ತಾಜಾ ಸುದ್ದಿ

ಮಂಗಳೂರು: ಬೀದಿನಾಟಕದ ಮೂಲಕ ನಗರದೆಲ್ಲೆಡೆ ಮತದಾನ ಜಾಗೃತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ತಾಲೂಕು ಪಂಚಾಯತ್‌ ಮಂಗಳೂರು ಇದರ ಸಹಯೋಗದಲ್ಲಿ ಇಂದು ನಗರದ ಸ್ಟೇಟ್‌ ಬ್ಯಾಂಕ್‌ ಬಸ್‌ ನಿಲ್ದಾಣದ ಬಳಿ ಸೈಂಟ್‌ ಆಗ್ನೇಸ್‌ ವಿದ್ಯಾರ್ಥಿಗಳಿಂದ ಬೀದಿನಾಟಕ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್‌ ಕೆ ಅವರು ಈ ವೇಳೆ ಮಾತನಾಡಿ, ಮತದಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಬೀದಿನಾಟಕ ಮೂಲಕ ಅದ್ಭುತವಾಗಿ ತಿಳಿಹೇಳಿದ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ ಎಪ್ರಿಲ್‌ 26 ರಂದು ಕಡ್ಡಾಯವಾಗಿ …

Read More »

ಕಾರ್ಕಳ : ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಗೆ ನುಗ್ಗಿ ನಗದು ಕಳವು

ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ. ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು ಅರ್ಧ ತೆರೆದಿದ್ದು, ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು …

Read More »

ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ

ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ 6-45 ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಲಿರುವುದು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು. ಸುಮಾರು 15 ಸಾವಿರ ಮಂದಿ ಭಕ್ತರು ಪಾಲ್ಗೊಂಡಿದ್ದು ಅನ್ನಪ್ರಸಾದವನ್ನು ಸ್ವೀಕರಿಸಿದರು. ಅಭಿವೃದ್ಧಿ …

Read More »

ಸಂಕರ್ಷಣ ಶಾಲಗ್ರಾಮ ಹಸ್ತಾಂತರಿಸಿ ಪೇಜಾವರ ಶ್ರೀ – ರಾಮ – (ಲಕ್ಷ್ಮಣ) ಬಲರಾಮರ ಸನ್ನಿಧಿಗಳ ಪುನರುತ್ಥಾನ ಕಾಲನಿರ್ಣಯದಂತಿದೆ

ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ ಮತ್ತು ಪ್ರಾಣಪ್ರತಿಷ್ಠಾಪನೆ ಮತ್ತು ಅದರ ಬಳಿಕ ಉಡುಪಿ ವಡಭಾಂಡೇಶ್ವರದಲ್ಲಿ ಪ್ರಾಚೀನವಾದ ಪೂರ್ವಾವತಾರದಲ್ಲಿ ಲಕ್ಷ್ಮಣನೇ ಆಗಿದ್ದ ಬಲರಾಮರ ಸನ್ನಿಧಿಯ ಪುನರುತ್ಥಾನ ಪುನಃ ಪ್ರತಿಷ್ಠೆಯೂ ಸಂಪನ್ನಗೊಳ್ಳುತ್ತಿರುವುದು ಅತ್ಯಂತ ಅಚ್ಚರಿಯ ಸಂಗತಿಯಾಗಿದ್ದು ಕಾಲವೇ ಈ ಎರಡನ್ನೂ ನಿರ್ಣಯಿಸಿದಂತಿದೆ ಎಂದು ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅಭಿಪ್ರಾಯಿಸಿದ್ದಾರೆ . ಅಯೋಧ್ಯೆಯ ರಾಮನ ಪಾದಮೂಲದಲ್ಲಿಟ್ಟು ಅರ್ಚಿಸಿ ಪೂಜಿಸಿ ತಾವು ತೆಗೆದುಕೊಂಡು ಬಂದ ಭಗವಂತನ ಸಂಕರ್ಷಣ ಶಾಲಗ್ರಾಮವನ್ನು ನವೀಕರಣಗೊಂಡ ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ದಿನಾಂಕ 21 ರ ಗುರುವಾರದಂದು ಹಸ್ತಾಂತರಿಸಿ ಸಂತಸವನ್ನು …

Read More »

ಶಿರ್ವ: ಕಲ್ಲೊಟ್ಟು, ಸೊರ್ಪು ಅಗೋಳಿಬೈಲು ಪರಿಸರದಲ್ಲಿ ಚಿರತೆ ಹಾವಳಿ- ವ್ಯಕ್ತಿ ಮೇಲೆ ದಾಳಿ

ಉಡುಪಿ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ. ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.ಆತ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್‌ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ …

Read More »

ಬೈಕ್ ಅಪಘಾತ: ಯುವಕ, ಮಹಿಳೆ ಮೃತ್ಯು

ಉಳ್ಳಾಲ: ಭಾನುವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವಕ ಹಾಗೂ ಸಹಸವಾರ ಮಹಿಳೆ ಮೃತಪಟ್ಟಿರುವ ಘಟನೆ ನಾಟೆಕಲ್ ಸಮೀಪ ನಡೆದಿದೆ. ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ನಿಧಿ (29) ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಮೃತರು. ಇವರಿಬ್ಬರು ಮುಡಿಪುವಿನಲ್ಲಿ ಸಂಬಂಧಿಕರೊಬ್ಬರ ಗೃಹಪ್ರವೇಶದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದರು. ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ನಿಧಿ ಭಾನುವಾರವೇ ಮೃತಪಟ್ಡಿದ್ದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯತೀಶ್ ಸೋಮವಾರ ಕೊನೆಯುಸಿರೆಳೆದರು.

Read More »

ಮಣಿಪಾಲ: ವಿದ್ಯಾರ್ಥಿಯನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಯುವಕರ ತಂಡ-ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಮಣಿಪಾಲದ ವಿದ್ಯಾರ್ಥಿಯೋರ್ವನನ್ನು ಯುವಕರ ತಂಡವೊಂದು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದ್ದು,ಘಟನೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಮಣಿಪಾಲ ಸರಳೆಬೆಟ್ಟು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಮುಂಬೈ ಮೂಲದ ಆರುಷ್ ಕುಮಾರ್ (21) ಮೇಲೆ ಕ್ಷುಲ್ಲಕ ವಿಚಾರಕ್ಕಾಗಿ ಹಲ್ಲೆ ನಡೆಸಿದ್ದಾರೆ. ಆರುಷ್, ಮಣಿಪಾಲ ಎಂಐಟಿ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ. ಮದ್ಯ ಸೇವಿಸುತ್ತಿದ್ದ ಪುಂಡರ ತಂಡದ ಓರ್ವ ಸದಸ್ಯನಿಗೆ ಕಾಲು ತಾಗಿದ ಹಿನ್ನಲೆಯಲ್ಲಿ ಜಗಳ ಪ್ರಾರಂಭಗೊಂಡಿದೆ. ಇದೇ ವಿಚಾರಕ್ಕೆ ವಿದ್ಯಾರ್ಥಿಗೆ ಬಾರ್ ನಲ್ಲಿ ಹಲ್ಲೆ ನಡೆಸಿದ ತಂಡ …

Read More »

ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶೀ

ಉಡುಪಿ: ನಮ್ಮ ಯಾವುದೇ ಪ್ರಯತ್ನ ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ. ಹಾಗಾಗ ಕೂಡದು. ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಶನಿವಾರ ಆಶೀರ್ವಚನ ನೀಡಿದರು. ದೇವಸ್ಥಾನಗಳು ಶಾಂತಿ ನೆಮ್ಮದಿಯ ಪ್ರತೀಕವಾಗಿ ಇರುವಂಥದ್ದು. ಯಾವ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ಸರಿಯಾಗಿ ನಡೆಯುತ್ತಿದೆಯೋ ಆ ಊರಿನಲ್ಲಿ ನೆಮ್ಮದಿ ಇರುತ್ತದೆ ಎಂದರು. ಕರ್ಮದ ಫಲ ಜಾಸ್ತಿ ಸಾನ್ನಿಧ್ಯ ವಹಿಸಿದ್ದ …

Read More »

ಉಡುಪಿ: ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7 ಲಕ್ಷ ರೂ. ವಶಕ್ಕೆ

ಉಡುಪಿ: ಲೋಕಸಬಾ ಚುನಾವಣೆ ನಿಮಿತ್ತ ಉದ್ಯಾವರದ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ನಗದು ಸಾಗಾಟ ಮಾಡುತ್ತಿದ್ದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರತ್ಯೇಕ ಕಾರುಗಳಲ್ಲಿ ತಲಾ 3.5 ಲ.ರೂ.ಗಳಂತೆ ಒಟ್ಟು 7 ಲ.ರೂ. ಗಳನ್ನು ವಶಕ್ಕೆ ಪಡೆಯಲಾಗಿದೆ. ಒಂದು ಕಾರು ಧರ್ಮಸ್ಥಳ ಮಾರ್ಗವಾಗಿ ಉಡುಪಿಯತ್ತ ಬರುತ್ತಿತ್ತು. ಮತ್ತೊಂದು ಕಾರು ಮಂಗಳೂರಿನಿಂದ ಉಡುಪಿಯತ್ತ ಬರುತ್ತಿತ್ತು. ಸೂಕ್ತ ದಾಖಲಾತಿ ಇಲ್ಲದ ಕಾರಣ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More »

ಪುತ್ತೂರು: ಅಕ್ರಮ ಗೋ ಸಾಗಾಟ, ಸಂಘಟನೆಯ ಕಾರ್ಯಕರ್ತರನ್ನು ಕಂಡು ಕಾರು ದನಗಳನ್ನು ಬಿಟ್ಟು ತಂಡ ಪರಾರಿ..!

ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ. ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. …

Read More »

You cannot copy content of this page.