ತಾಜಾ ಸುದ್ದಿ

ಉಡುಪಿ ನೇಜಾರು ಹತ್ಯಾಕಾಂಡ ಪ್ರಕರಣ: ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ

ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ಅವರು ತನ್ನ ಮೇಲಿನ ಆರೋಪವನ್ನು ನ್ಯಾಯಾಲಯದಲ್ಲಿ ನಿರಾಕರಿಸಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್.ಕೆ. ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಆರೋಪಿ ಮೇಲಿನ ಆಪಾದನೆಯನ್ನು ವಾಚಿಸಿದರು. ಆದರೆ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿ, ವಿಚಾರಣೆ ಎದುರಿಸುವುದಾಗಿ …

Read More »

ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ..!

ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ. ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ …

Read More »

ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದ ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹ

ಖ್ಯಾತ ಚಲನ ಚಿತ್ರ ನಟ ವಸಿಷ್ಠ ಸಿಂಹರವರು ವಡಭಾಂಡೇಶ್ವರದ ಭಕ್ತವೃಂದಕ್ಕೆ ಬೇಟಿ ನೀಡಿದರು ಈ ಸಂದರ್ಭದಲ್ಲಿ ಭಕ್ತವೃಂದ ಅಧ್ಯಕ್ಷರಾದ ಹರೀಶ್ ಕಾಂಚನ್ ಅವರನ್ನು ಸನ್ಮಾನಿಸಿದರು ಭಕ್ತವೃಂದದ ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಬೈಲಕೆರೆ ಸದಸ್ಯರಾದ ಭರತ್ ಬೈಲಕೆರೆ ,ನಿದೀಶ್ ಶ್ರೀಯನ್ , ಸುದರ್ಶನ್ ಬಂಗೇರ ಸ್ವಾಗತಿಸಿ ಬರಮಾಡಿಕೊಂಡರು

Read More »

ಸುಳ್ಯ: ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ಓಡಾಟ- ಮತ್ತೆ ನಕ್ಸಲ್‌ ಸಂಚಾರದ ಶಂಕೆ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿಭಾಗದ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಬುಧವಾರ ಅಪರಿಚಿತ ಮಹಿಳೆ ಓಡಾಡಿದ್ದು ಆಕೆ ನಕ್ಸಲ್ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶೋಧಕಾರ್ಯ ನಡೆಸಲಾಗಿದೆ. ಸುಳ್ಯ ತಾಲೂಕಿನ ಗಡಿಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ 12ರ ಬಳಿಕ ಅಪರಿಚಿತ ಮಹಿಳೆ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬ್ಬಂದಿ ನೋಡಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಈ ಹಿನ್ನಲೆ ನಕ್ಸಲ್ ನಿಗ್ರಹ ಪಡೆ ಆಗಮಿಸಿ ಶೋಧ ನಡೆಸಿದರು ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಲಾಗಿದೆ. …

Read More »

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಿಸಿಬಿ ಬಲೆಗೆ – 6.325 ಕೆಜಿ ಮಾದಕದ್ರವ್ಯ ವಶಕ್ಕೆ

ಮಂಗಳೂರು: ವಿಶಾಖಪಟ್ಟಣದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖೆಡ್ಡಾಕ್ಕೆ ಕೆಡವಿರುವ ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದ ನೀರುಮಾರ್ಗ ಜಂಕ್ಷನ್, ಬೇಬಿ ಕಾಂಪ್ಲೆಕ್ಸ್ ನಿವಾಸಿ ನಿಶಾಂತ್ ಶೆಟ್ಟಿ(35) ಬಂಧಿತ ಆರೋಪಿ. ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ. ‌ಬಳಿಕ ಅದನ್ನು ಸಣ್ಣಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿಕೊಂಡು ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು …

Read More »

ವಾಹನ ಸವಾರರ ಗಮನಕ್ಕೆ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಫಿಕ್ಸ್

 ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಬೀಳುವುದಂತು ಗ್ಯಾರಂಟಿ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, …

Read More »

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಕರೆತಂದ ಪೊಲೀಸರು

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್‌ ಚೌಗುಲೆಯ ಚಾರ್ಜ್‌ (ಆಪಾದನೆ ವಾಚಿಸುವ) ಪ್ರಕ್ರಿಯೆ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಇಂದು ನಡೆಯಿತು. ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು. ಮಾರ್ಚ್ 7ರಂದು ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್‌ ಚೌಗುಲೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ …

Read More »

ಮಣಿಪಾಲ: ಸೌಂಡ್ ಬಾಕ್ಸ್ ಅಳವಡಿಸಿ ಹೋಳಿ ಸಂಭ್ರಮಾಚರಣೆ – ಪ್ರಕರಣ ದಾಖಲು

ಮಣಿಪಾಲ: ಖಾಸಗಿ ಜಾಗದಲ್ಲಿ ಕರ್ಕಶ ಧ್ವನಿ ಅಳವಡಿಸಿ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರತ್ನ ನಗರದ ಬಳಿ ಇರುವ ಖಾಸಗಿ ಜಾಗದಲ್ಲಿ ಸಾರ್ವಜನಿಕರನ್ನು ಸೇರಿಸಿ ಸೌಂಡ್ ಬಾಕ್ಸ್ ಮತ್ತು ಸ್ಪೀಕರನ್ನು ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಮಣಿಪಾಲ ಪೊಲೀಸರಿಗೆ ಮಾಹಿತಿ ಲಭಿಸಿತ್ತು.ಕಾರ್ಯಕ್ರಮವನ್ನು ರತನ್ ಎಂಬವರು ಆಯೋಜಿಸಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾಕಾಯ್ದೆ, 13 ಮಂದಿ ಗಡಿಪಾರು

ಮಂಗಳೂರು: ಲೋಕಸಭೆ ಚುನಾವಣೆ ಶಾಂತಿಯುತವಾಗಿ ನಡೆಯುವ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಅಲ್ಲದೆ, ಮತ್ತೆ 13 ಮಂದಿಯನ್ನು ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ. ಉಳ್ಳಾಲ ಅಂಬ್ಲಮೊಗರು ನಿವಾಸಿ ಹೇಮಚಂದ್ರ ಅಲಿಯಾಸ್ ಪ್ರಜ್ವಲ್ ಪೂಜಾರಿ(29), ಉಳ್ಳಾಲ ಕೈರಂಗಳ ನಿವಾಸಿ ನವಾಜ್ (36), ಕುದ್ರೋಳಿ ನಿವಾಸಿ ಅನೀಸ್ ಅಶ್ರಫ್ (26), ಬೋಳೂರು ನಿವಾಸಿ ಚರಣ್ ಶೇಟ್ (39) ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಹೇಮಚಂದ್ರನ ವಿರುದ್ಧ ಕೊಲೆ ಯತ್ನ, ಕೊಲೆ, ಗಲಭೆ, ಕಿಡ್ನಾಪ್ ಸೇರಿದಂತೆ ಒಟ್ಟು …

Read More »

ಬೆಳ್ತಂಗಡಿ: 9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ!

ಬೆಳ್ತಂಗಡಿ:  9 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ ನವರ ಪುತ್ರಿ ರುಷಿಕಾ( 9 ತಿಂಗಳು) ನಾಪತ್ತೆಯಾದವರು. ಮಾ.22 ರಂದು ರಾತ್ರಿ ಜಯಶ್ರೀ ರೂಮಿನಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ  ಮಲಗಿದ್ದು, ವೆಂಕಪ್ಪ ಗೌಡ ಅವರು ಮನೆಯ ಹಾಲ್‌ ನಲ್ಲಿ ಮಲಗಿದ್ದರು. ಮರುದಿನ ಬೆಳಿಗ್ಗೆ ವೆಂಕಪ್ಪಗೌಡರು ಎದ್ದು ನೋಡಿದಾಗ ಪತ್ನಿ ಹಾಗೂ 9 ತಿಂಗಳ ಮಗು ರುಷಿಕಾ ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಬಗ್ಗೆ ವೆಂಕಪ್ಪಗೌಡ …

Read More »

You cannot copy content of this page.