ತಾಜಾ ಸುದ್ದಿ

ಬಂಟ್ವಾಳ; ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ ರಾತ್ರಿ ನಡೆದಿದೆ.ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿ ರವಿ ಚೂರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು …

Read More »

ಉಡುಪಿ: ಆನ್‌ಲೈನ್‌ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

ಉಡುಪಿ: ಆನ್‌ಲೈನ್‌ ಮೂಲಕ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ದೂರು ದಾಖಲಾಗಿದೆ. ವೀಣಾ ಎಂಬವರ ವಾಟ್ಸಾಪ್‌ ಸಂಖ್ಯೆಗೆ “ನೀವು ಒಂದು ಗೂಗಲ್‌ ರಿವ್ಯೂ ಮಾಡಿದರೆ 50 ರೂ. ನೀಡಲಾಗುವುದು ಎಂಬ ಸಂದೇಶ ಬಂದಿತ್ತು. ಅದನ್ನು ನಂಬಿದ ಅವರು ಗೂಗಲ್‌ ರಿವ್ಯೂ ಮಾಡಿದ್ದು, ಮೊದಲು 150 ರೂ. ಪಡೆದಿದ್ದರು.ಅನಂತರ ಆರೋಪಿಯು ವೀಣಾರಿಗೆ ವಿವಿಧ ಟಾಸ್ಕ್ ಗಳನ್ನು ನೀಡಿ ನಂಬಿಸಿ ಒಟ್ಟು 2,21,000 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನೇಣಿಗೆ ಶರಣು..!

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಮತ್ತು ಜರಟ್ ಲ್ಯಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿನ ಕುಣಿಯಲ್ಲಿ ನೇತಾಡುತ್ತಿದ್ದ ಜಗದೀಶರನ್ನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿತ್ತು.‌ ಆದ್ರೆ ಆಸ್ಪತ್ರೆ ಸೇರಿಸೋ‌ ಮೊದಲೆ ಜಗದೀಶ್ ಉಸಿರು ಚೆಲ್ಲಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಕ್ಲಬ್ ರಸ್ತೆಯಲ್ಲಿರೋ ನಿವಾಸದಲ್ಲಿ ಸೌಂದರ್ಯ ಜಗದೀಶ್ ಸೂಸೈಡ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೇರೆ ಬೇರೆ ಉದ್ಯಮಗಳಲ್ಲಿ ತೊಡಗಿಸಿಕೊಂಡಿದ್ದ ಸೌಂದರ್ಯ ಜಗದೀಶ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ರು ಎಂದು ಹೇಳಲಾಗ್ತಿದೆ. ಅಪ್ಪು ಪಪ್ಪು ಸಿನಿಮಾದಲ್ಲಿ ತಮ್ಮ ಮಗನನ್ನೇ ಪರಿಚಯಿಸಿದ್ದ ಸೌಂದರ್ಯ ಜಗದೀಶ್ ರಾಮ್ ಲೀಲಾ, …

Read More »

ನವದೆಹಲಿ : ‘ಮೋದಿ ಕಿ ಗ್ಯಾರಂಟಿ’ ಬಿಜೆಪಿ ಪ್ರಣಾಳಿಕೆ ಬಿಡುಗಡೆ- ಹೈಲೈಟ್ಸ್‌ ಇಲ್ಲಿದೆ ನೋಡಿ

ನವದೆಹಲಿ ; ಅಂಬೇಡ್ಕರ್ ಜಯಂತಿಯಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಸಾರ್ವತ್ರಿಕ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಭಾನುವಾರ ಮಂಡಿಸಿದೆ. ‘ಮೋದಿ ಕಿ ಗ್ಯಾರಂಟಿ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಡುಗಡೆಮಾಡಿದೆ. ಬಿಜೆಪಿ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳು: 1.ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ ಪಟ್ಟಿಯನ್ನು ತರಲಿದೆ. 2.ಬಡವರಿಗೆ ಉಚಿತ ಪಡಿತರ, ನೀರು ಮತ್ತು ಗ್ಯಾಸ್ ಸಂಪರ್ಕ. 3.ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ಬರಲಿದೆ. 4.ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ 5.3 …

Read More »

ಬೋರ್ನ್ ವಿಟಾ ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ಅಲ್ಲ..!

ನವದೆಹಲಿ : ಮಕ್ಕಳಿಗೆ ಕುಡಿಸುವ ಬೋರ್ನ್ ವಿಟಾ ಇನ್ನು ಮುಂದೆ ಹೆಲ್ತ್ ಡ್ರಿಂಕ್ಸ್ ವರ್ಗದಿಂದ ತೆಗೆದು ಹಾಕುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ. ಕಾರಣ ಏನು… ಒಬ್ಬ ಯುಟ್ಯೂಬರ್ ಬೋರ್ನ್ ವೀಟಾದಲ್ಲಿ ಹೆಚ್ಚಿನ ಪ್ರಮಾಣ ಸಕ್ಕರೆ ಅಂಶ ಇರುವ ಬಗ್ಗೆ ವಿಡಿಯೋ ಮಾಡಿದ್ದ, ಅಲ್ಲದೆ ಪ್ರಯೋಗ ಮೂಲಕ ಆತ ಅದನ್ನು ತೋರಿಸಿದ್ದ. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ನ್ಯಾಷನಲ್ …

Read More »

ಮಂಗಳೂರು : ಜನಾರ್ಧನ ಪೂಜಾರಿ ಅಂತಹ ನಾಯಕರೇ ನಿಂತಾಗ ಈ ಜಿಲ್ಲೆಯ ಜನ ಜಾತಿಯನ್ನು ನೋಡಿಲ್ಲ-ಉಮಾನಾಥ ಕೋಟ್ಯಾನ್

ಮಂಗಳೂರು : ಜನಾರ್ಧನ ಪೂಜಾರಿ ಅಂತಹ ನಾಯಕರೇ ನಿಂತಾಗ ಈ ಜಿಲ್ಲೆಯ ಜನ ಜಾತಿಯನ್ನು ನೋಡಿಲ್ಲ ಹಾಗಿರುವಾಗ ಈ ಬಾರಿ ಜಾತಿ ನೋಡುತ್ತಾರೆ ಎಂಬ ವಿಶ್ವಾಸವಿದೆಯೇ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮುಲ್ಕಿಯಲ್ಲಿ ನಾನು ಹೇಳಿಕೆ ಕೊಟ್ಟಿದ್ದು, ಬಿಲ್ಲವ ರಾಷ್ಟ್ರೀಯ ಸಮಾವೇಶದಲ್ಲಿ, ಅಲ್ಲಿ ಜಾತಿ ವಿಷಯ ಮಾತನಾಡಬೇಕಾಗಿದ್ದು ನನ್ನ ಕರ್ತವ್ಯ, ನಾನು ಸಮಾಜದ ಒಬ್ಬ ಪ್ರತಿನಿಧಿಯಾಗಿ ಅಲ್ಲಿ ಮಾತನಾಡಿದ್ದೇನೆ. ಇಲ್ಲಿ ನಾನು ಮಾತನಾಡಬೇಕಿರುವುದು ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ, ಶಿಸ್ತಿನ ಸಿಪಾಯಿಯಾಗಿ, …

Read More »

ಮಂಗಳೂರು  : ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ..!

ಮಂಗಳೂರು  : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ ಆಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುನಿಲ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ನಾಳೆ ಸಂಜೆ 7.45 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಆರಂಭವಾಗಿ ನವಭಾರತ್ …

Read More »

ಮಂಗಳೂರು : ರೈಲಿನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ದೂರು

ಮಂಗಳೂರು : ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್‌ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ವರದಿಯಾಗಿದೆ. ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ದೆ, ಅವರ ಪುತ್ರಿ ಮತ್ತು ಇಬ್ಬರು ಮೊಮ್ಮಕ್ಕಳು ಎ.7ರಂದು ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಹೊರಟಿದ್ದು, ಎ.8ರಂದು ಬೆಳಗ್ಗೆ ಮನೆಗೆ ತಲುಪಿದಾಗ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟಿದ್ದ ಎರಡು ಬಳೆಗಳು, ಸರ ಸಹಿತ 59.885 ಗ್ರಾಂ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ರೈಲ್ವೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Read More »

ಮಂಗಳೂರು: ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ: ಫ್ಯಾಕ್ಟರಿಗೆ ಬೀಗ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಏಳನೀರು ಫ್ಯಾಕ್ಟರಿಯ ಎಳನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಎ.8 ರಂದು ಎಳನೀರು ಖರೀದಿಸಿ ಮನೆಗೆ ಕೊಂಡು ಹೋಗಿದ್ದರು ಎನ್ನಲಾಗಿದೆ. ಎಳನೀರು ಸೇವಿಸಿದ 137 ಮಂದಿ ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡವರು ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರೋಡ್ ಪರ್ಲಿಯ ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್, ಯುನಿಟಿ, ಕಣಚೂರು, …

Read More »

ಮಂಗಳೂರು:  ಫೇಕ್ ಐಡಿ ಸೃಷ್ಟಿಸಿ ಬಿಲ್ಲವರ ನಿಂದಿಸುವ ಪೋಸ್ಟ್ – ಸೈಬ‌ರ್ ಠಾಣೆಗೆ ದೂರು

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಂಟ – ಬಿಲ್ಲವ ಸಮುದಾಯದ ಹೆಸರಿನಲ್ಲಿ ಮತದಾರರನ್ನು ಎತ್ತಿಕಟ್ಟಲು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದಾರೆ. ಫೇಕ್ ಐಡಿಗಳನ್ನು ಸೃಷ್ಟಿಸಿ ಬಿಲ್ಲವರನ್ನು ತುಚ್ಚವಾಗಿ ಬಿಂಬಿಸುವ ರೀತಿ, ಬಂಟರ ವಿರುದ್ಧ ಎತ್ತಿಕಟ್ಟುವ ರೀತಿ ಪೋಸ್ಟ್ ಗಳ ವಿರುದ್ಧ ಬಿಜೆಪಿ ಯುವಮೋರ್ಚಾ ಸೈಬ‌ರ್ ಠಾಣೆಗೆ ದೂರು ನೀಡಿದೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಕಾಂಗ್ರೆಸ್ ಕಾರ್ಯಕರ್ತರು ನಿರಂತರವಾಗಿ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ನಕಲಿ ಖಾತೆಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿ ಸೈಬರ್ …

Read More »

You cannot copy content of this page.