ತಾಜಾ ಸುದ್ದಿ

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ – ಬಾಂಬರ್‌ಗೆ ಪರಿಚಯವಿದ್ದ ವ್ಯಕ್ತಿ NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ ಶಂಕಿತ ಆರೋಪಿಯನ್ನು ಬಳ್ಳಾರಿ ಮೂಲದ ಶಬ್ಬೀರ್ ಎಂದು ಗುರುತಿಸಲಾಗಿದ್ದು, ಈತನನ್ನು ಎನ್‌ಐಎ ವಶಕ್ಕೆ ಪಡೆದಿದೆ. ಬಳ್ಳಾರಿಯ ಕೌಲ್‌ ಬಜಾರ್‌ ನಿವಾಸಿ ಶಬ್ಬೀರ್‌ನನ್ನು ಇಂದು ಮುಂಜಾನೆ 4 ಗಂಟೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ್ ಎನ್ನಲಾಗಿದೆ. ಮಾರ್ಚ್ 1 ರಂದು ಪ್ರಸಿದ್ಧ ವೈಟ್‌ಫೀಲ್ಡ್ ಉಪಾಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ IED …

Read More »

ಮಲ್ಪೆ: ಬೋಟ್‌ವೊಂದರಲ್ಲಿ ಕೆಲಸಮಾಡಿಕೊಂಡಿದ್ದ ಯುವಕ ನಾಪತ್ತೆ…!!

ಉಡುಪಿ :  ಮಲ್ಪೆಯ ಬೋಟ್‌ವೊಂದರಲ್ಲಿ ಕೆಲಸಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟ್ರಿಕಲ್ಸ್ ರವರ ಬಾಡಿಗೆ ರೂಮಿನಲ್ಲಿ ವಾಸವಿದ್ದು, ಮಾರ್ಚ್ 3 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ನಂ: 9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 …

Read More »

ಬೆಳ್ತಂಗಡಿ: ಸೈಡ್ ಕೊಡುವ ವಿಚಾರಕ್ಕೆ ಅಂಬ್ಯುಲೆನ್ಸ್ ಚಾಲಕನ ಮೇಲೆ ದಂಪತಿಯಿಂದ ಹಲ್ಲೆ

ಬೆಳ್ತಂಗಡಿ : ಆ್ಯಂಬುಲೆನ್ಸ್ ಚಾಲಕನೊಬ್ಬನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ದಂಪತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಬೆಂಗಳೂರಿನ ದಂಪತಿ ಶರತ್, ಶೃತಿ ಎಂದು ಗುರುತಿಸಲಾಗಿದೆ. ಕಡಬದಿಂದ ನೆರಿಯಾಗೆ ಬರುತ್ತಿದ್ದ ಪಶು ವೈದ್ಯಕೀಯ ಆ್ಯಂಬುಲೆನ್ಸ್ ಚಾಲಕನನ್ನು ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ರಸ್ತೆ ಮಧ್ಯೆ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸ್ಥಳೀಯರ ಮೇಲೂ ದಂಪತಿ ಕೂಗಾಡಿದ್ದಾರೆ. ಹಲ್ಲೆಗೊಳಗಾದ ಆ್ಯಂಬುಲೆನ್ಸ್ ಚಾಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ …

Read More »

ಕಾಪು: ದರೋಡೆ ಪ್ರಕರಣ : ಆರೋಪಿಯ ಬಂಧನ…!!

ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಲೈನ್‌ ಸೇಲ್‌ ಮಾಡಿ ಹಣ ಸಂಗ್ರಹಿಸಿಕೊಂಡು ವಾಹನದತ್ತ ತೆರಳುತ್ತಿದ್ದ ವ್ಯಕ್ತಿಯನ್ನು ರಾಷ್ಟ್ರೀಯ ಹೆದ್ದಾರಿ 66ರ ಕಾಪು ಅಂಡರ್‌ ಪಾಸ್‌ ಬಳಿ ದರೋಡೆ ಮಾಡಿದ ಪ್ರಕರಣದ ಆರೋಪದಲ್ಲಿ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧನವಾದ ಆರೋಪಿ ಪೊಲಿಪು ನಿವಾಸಿ ಸಂತೋಷ ಕುಮಾರ್‌ (28) ಎಂದು ಗುರುತಿಸಲಾಗಿದೆ. ಕಾಪು ಪೊಲೀಸ್‌ ವೃತ್ತ ನಿರೀಕ್ಷಕರ ನೇತೃತ್ವದ ತಂಡವು ಆರೋಪಿಯಿಂದ 1,00,200 ರೂ., ಒಂದು ಮೊಬೈಲ್‌ ಫೋನ್‌ ಮತ್ತು ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಘಟನೆಯ ವಿವರ: ಉಡುಪಿ ಸಂತೆಕಟ್ಟೆ ನಿವಾಸಿ ಉಮೇಶ ಪ್ರಭು …

Read More »

ಬೀಡಿ ಕಾರ್ಮಿಕರ ವೇತನ ಸಾವಿರಕ್ಕೆ 22.70 ರೂ. ಹೆಚ್ಚಳ

ಪುತ್ತೂರು: ಹೆಚ್ಚಳವಾದ ಗ್ರಾಹಕ ಸೂಚ್ಯಾಂಕ 568 ಅಂಶಗಳಿಗೆ ಅನುಗುಣವಾಗಿ ಎ.1ರಿಂದ ಪ್ರತಿ ಸಾವಿರ ಬೀಡಿಗೆ ರೂ 22.70 ರಂತೆ ತುಟ್ಟಿಭತ್ತೆ ಏರಿಕೆ ಆಗಿ ವೇತನ ಹೆಚ್ಚಳವಾಗಲಿದೆ ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರರ ಸಂಘದ ಅಧ್ಯಕ್ಷ ಗುಡ್ಡಪ್ಪ ಗೌಡ ತಿಳಿಸಿದ್ದಾರೆ. ಸದ್ಯ ಒಂದು ಸಾವಿರ ಬೀಡಿಗೆ ರೂ 252.34 ರಂತೆ ವೇತನ ನೀಡಲಾಗುತ್ತಿದ್ದು, ಈ ವರ್ಷದ ಡಿ.ಎ. ಸೇರಿಸಿದರೆ ಎ.1ರಿಂದ ಪ್ರತಿ 1,000 ಬೀಡಿಗೆ ರೂ. 275.04 ವೇತನ ನೀಡಬೇಕಾಗಿದೆ. ಇದರಿಂದ ಪಿಎಫ್ ಹಣ ರೂ. 27/- ಕಡಿತಗೊಂಡು ಪ್ರತಿ 1,000 ಬೀಡಿಗೆ ರೂ …

Read More »

ಮನೆಯ 4ನೇ ಮಹಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಮನೆಯ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ಯುವತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಹೆಡ್ ಮಾಸ್ಟರ್ಸ್ ಬಡಾವಣೆಯಲ್ಲಿ ನಡೆದಿದೆ. ಅಪರಿಚಿತ ಯುವತಿಯನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಕಳೆದ 5-6 ದಿನಗಳ ಹಿಂದೆಯೇ ಯುವತಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆಯಾದ ಯುವತಿ ಓಡಿಶಾ ಮೂಲದ ಸಪನ್ ಕುಮಾರ್ ಜೊತೆಗಿದ್ದಳು. ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿರುವ ಸಪನ್ ಕುಮಾರ್ ನಾಪತ್ತೆಯಾಗಿದ್ದಾನೆ. ಯುವತಿಯನ್ನು ಕೊಲೆಗೈದು ನಾಪತ್ತೆಯಾಗಿರುವ ಅನುಮಾನ ವ್ಯಕ್ತವಾಗಿದೆ. ಶವದ ಪಕ್ಕದಲ್ಲೇ ಮದ್ಯದ ಬಾಟಲ್ ಪತ್ತೆಯಾಗಿದೆ. ಸೂರ್ಯನಗರ ಪೊಲೀಸ್ …

Read More »

ಟಿಕೆಟ್ ಕೈತಪ್ಪುವ ಆತಂಕ: ಭಾವುಕರಾದ ನಳೀನ್ ಕುಮಾರ್ ಕಟೀಲ್

ಮಂಗಳೂರು: ದಕ್ಷಿಣ ಕನ್ನಡ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಗೆ ಈಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಳೀನ್ ಕುಮಾರ್ ಕಟೀಲ್ ತೀವ್ರ ಭಾವುಕರಾಗಿ ಮಾತನಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವರಿಷ್ಠರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಡ್ತಾರೆ. ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ. ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ವರಿಷ್ಠರು ನಮಗೆ ಏನು ಮಾಡಲು ಹೋಳುತ್ತಾರೋ ಅದನ್ನು ಮಾಡುತ್ತೇವೆ. ಗುಡಿಸು ಎಂದರೆ ಗುಡಿಸುತ್ತೇವೆ, ಒರೆಸು ಎಂದರೆ ಒರೆಸುತ್ತೇವೆ ಎನ್ನುತ್ತಾ …

Read More »

ಬಂಟ್ವಾಳ: ಮರಕ್ಕೆ ಡಿಕ್ಕಿ ಹೊಡೆದ ಬೈಕ್‌- ಸವಾರ ಸಾವು

ಬಂಟ್ವಾಳ:ಬೈಕ್ ಸವಾರನೋರ್ವ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾ.12 ರಂದು ಮಂಗಳವಾರ ಮುಂಜಾವಿನ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಅವಿವಾಹಿತ ಯುವಕ.ಅಕ್ಷಿತ್ ಅವರು ಮಂಗಳೂರು ಖಾಸಗಿ ಕಂಪೆನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಸುಮಾರು ‌4 ಗಂಟೆಗೆ ಹೊರಟಿದ್ದ.ಅಂದಾಜು 4.30 ಗಂಟೆಗೆ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ …

Read More »

ಕುಂದಾಪುರ: ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ?

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿಜೆಪಿ ಹಿರಿಯ ಮುಖಂಡ ಬಿ ಎಂ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ಸೋಮವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಾಜ್ಯಸಭಾ ಸದಸ್ಯ ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಯ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಎಂ ಸುಕುಮಾರ್ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡದೆ ಗುರುರಾಜ್ ಗಂಟಿಹೊಳೆಯವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಇದರಿಂದ ಬೇಸರಗೊಂಡಿದ್ದ ಮಾಜಿ ಶಾಸಕ ಬಿ ಎಂ …

Read More »

ಮಂಗಳೂರು: ವೃದ್ದ ಮಾವನ ಮೇಲೆ ಸೊಸೆಯಿಂದ ಹಲ್ಲೆ- ಸೊಸೆ ಅರೆಸ್ಟ್

ಮಂಗಳೂರು: ಸೊಸೆಯೊಬ್ಬಳು ತನ್ನ ವೃದ್ದ ಮಾವನಿಗೆ ಮನಸೊ ಇಚ್ಚೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದ ಸೊಸೆ ಉಮಾಶಂಕರಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(86) ಎಂದು ಗುರುತಿಸಲಾಗಿದೆ. ಪದ್ಮನಾಭ ಅವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ …

Read More »

You cannot copy content of this page.