ತಾಜಾ ಸುದ್ದಿ

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌ ದಾಖಲು

2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 30.96% ದಾಖಲಾಗಿದೆ.

Read More »

ಧರ್ಮಸ್ಥಳದ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ ವಿರೇಂದ್ರ ಹೆಗ್ಗಡೆ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಇಂದು ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ. ಧರ್ಮಸ್ಥಳದ ಎಸ್ ಡಿ ಎಮ್ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ವೀರೇಂದ್ರ ಹೆಗ್ಗಡೆಯವರ ತಮ್ಮ ಹರ್ಷೇಂದ್ರ ಕುಮಾರ್ ಹಾಗೂ ದಂಪತಿ ಭಾಗಿಯಾಗಿದ್ದರು.

Read More »

ಸುಳ್ಯ : MDMA ಸಾಗಾಟ, ಸುಳ್ಯದ ಇಬ್ಬರು ಯುವಕರ ಬಂಧನ

ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು ಹೊಂದಿದ್ದರು ಎನ್ನಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಕೇರಳ ಮಾನಂದವಾಡಿಯಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂಬುವರನ್ನು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ ಖರೀದಿಸಿದ್ದ ಎಂಡಿಎಂಎ ಯನ್ನು …

Read More »

ಮೋದಿ ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

ಉಡುಪಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟುಗಳನ್ನು ನಿಶ್ಚಿತವಾಗಿ ಗೆಲ್ಲ ಲಿದ್ದು, ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸೋಣ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. ಬ್ರಹ್ಮಾವರದ ಆಕಾಶವಾಣಿಯಿಂದ ಬಸ್‌ ನಿಲ್ದಾಣದ ವರೆಗೆ ನಡೆದ ರೋಡ್‌ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಭಾರೀ ಮಹತ್ವದ ಚುನಾವಣೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರಕ್ಕೆ …

Read More »

ಲೋಕಸಭಾ ಚುನಾವಣೆ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಕಾಪು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ 121ನೇ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ, ಉಡುಪಿ ಎಸ್ಪಿ ಅರುಣ್ ಕೆ., ಜಿ.ಪಂ. ಸಿಇಒ ಪ್ರತೀಕ್ ಬಾಯಲ್ , ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಯ ಮಾಧವ, ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಮಸ್ಟರಿಂಗ್ ಕೇಂದ್ರ ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ಆವರಣದಲ್ಲಿ ಸಿದ್ದತೆಗಳು ನಡೆದವು. ಕಾಪು ವಿಧಾನ ಸಭಾ ಕ್ಷೇತ್ರದ 209 ಬೂತ್ ಗಳಲ್ಲಿ ಸುಸೂತ್ರವಾಗಿ ಚುನಾವಣಾ ಪ್ರಕ್ರಿಯೆಗಳಿಗಾಗಿ 1715 ಮಂದಿ ಅಧಿಕಾರಿಗಳು ಮತ್ತು ಸಿಬಂದಿಗಳನ್ನು …

Read More »

ಯಕ್ಷಗಾನದ ಗಾನಕೋಗಿಲೆ, ಜನಪ್ರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನು ನೆನಪು ಮಾತ್ರ

ಉಡುಪಿ:  ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67) ಇನ್ನು ನೆನಪು ಮಾತ್ರ. ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು. ಬಡಗುತಿಟ್ಟು ಯಕ್ಷಗಾನ ಅಭಿಮಾನಿಗಳಲ್ಲಿ ಅವರು ‘ಗಾನಕೋಗಿಲೆ’ ಎಂದೇ ಜನಪ್ರಿಯರಾಗಿದ್ದರು. ಭಾಗವತರ ಅಂತ್ಯಕ್ರಿಯೆಯು ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ …

Read More »

ಧರ್ಮಸ್ಥಳ: ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು!

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಸೇರಿ 8 ಜನ ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯ‌ರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ …

Read More »

ಮಂಗಳೂರು : ಹಿಂದೂ ಜಾಗರಣ ವೇದಿಕೆ ಮುಖಂಡ ಅಕ್ಷಯ್ ರಜಪೂತ್ ಬಂಧನ – ಗಡಿಪಾರು

ಮಂಗಳೂರು : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ ಎಂದು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ. ಸದ್ಯ ಅಕ್ಷಯ್ ಅವರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ‌ ಲಭ್ಯವಾಗಿದೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ .

Read More »

ಮಂಗಳೂರು: ಮತದಾರರು ಮತಗಟ್ಟೆಗೆ ಬರುವಾಗ ಮೊಬೈಲ್ ತರುವಂತಿಲ್ಲ – ಡಿಸಿ

ಮಂಗಳೂರು: ಮತ ಚಲಾವಣೆಗೆ ಮತಗಟ್ಟೆಗೆ ಬರುವ ಮತದಾರರು ಮೊಬೈಲ್ ಪೋನ್ ಅನ್ನು ತರುವಂತಿಲ್ಲ ಎಂದು ದ.ಕ.ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಚುನಾವಣಾ ಆಯೋಗದ ನಿಯಮದಂತೆ ಮತದಾರರು ಮತ ಚಲಾಯಿಸಲು ಬರುವಾಗ ಮೊಬೈಲ್ ಪೋನ್ ತರುವಂತಿಲ್ಲ. ಮೊಬೈಲ್ ನೊಂದಿಗೆ ಮತಗಟ್ಟೆಯೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ. ಒಂದು ವೇಳೆ ಮೊಬೈಲ್ ತಂದಲ್ಲಿ ಅದನ್ನು ಸೇಫ್ ಡೆಪಾಸಿಟ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಆದರೆ ಮತ್ತೊಂದು ಸರತಿ ಸಾಲು ಆಗುವ ಬದಲು ಮತದಾರರು ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬರುವುದು ಉತ್ತಮ …

Read More »

ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ-ಮುಸ್ಲಿಂ ಯುವಕನ ಬರ್ಬರ ಹತ್ಯೆ

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ. ಖಾದರ್ ಭಾಷಾ (28) ಕೊಲೆಯಾದ ವ್ಯಕ್ತಿ. ಮಾರುತಿ ಹತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀಭತ್ಸವಾಗಿ ಹತ್ಯೆ ಮಾಡಿದ್ದಾನೆ. ಕೊಲೆಗೈದ …

Read More »

You cannot copy content of this page.