ತಾಜಾ ಸುದ್ದಿ

ಉಡುಪಿ: ನಾಲ್ವರ ಕೊಲೆ ಪ್ರಕರಣ – ಜೂನ್ 13 ರಿಂದ ಸಾಕ್ಷಿಗಳ ವಿಚಾರಣೆ ಆರಂಭ

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಆರೋಪಿ ಪರ ವಕೀಲರು ಮೆಮೋ ಸಲ್ಲಿಕೆ ಮಾಡಿದ್ದರೂ ನ್ಯಾಯಪೀಠ ಅಂಗೀಕರಿಸಿಲ್ಲ. ಸಾಕ್ಷಿಗಳಿಗೆ ಸಮನ್ಸ್ ನೀಡಿ, ಮುಂದಿನ ವಿಚಾರಣೆಯು ಜೂನ್ 13ರಿಂದ 15ರ ಅವಧಿಯಲ್ಲಿ ನಡೆಯಲಿದೆ. ಮೊದಲನೇ ದಿನ ಒಬ್ಬರು ಹಾಗೂ ಉಳಿದ ದಿನಗಳಲ್ಲಿ ತಲಾ ಇಬ್ಬರಂತೆ ಮೂರು ದಿನಗಳ ಕಾಲ 5 …

Read More »

ಎಳೆವೆಯಲ್ಲಿಯೇ ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು- ರವಿರಾಜ್ ಹೆಚ್ ಪಿ.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಸುನಾಗ್ ನವ್ಯಹಿತ ಬೇಸಿಗೆ ಶಿಬಿರವು ಉಡುಪಿ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೂಮ್ ನಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ ಸಂಸ್ಕೃತಿಯ ಅರಿವನ್ನು ಮಕ್ಕಳಿಗೆ ತಿಳಿಸುವ ಸಲುವಾಗಿ ನಾಡಿನ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು ಒಂದು ಪರಿಪೂರ್ಣ ಶಿಬಿರವಾಗುತ್ತದೆ .ಆಟದ ಮೂಲಕ …

Read More »

ಟ್ರಾಫಿಕ್‌ನಲ್ಲಿ ತೃತೀಯ ಲಿಂಗಿಯರು ಭಿಕ್ಷೆ ಬೇಡುವುದು ಬ್ಯಾನ್ – ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಪುಣೆ: ಮಂಗಳಮುಖಿಯರು ಅಥವಾ ತೃತೀಯ ಲಿಂಗಿಯರು ಟ್ರಾಫಿಕ್​, ಬಸ್​ ಹಾಗೂ ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಟ್ರಾಫಿಕ್​ಗಳಲ್ಲಂತೂ ಹಣಕ್ಕೆ ಬೇಡಿಕೆ ಇಡುವ ಇವರು, ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರದ ಪುಣೆ ಪೊಲೀಸರು ತೃತೀಯ ಲಿಂಗಿಗಳು ಭಿಕ್ಷೆ ಬೇಡುವುದನ್ನು ಬ್ಯಾನ್​ ಮಾಡಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್​ ಅವರು …

Read More »

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರ ಭೀಕರ ಅಪಘಾತ ಪ್ರಕರಣ: ದಂಪತಿ ಸಾವು- ಬದುಕುಳಿದ ಮಗ

ಕುಂದಾಪುರ: ಬೊಬ್ಬರ್ಯನಕಟ್ಟೆ ಎದುರಿನ ಮೇಲ್ಸೇತುವೆ ಮೇಲೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಪುತ್ರ ಬದುಕುಳಿದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ವೇಗವಾಗಿ ಬಂದ ಕಾರು ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಬಿದ್ದಿದೆ. ಮೃತರನ್ನು ಕೇರಳದ ಕಣ್ಣೂರು ಮೂಲದ ಮುನ್ನಾವರ್ (49), ಅವರ ಪತ್ನಿ ಸಮೀರ (41) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಪುತ್ರ ಸುಹೇಲ್ (18) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ. ಅವರ ಪತ್ನಿ ಸಮೀರಾ ಕೇರಳದ ಕಣ್ಣೂರಿನವರಾದ ಕಾರಣ ಮುನ್ನಾವರ್ ಮತ್ತು ಅವರ ಕುಟುಂಬ ಕೊಲ್ಲಾಪುರದಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದರು. …

Read More »

ಮಂಗಳೂರು : ಬೊಂಡಾ ಪ್ಯಾಕ್ಟರಿಯ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥ..!

ಮಂಗಳೂರು : ಅಡ್ಯಾರ್ ನಲ್ಲಿರುವ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥೆ ಬೊಂಡಾ ಪ್ಯಾಕ್ಟರಿಯಲ್ಲಿ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥರಾದ ಘಟನೆ ನಡೆದಿದ್ದು, ಇದೀಗ ಬೊಂಡಾ ಪ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಎಳನೀರು ಸ್ಯಾಂಪಲ್ ನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಎಪ್ರಿಲ್ 8 ರಂದು ಅಡ್ಯಾರ್ ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ಎಳನೀರನ್ನು ಲೀಟರ್ ಲೆಕ್ಕದಲ್ಲಿ ಖರೀದಿಸಿ ಕುಡಿದ ಕಾರಣ …

Read More »

ಉಳ್ಳಾಲ : ಲೋಕಾಯುಕ್ತ ಪೊಲೀಸ್ ಸೋಗಿನಲ್ಲಿ ಕಂದಾಯ ಅಧಿಕಾರಿಗೆ ಬೆದರಿಕೆ ಕರೆ – ಪ್ರಕರಣ ದಾಖಲು

ಉಳ್ಳಾಲ : ಸೋಮೇಶ್ವರ ಪುರಸಭೆ ಕಂದಾಯ ಅಧಿಕಾರಿಗೆ ಅಪರಿಚಿತನೊಬ್ಬ ಲೋಕಾಯುಕ್ತ ಪೊಲೀಸ್ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆಯಿಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿ ಪುರುಷೋತ್ತಮ ದ.ಕ. ಲೋಕಸಭಾ ಕ್ಷೇತ್ರದ ಸಂಚಾರಿ ತಂಡದಲ್ಲಿ (ಫ್ಲೈಯಿಂಗ್ ಸ್ಕ್ವಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಏಪ್ರಿಲ್. 5ರಂದು ಮಧ್ಯಾಹ್ನದವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮಧ್ಯಾಹ್ನ ವೇಳೆಗೆ ಅಪರಿಚಿತನೊಬ್ಬನಿಂದ ಅವರಿಗೆ ವಾಟ್ಸ್‌ಆ್ಯಪ್ ಕರೆಯೊಂದು ಬಂದಿದೆ. ಅತ್ತಕಡೆಯಿಂದ ಮಾತನಾಡುತ್ತಿದ್ದ ವ್ಯಕ್ತಿ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ …

Read More »

ಬೆಳ್ತಂಗಡಿ: ಹೃದಯಾಘಾತಕ್ಕೆ 4 ತಿಂಗಳ ಗರ್ಭಿಣಿ ಬಲಿ..!

ಬೆಳ್ತಂಗಡಿ: 19 ವರ್ಷದ ಗರ್ಭಿಣಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ ನಗರದ ಹಮೀದ್‌, ನರೀಮರವರ 2ನೇ ಪುತ್ರಿ ನಿಶ್ಚಾ (19) ಮೃತ ಗರ್ಭಿಣಿ. ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ ನಿಧನರಾಗಿದ್ದಾರೆ. ಮೃತ ಮಹಿಳೆ ಕುಂಟಿನಿ ನಿವಾಸಿ ಖಾಲಿದ್‌ ಉಸ್ಮಾನ್‌ ಅವರ ಸೊಸೆ. ಇವರಿಗೆ ಮದುವೆಯಾಗಿ 7 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು. ಎನ್ನಲಾಗಿದೆ.

Read More »

ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಹತ್ಯೆಗೈದ ತಾಯಿ..!

ಬೆಂಗಳೂರಿನಲ್ಲಿ ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ತಾಯಿಯೊಬ್ಬಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಆಂಧ್ರಮೂಲದ ಗಂಗಾದೇವಿ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಮೃತ ಮಕ್ಕಳನ್ನು ಲಕ್ಷ್ಮಿ (9) ಹಾಗೂ ಗೌತಮ್ (7) ಎಂದು ಗುರುತಿಸಲಾಗಿದ್ದು, ಸದ್ಯ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ.   ಆಂಧ್ರ ಮೂಲದ ಗಂಗಾದೇವಿ ಪತಿ ಪೋಕ್ಸೋ ಕೇಸ್ ನಲ್ಲಿ ಇದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗಂಗಾದೇವಿ ಇಬ್ಬರನ್ನು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಬಂಟ್ವಾಳ: ಮನೆಯೊಳಗೆ ‌ನುಗ್ಗಿಚೂರಿ ಇರಿತ-ಆರೋಪಿಯ ಬಂಧನ

ಬಂಟ್ವಾಳ : ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ.

Read More »

ಇಂದು ದ್ವಿತೀಯ PUC ಫಲಿತಾಂಶ ಪ್ರಕಟ

ಇಂದು ಬೆಳಗ್ಗೆ 10 ಗಂಟೆಗೆ ದ್ವಿತೀಯ PUC ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಇಲಾಖೆ ಫಲಿತಾಂಶ ಪ್ರಕಟಿಸಲಿದೆ. 11 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾ. 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ

Read More »

You cannot copy content of this page.