ತಾಜಾ ಸುದ್ದಿ

ಉಡುಪಿ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭ ಮಾಜಿ ಸಚಿವ ಸಿ.ಟಿ ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

Read More »

ಅರುಣ್ ಕುಮಾರ್ ಪುತ್ತಿಲಗೆ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ ಸಂಸದ ಪ್ರತಾಪ್ ಸಿಂಹ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ ಪುತ್ತಿಲಗೆ ಸರಿಯಾಗೇ ಟಾಂಗ್ ಕೊಟ್ಟಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಅರುಣ್ ಕುಮಾರ್ ಪುತ್ತಿಲರವರೇ, ನೀವು ಪುತ್ತೂರಲ್ಲಿ ಮಾಡಿದ ಶಕ್ತಿ ಪ್ರದರ್ಶನವನ್ನು ಮೈಸೂರಲ್ಲಿ ಮಾಡುವಷ್ಟು ಶಕ್ತಿ ನನಗೂ ಇದೆ. ಆದರೆ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡಲಿಲ್ಲ. ಏಕೆಂದರೆ ನಮಗೆ ಪಕ್ಷ …

Read More »

ಗಮನಿಸಿ : ‘ಇಂದು ದ್ವಿತೀಯ ಪಿಯುಸಿ ಫಲಿತಾಂಶ’ ಎಂಬ ಸುದ್ದಿ ಸುಳ್ಳು : ಪರೀಕ್ಷಾ ಮಂಡಳಿ ಸ್ಪಷ್ಟನೆ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 23 ರವರೆಗು ನಡೆಸಲಾಗಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ, ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಹೀಗಾಗಿ ಇಂದು ಫಲಿತಾಂಶವು ಹೊರ ಬೀಳಲಿದೆ, ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆನ ನಡೆಸಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು. ಅದು ಸುಳ್ಳು ಎಂದು ಈಗ …

Read More »

ಉಡುಪಿ: ಇಂದು ನಾಮಪತ್ರ ಸಲ್ಲಿಸಲಿರುವ ಕೋಟ ಶ್ರೀನಿವಾಸ್ ಪೂಜಾರಿ , ಜಯಪ್ರಕಾಶ್‌ ಹೆಗ್ಡೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದುಬೆಳಗ್ಗೆ 10ಕ್ಕೆ ಬಿಜೆಪಿ ಜಿಲ್ಲಾ ಕಚೇರಿ ಬಳಿ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ನಡೆಯಲಿದೆ. ಸಮಾವೇಶ ಮುಗಿದ ಬಳಿಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಬಿಜೆಪಿ ನಾಯಕರೊಂದಿಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಅವರು …

Read More »

26 ವರ್ಷಕ್ಕೆ 22 ಮಗುವಿನ ತಾಯಿ ಈ ಯುವತಿ! 105 ಮಕ್ಕಳನ್ನು ಪಡೆಯುವುದೇ ಈಕೆಯ ಗುರಿ

26 ವರ್ಷ ವಯಸ್ಸಿನ ಕ್ರಿಸ್ಟಿನಾ ಓಜ್‌ಟುರ್ಕ್ ಎಂಬ ಯುವತಿ ತನ್ನ 58 ವರ್ಷ ವಯಸ್ಸಿನ ಪತಿ ಗ್ಯಾಲಿಪ್​ನೊಂದಿಗೆ 22 ಮಗುವನ್ನು ಆರೈಕೆ ಮಾಡುತ್ತಿದ್ದು, ಕೇವಲ 26ನೇ ವಯಸ್ಸಿಗೆ 22 ಮಕ್ಕಳಿಗೆ ತಾಯಿಯಾಗಿರುವುದು ಅನೇಕರಲ್ಲಿ ಭಾರೀ ಅಚ್ಚರಿಯನ್ನು ಮೂಡಿಸಿದೆ. 2020ರಿಂದ ಇಲ್ಲಿಯವರೆಗೆ 22 ಶಿಶುಗಳನ್ನು ಸ್ವಾಗತಿಸಿರುವ ಈ ದಂಪತಿ, 105 ಮಕ್ಕಳನ್ನು ಹೊಂದುವ ಮೂಲಕ ತಮ್ಮ ಕುಟುಂಬವನ್ನು ಮತ್ತಷ್ಟು ವಿಸ್ತರಿಸುವ ಕನಸು ಕಂಡಿದೆ. ಪ್ರಸ್ತುತ ಜಾರ್ಜಿಯಾದಲ್ಲಿ ನೆಲೆಸಿರುವ ಕ್ರಿಸ್ಟಿನಾ ಒಜ್ಟುರ್ಕ್ ಮತ್ತು ಅವರ ಮಿಲಿಯನೇರ್ ಪತಿ ಗ್ಯಾಲಿಪ್ ಸದ್ಯ 22 ಮಗುವಿನ ಪೋಷಕರು. ಕ್ರಿಸ್ಟಿನಾ ತನ್ನ ಮೊದಲ …

Read More »

ಉಡುಪಿ: ಲೋಕಸಭಾ ಚುನಾವಣೆ- 9 ಮಂದಿ ರೌಡಿಶೀಟರ್ ಗಳ ಗಡಿಪಾರು

ಉಡುಪಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ 9 ಮಂದಿ ರೌಡಿಶೀಟರ್ ಗಳ ಗಡಿಪಾರಿಗೆ ಆದೇಶ ಹೊರಡಿಸಲಾಗಿದೆ.ಉಡುಪಿ ಉಪವಿಭಾಗಧಿಕಾರಿ ರಶ್ಮಿ ಅವರು ಗಡಿಪಾರು ಆದೇಶ ಮಾಡಿದ್ದಾರೆ. ಇವರೆಲ್ಲ ಉಡುಪಿಯ ನಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣಗಳಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ರಾಘವೇಂದ್ರ ದೇವಾಡಿಗ,ಅಭಿಷೇಕ್ ಶ್ರೀಯಾನ್ ಕಾಪು,ರಂಜಿತ್ ಪೂಜಾರಿ,ಮಹೇಶ್ ಗಾಣಿಗ, ಹರೀಶ್ ಪೂಜಾರಿ ಮಣಿಪಾಲ, ರಂಜಿತ್ ಯಾನೆ ರಂಜಿತ್ ಕಲ್ಮಾಡಿ,ಇಕ್ಬಾಲ್ ಮಣಿಪಾಲ,ರೋಹಿತ್ ಕೋಟ,ಮೊಹಮ್ಮದ್ ರಶೀದ್- ಗಡಿಪಾರಾದ ರೌಡಿಶೀಟರ್ ಗಳಾಗಿದ್ದಾರೆ.ಜೂನ್ 10 ರವರೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

Read More »

ಪುತ್ತೂರು: ಹರ್ಷ ಶೋರೂಮ್ ಗೋದಾಮಿಗೆ ಬೆಂಕಿ – ಸುಟ್ಟು ಕರಕಲಾದ ಕೋಟ್ಯಾಂತರ ಮೌಲ್ಯದ ವಸ್ತು

ಪುತ್ತೂರು: ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.

Read More »

ಉಡುಪಿ: ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಕಡ್ಡಾಯ- ಜಿಲ್ಲಾಧಿಕಾರಿ

ಉಡುಪಿ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, 3 ತಿಂಗಳು ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದ್ದಾರೆ. ಸೋಮವಾರ ಬೈಲೂರಿನ ಪಶುವೈದ್ಯಕೀಯ ಪಾಲಿಕ್ಲಿನಿಕ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು …

Read More »

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಯುವಕ ನಾಪತ್ತೆ

ಸುಳ್ಯ: ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾದ ಘಟನೆ ಸುಳ್ಯದ ಗಾಂಧಿನಗರ ಎಂಬಲ್ಲಿ ನಡೆದಿದೆ. ಈ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಬಳಿಕ ಈ ವಿ‍ಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದಾನೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸಹೋದರರ ನಡುವೆ ಜಗಳ- ಕೊಲೆಯಲ್ಲಿ ಅಂತ್ಯ..!

ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ನಾಲ್ಕೂರು ಗ್ರಾಮದ ಕಪೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (35) ಹಾಗೂ ಕೊಲೆ ಮಾಡಿದ ಆರೋಪಿ ಮೃತರ ತಮ್ಮ ವಿಶ್ವನಾಥ್ (30) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, …

Read More »

You cannot copy content of this page.