ತಾಜಾ ಸುದ್ದಿ

ಭಟ್ಕಳ: ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ, 4 ಮೀನುಗಾರರ ರಕ್ಷಣೆ

ಭಟ್ಕಳ: ಕರಾವಳಿ ಜಿಲ್ಲೆ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಈ ಮಧ್ಯೆ ಭಟ್ಕಳ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಗಾಳಿ ಮಳೆಗೆ ಈ ಮೀನುಗಾರಿಕಾ ಬೋಟ್  ಶನಿವಾರ ಬೆಳಗ್ಗೆ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.  ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ‘ಓಂ ಮಹಾಗಣಪತಿ’ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್​ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆಯಾಗಿರುವ ಬೋಟ್, ಮಹಾದೇವ ಖಾರ್ವಿ ಎಂಬವರಿಗೆ …

Read More »

ಉಳ್ಳಾಲ ಬೀಚ್ ನಲ್ಲಿ ಮರಳಿನ‌ ಆಕೃತಿ ಮೂಲಕ ಮತದಾನ ಜಾಗೃತಿ

ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ‌ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಕೆ ಐಎಎಸ್ ಅವರು ಬೆಲೂನ್ …

Read More »

ಉಪ್ಪಿನಂಗಡಿ: ಬಾಲಕ ನೇಣು ಬಿಗಿದು ಆತ್ಮಹತ್ಯೆ..!

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂದು ಗುರುತಿಸಲಾಗಿದೆ. ಪಂಜದ ದಿವಂಗತ ರೋಹಿತ್ ಗೌಡ ಎಂಬವ ರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ …

Read More »

ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ..!

ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು ದಿನಾಂಕ:19.04.2024ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಸೌದೆಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ …

Read More »

ಎಡಪದವು: ಲಾರಿ ಬ್ರೇಕ್ ಫೇಲ್- ಭೀಕರ ಸರಣಿ ಅಪಘಾತ

ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದ್ದು, ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ.ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದರೆ,ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ …

Read More »

ಪುತ್ತೂರು: ಶಾಲೆಯ ಜಗಲಿಯಲ್ಲಿ ವ್ಯಕ್ತಿ ನೇಣು ಬಿಗಿದುಆತ್ಮಹತ್ಯೆ..!

ಪುತ್ತೂರು: ಶಾಲೆಯ ಜಗಲಿಯಲ್ಲಿಯೇ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಮುಕ್ವೆಯಲ್ಲಿ ನಡೆದಿದೆ. ಮುಕ್ವೆ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಇದೇ ವೇಳೆ ಶಾಲೆಯ ಹಿಂಬದಿ ತೆರಳಿದಾಗ ವ್ಯಕ್ತಿಯೋರ್ವ ಶಾಲಾ ವಠಾರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ಮಂಗಳೂರು: ಮತಗಟ್ಟೆಗಳಲ್ಲಿ ವರ್ಣ ಚಿತ್ತಾರ

ಎಲ್ಲೆಡೆ ಚುನಾವಣೆ ಕಾವು ಹೆಚ್ಚಾಗುತ್ತಾ ಇದೆ. ಇತ್ತ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಗಳೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಯಕ್ಷಗಾನ, ಕಂಬಳ, ಹಸಿರು, ಸಾಂಪ್ರದಾಯಿಕ, ಸಖಿ, ಯುವ ಹಾಗೂ ವಿಶೇಷ ಚೇತನ ಥೀಮ್‌ ಆಧಾರಿತ ಮತಗಟ್ಟೆಗಳು ಸಜ್ಜಾಗಿದೆ. ತಾಲೂಕಿನ 202 ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ, 203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 18 ಮತಗಟ್ಟೆಗಳನ್ನು ಬಣ್ಣ ಬಣ್ಣದ ಚಿತ್ತಾರದ ಮೂಲಕ ಶೃಂಗಾರಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಿರಿಯ …

Read More »

ಉಡುಪಿ -ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ. ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದರು. ಬೈಕ್ ನಲ್ಲಿದ್ದ ಸಹಸವಾರ ತೀವ್ರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

ದಿ.ಮೇಟಿ ಮುದಿಯಪ್ಪ ಯುವ ಕಥಾ ಸ್ಪರ್ಧೆ- ಡಾ.ನಮ್ರತಾ ಬಿ ಪ್ರಥಮ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮೃತಾ ಬಿ. ಅವರು ಪ್ರಥಮ ಬಹುಮಾನದೊಂದಿಗೆ ಆಯ್ಕೆಯಾಗಿರುತ್ತಾರೆ. ಬಹುಮಾನವು ನಗದು ರೂಪಾಯಿ 5000 ಹಾಗೂ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ. ದ್ವಿತೀಯ ಬಹುಮಾನ ನಗದು ಮೂರು ಸಾವಿರದೊಂದಿಗೆ ಡಾ. ಜಿ.ಪಿ. ನಾಗರಾಜ್ ಆಯ್ಕೆಯಾಗಿರುತ್ತಾರೆ., ತೀರ್ಪುಗಾರರ ಮೆಚ್ಚುಗೆ ಬಹುಮಾನಕ್ಕಾಗಿ ರಾಮಾಂಜಿ ನಮ್ಮಭೂಮಿ, ಮಂಜುನಾಥ ಕಾರ್ತಟ್ಟು ಹಾಗೂ ಮಂಜುನಾಥ ಹಿಲಿಯಾಣ ಆಯ್ಕೆಯಾಗಿರುತ್ತಾರೆ. ಪ್ರಸಿದ್ಧ ಕಥೆಗಾರ ಡಾ. …

Read More »

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವು

ಉಡುಪಿ ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್‌ಎಚ್‌) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದ್ದು, ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾಗಿ ರಸ್ತೆಯನ್ನು ಏಕ ಪಥಕ್ಕೆ ಇಳಿಸಿದ ಘಟನೆ ನಡೆದಿದೆ. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃಷ್ಣ ಅವರು ಉಡುಪಿ ನಗರ ಪಾಲಿಕೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು …

Read More »

You cannot copy content of this page.