ್ರೆ ಥಟ್ ಅಂತ ನೆನಪಾಗೋದು ಊಟಿ. ತಮಿಳುನಾಡಿನ ಬೆಟ್ಟಗಳ ರಾಣಿ, ನೀಲಗಿರಿ ತಪ್ಪಲಿನ ಉದಗಮಂಡಲಂ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ. ಬೇಸಿಗೆ, ಮಳೆ, ಚಳಿಗಾಲ ಎಲ್ಲಾ ಸೀಸನ್‌ನಲ್ಲೂ ಇಲ್ಲಿಗೆ ಪ್ರವಾಸಿಗರು ಭೇಟಿ ನೀಡುತ್ತಾರೆ. ಬ್ಯೂಟಿಫುಲ್‌ ಊಟಿ ಇದೀಗ ಬದಲಾಗಿದೆ. ಬರೋಬ್ಬರಿ 38 ವರ್ಷದ ಬಳಿಕ ಊಟಿಯ ತಾಪಮಾನ ಹೊಸ ದಾಖಲೆ ಬರೆದಿದೆ. ಏಪ್ರಿಲ್ ತಿಂಗಳಲ್ಲಿ ಸರಾಸರಿ ತಾಪಮಾನ 5.4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿದೆ. ಅಂದ್ರೆ 1986ರ ಬಳಿಕ ಏಪ್ರಿಲ್ ತಿಂಗಳಲ್ಲಿ ಊಟಿ ಅತ್ಯಧಿಕ ತಾಪಮಾನದ ಬಿಸಿಲಿಗೆ ಕಾರಣವಾಗಿದೆ. ಈ …

Read More »

ಉಡುಪಿ: ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ: ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

Read More »

ಇವತ್ತಿನಿಂದಲೇ 8 ಜಿಲ್ಲೆಗಳಲ್ಲಿ ವರ್ಷಧಾರೆ..! ಹವಾಮಾನ ಇಲಾಖೆ

ಬಿಸಿಲಿನ ತಾಪಕ್ಕೆ ರಾಜ್ಯದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆರಾಯನಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಯಾವಾಗ ಮಳೆ ಬರುತ್ತದೆ ಎಂದು ಜನ ಕಾಯುತ್ತಿದ್ದಾರೆ. ಮೇ 1 ರಿಂದ ಮೇ 7ವರೆಗೆ: ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಘಾಟ್‌ಗಳು, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 7 ರಿಂದ 15ರವರೆಗೆ: ಮೈಸೂರು, ಹಾವೇರಿ, ಮೈಸೂರು, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜಮಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ, ಉಡುಪಿ …

Read More »

ಉಡುಪಿ : ವಿಡಿಯೋಗ್ರಾಫರ್ ಉತ್ತಮ್ ಸಾಲಿಯಾನ್ ಅಲ್ಪಕಾಲದ ಅಸೌಖ್ಯದಿಂದ ನಿಧನ…!!

ಉಡುಪಿ : ಉದ್ಯಾವರ ಪಿತ್ರೋಡಿ ನಿವಾಸಿ, ವಿಡಿಯೋಗ್ರಾಫರ್ ಉತ್ತಮ್ ಸಾಲಿಯಾನ್(45) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದ್ದಾರೆ. ವಿಡಿಯೋಗ್ರಾಫರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಉತ್ತಮ ಅವರು ಶುಭ ಸಮಾರಂಭದ ವಿಡಿಯೋ ಚಿತ್ರೀಕರಣದ ಎಡಿಟಿಂಗ್ ವಿಭಾಗದಲ್ಲಿ ಹೆಸರುಗಳಿಸಿದ್ದರು. ನಗರದ ಬಸ್ ನಿಲ್ದಾಣ ಬಳಿ ರಿಯಾ ಡಿಟಲ್ಸ್ ಎಂಬ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Read More »

ಕಾರ್ಕಳ : ಅಪಾರ್ಟಮೆಂಟ್ ವೊಂದರ ಬೆಡ್ ರೂಮಿನಲ್ಲಿ ಯುವತಿಯ ಶವ ಪತ್ತೆ…!!

ಕಾರ್ಕಳ : ಕಾರ್ಕಳದ ಆನಂತಶಯನದ ಬಳಿ ಇರುವ ಅಪಾರ್ಟಮೆಂಟ್ ನಲ್ಲಿ ಬಾಡಿಗೆಗೆ ವಾಸವಾಗಿದ್ದ   ಯುವತಿಯೊರ್ವಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ಯುವತಿಯನ್ನು  ವಿಜಯ (23) ಎಂದು ಗುರುತಿಸಲಾಗಿದೆ. ವಿಜಯ ಸುಮಾರು 10 ವರ್ಷಗಳಿಂದ ಅಸ್ತಮಾ ಹಾಗೂ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ವಿಜಯರವರ ತಂದೆ ಆಗಾಗ ಅಪಾರ್ಟ್ ಮೆಂಟ್ ಗೆ ಹೋಗುತ್ತಿದ್ದು, ಎ.30 ರಂದು ಬೆಳ್ತಂಗಡಿ ಮೂಲದ ಅವರ ಅಕ್ಕ ಹಾಗೂ  ತಂದೆ ಆನಂದ ಅಪಾರ್ಟಮೆಂಟ್ ಗೆ ಬಂದು  ಬೆಡ್ ರೂಮಿನಲ್ಲಿ ನೋಡಿದಾಗ ಮಗಳು  ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಕಾರ್ಕಳ …

Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ : ತಾಯಿ ಮಗಳ ಜಗಳ ಕೊಲೆಯಲ್ಲಿ ಅಂತ್ಯ..!!

 ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಸಾಹಿತಿ ಪಾಸ್ ಆಗಿದ್ದಾಳೆ. ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. Ee ವಿಷಯದಲ್ಲಿ ಪುತ್ರಿ ಹಾಗೂ ತಾಯಿ ಪದ್ಮಜಾ ನಡುವೆ ವಾಗ್ವಾದ ನಡೆದಿದೆ. ಬಳಿಕನೂ ಇದೇ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ನಡೆದ ಜಗಳ ತಾರಕಕ್ಕೇರಿ …

Read More »

ಸುಳ್ಯ: ಮರ ಕಡಿಯುವ ವೇಳೆ ದುರಂತ-ಮೃತ್ಯು..!

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

Read More »

ಮಂಗಳೂರು: ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ವರದಿ

ಮಂಗಳೂರು: ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ. ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ …

Read More »

BIG NEWS : ಕೋವಿಡ್ -19 ಲಸಿಕೆ ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು : ಕೋರ್ಟ್​ ಮುಂದೆ ಸತ್ಯ ಒಪ್ಪಿಕೊಂಡ ಕಂಪನಿ!

ನವದೆಹಲಿ : ಅಸ್ಟ್ರಾಜೆನೆಕಾ ಮಹತ್ವದ ತಿರುವಿನಲ್ಲಿ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆಯನ್ನು ಜಾಗತಿಕವಾಗಿ ಕೋವಿಶೀಲ್ಡ್ ಮತ್ತು ವ್ಯಾಕ್ಸ್ಜೆವ್ರಿಯಾ ಎಂಬ ಬ್ರಾಂಡ್ ಹೆಸರುಗಳಲ್ಲಿ ಮಾರಾಟ ಮಾಡಲಾಯಿತು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ-ಕ್ರಮ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ. ಕಂಪನಿಯ …

Read More »

You cannot copy content of this page.