ಉಳ್ಳಾಲ: ದಿನಾಂಕ 19-04-2024 ಉಳ್ಳಾಲ ಬೀಚ್ ನಲ್ಲಿ ತಾಲೂಕು ಪಂಚಾಯತ್ ಉಳ್ಳಾಲ ಹಾಗೂ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್, ಸೋಮೆಶ್ವರ ಪುರಸಭೆ ಸಹಭಾಗಿತ್ವದಲ್ಲಿ ಮರಳು ಆಕೃತಿ ಜತೆಗೆ ಮೇಣದ ಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಸಭೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಜನಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಶೀನಶೆಟ್ಟಿ ಹಾಗೂ ಕೃಷ್ಣಪ್ಪ ಮೂಲ್ಯರು ನೆರೆದಿದ್ದವರಿಂದ ಮತದಾನ ಘೋಷಣೆ ಮೊಳಗಿಸಿದರು. ನಂತರ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಕೆ ಐಎಎಸ್ ಅವರು ಬೆಲೂನ್ …
Read More »ರಾಜಕೀಯ
ಕಡಬ: ‘ಆ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ’- ಸದಾನಂದ ಗೌಡ
ಕಡಬ: ಒಕ್ಕಲಿಗ ಸಮಾಜದ ಕಾರ್ಯಕ್ರಮವೊಂದರಲ್ಲಿ ನಾನು ಹೇಳಿದ್ದ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನಕ್ಕೆ ಕುತ್ತು ಬಂತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಹೇಳಿದ್ದಾರೆ. ಮಂಗಳವಾರ ಕಡಬದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಒಕ್ಕಲಿಗ ಮುಖಂಡರು ಸೇರಿ ಭೈರವೈಕ್ಯ ಆದಿಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರಿಗಾಗಿ ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೆವು. “ನಾನು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿ ಆದಿಚುಂಚನಗಿರಿ ಸ್ವಾಮೀಜಿಯವರ ಆಶೀರ್ವಾದ ಪಡೆದು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ” ಎಂದು ಹೇಳಿದ್ದೇ ನನ್ನ ಸ್ಥಾನಕ್ಕೆ ಮುಳುವಾಯಿತು ಎಂದು ಬೇಸರ ವ್ಯಕ್ತಪಡಿಸಿದರು ಮುಖ್ಯಮಂತ್ರಿ …
Read More »ಇನ್ನೆರಡು ವರ್ಷದಲ್ಲಿ ಕಾಂಗ್ರೆಸ್ ಇಬ್ಬಾಗ, ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ- ಖ್ಯಾತ ಜ್ಯೋತಿಷಿ ಭವಿಷ್ಯ
ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳ ಭರವಸೆಯ ಆಧಾರದಲ್ಲಿ ಚುನಾವಣಾ ಎದುರಿಸಿದ್ದ ಕಾಂಗ್ರೆಸ್ 135 ಕ್ಷೇತ್ರಗಳನ್ನು ಗೆದ್ದುಕೊಂಡು ಸರಕಾರ ರಚನೆ ಮಾಡಿದೆ. ಇದೀಗ ಕರ್ನಾಟಕದ ರಾಜಕೀಯ ಭವಿಷ್ಯದ ಕುರಿತು ಖ್ಯಾತ ಜ್ಯೋತಿಷಿ ಅನಿರುದ್ ಮಿಶ್ರ ಭವಿಷ್ಯ ನುಡಿದಿದ್ದಾರೆ. ಅನಿರುದ್ ಮಿಶ್ರ ಹಿಂದೆ 2017ರಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಭವಿಷ್ಯ ನುಡಿದಿದ್ದು, ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಇನ್ನೂ ಎರಡು ವರ್ಷ ಮೂರು ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದಿದ್ದರು. ಅದರಂತೆ 2019 ರ ನವಂಬರ್ 9 ರಂದು ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ದೊರೆತಿದ್ದು, …
Read More »ಮಧ್ಯಪ್ರದೇಶದಲ್ಲೂ ಬಿಜೆಪಿಗೆ ಆಘಾತ? ಕರ್ನಾಟಕದ ನಿಖರ ಭವಿಷ್ಯ ನುಡಿದಿದ್ದ ಸಿ -ಡೈಲಿ ಟ್ಯ್ರಾಕರ್ ಹೇಳಿದ್ದೇನು?
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿ ಬೀಗಿದ್ದ ಆಡಳಿತಾರೂಡಾ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿತ್ತು, ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಪಡೆಯುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ದೇಶದಲ್ಲಿ ನೆಲಕಚ್ಚಿದ್ದ ಕಾಂಗ್ರೆಸ್‌ಗೆ ಈ ಗೆಲುವು ಮರುಜೀವ ನೀಡಿದೆ ಎಂದೇ ಹೇಳಲಾಗಿತ್ತು. ಕರ್ನಾಟಕದ ನಂತರ ಮಧ್ಯಪ್ರದೇಶದಲ್ಲಿ ಕೂಡ ಈ ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದೆ. ಕರ್ನಾಟಕ ಚುನಾವಣೆ ಸೋಲಿನ ನಂತರ, ಬಿಜೆಪಿ ಮಧ್ಯಪ್ರದೇಶದಲ್ಲಿ ಕೂಡ ಸೋಲನುಭವಿಸಲಿದ್ದು, ಮತ್ತೊಂದು ಆಘಾತ ಕಾದಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ನವೆಂಬರ್ ಅಥವಾ …
Read More »5 ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು ತಿಳಿಯಲೇಬೇಕಾದ ಅಂಶಗಳು!
ಬೆಂಗಳೂರು: ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಮಾತಿಗೆ ಬದ್ಧವಾಗಿ ತೀರ್ಮಾನ ತೆಗೆದುಕೊಂಡಿದೆ. 5 ಗ್ಯಾರಂಟಿ ಯೋಜನೆ ಜಾರಿಗೆ ಬೇಕಾದ ಎಲ್ಲಾ ತಯಾರಿ ಮಾಡಿ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಹಾಗಾದ್ರೆ ಗ್ಯಾರಂಟಿ ಯೋಜನೆಗಳ ರೂಲ್ಸ್ ಏನು? ಇಲ್ಲಿ ತಿಳಿಯಿರಿ. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ 5 ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಯಲೇಬೇಕಾದ ಮಾಹಿತಿಯನ್ನ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಯೋಜನೆ ಜಾರಿ & ಯೋಜನೆಯ ರೂಲ್ಸ್ ಬಗ್ಗೆಯೂ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಹಾಗಾದ್ರೆ ಗ್ಯಾರಂಟಿ ಯೋಜನೆಗಳ ಬಗ್ಗೆ ನೀವು …
Read More »ನೀವು ಈಡೇರಿಸಿದ ಭರವಸೆಗಳೆಷ್ಟು? ಪ್ರತಾಪ್‌ಸಿಂಹಗೆ ಲಕ್ಷ್ಮಣ ಪ್ರಶ್ನೆ
ಬೆಂಗಳೂರು: ಜೂನ್ 1 ರಿಂದ ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕಿಡಿ ಕಾರಿದ್ದಾರೆ. ನಾವು ಕೊಟ್ಟಿರುವ ಭರವಸೆಗಳನ್ನು ಈಡೇರಿಸುವುದು ಶತಸಿದ್ಧ, ಆದರೆ ಬಿಜೆಪಿ ಕೊಟ್ಟಿರುವ ಎಷ್ಟು ಭರಸೆಗಳನ್ನು ಈಡೇರಿಸಿದೆ ಎಂದು ಪ್ರಶ್ನೆ ಮಾಡಿದರು. ಐದು ಭರವಸೆಗಳನ್ನು ಕೊಟ್ಟಿರುವುದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಹಿಂದೆ ಮುಂದೆ ಯೋಚಿಸದೇ ಮಾತನಾಡಲ್ಲ, ಅವರು ಮಾತನಾಡಿದ್ದಾರೆ ಎಂದರೆ ಅದನ್ನು ಮಾಡುತ್ತಾರೆ ಎಂದು ಅರ್ಥ. ನೂರಕ್ಕೆ ನೂರರಷ್ಟು ಅನುಷ್ಠಾನ …
Read More »ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾವ ಯಾವ ಸಚಿವರಿಗೆ ಯಾವ ಇಲಾಖೆಯ ಜವಾಬ್ದಾರಿ ಸಿಕ್ಕಿದೆ ಎನ್ನುವುದರ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ
ಬೆಂಗಳೂರು, ಮೇ 27: ತೀವ್ರ ಕುತೂಹಲ ಮೂಡಿಸಿದ್ದ ಸಿಎಂ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಮುಗಿದಿದ್ದು, ಸಚಿವ ಸ್ಥಾನದ ಜಿದ್ದಾಜಿದ್ದಿಗೆ ತೆರೆ ಬಿದ್ದಿದೆ. ಇಂದು ಎರಡನೇ ಹಂತದಲ್ಲಿ 24 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಒಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಒಟ್ಟು 34 ಜನರ ಸರ್ಕಾರದ ಸಂಪುಟ ಸೇರಿದ್ದಾರೆ. 136 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಸಿಎಂ ಸ್ಥಾನ ಹೊರತು ಪಡಿಸಿ ಮತ್ತೆ ಯಾವ ವಿಚಾರದಲ್ಲೂ ರಾಜಕೀಯ ಕೆಸರೆರಚಾಟಕ್ಕೆ ಅವಕಾಶ ನೀಡದೇ …
Read More »ತಾತ್ಕಾಲಿಕ ನೇಮಕಾತಿಯಲ್ಲಿ ಕೆಲಸ ನೀಡಿ ಪ್ರಚಾರ ಪಡೆದಿದ್ದರು. : ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ವಿಚಾರದಲ್ಲಿ ಬಿಜಿಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ
ಮಂಗಳೂರು: ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಯೋಗ್ಯತೆ ಅಂದಿನ ಮುಖ್ಯಮಂತ್ರಿಯವರಿಗೆ ಇರಲಿಲ್ಲ. ತಾತ್ಕಾಲಿಕ ನೇಮಕಾತಿಯಲ್ಲಿ ಕೆಲಸ ನೀಡಿ ಪ್ರಚಾರ ಪಡೆದಿದ್ದರು. ಕಾಂಗ್ರೆಸ್ ಸರಕಾರ ನೆಟ್ಟಾರು ಪತ್ನಿಗೆ ಸರಕಾರಿ ಉದ್ಯೋಗ ನೀಡಲಿದೆ ಮಂಗಳೂರಿನ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಕಿಡಿಕಾರಿದರು.
Read More »ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯುಟಿ ಖಾದರ್‌ಗೆ ಅಭಿನಂದನೆ ಸಲ್ಲಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್
ಮಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮಂಗಳೂರು ಕ್ಷೇತ್ರದ ಶಾಸಕ ಯುಟಿ ಖಾದರ್ ಅವರನ್ನು ಜಿ.ಪಂ. ಮಾಜಿ ಉಪಾಧ್ಯಕ್ಷ ಪಿ. ಧರಣೇಂದ್ರ ಕುಮಾರ್ ಅಭಿನಂದಿಸಿದರು.ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಂಗಳೂರಿನ ನಿರೀಕ್ಷಣಾ ಮಂದಿರದಲ್ಲಿ ಹೂಗುಚ್ಛ ನೀಡಿ ಗೌರವಿಸಿದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಇಸ್ಮಾಯಿಲ್ ಕೆ. ಪೆರಿಂಜೆ, ಅರವಿಂದ ಶೆಟ್ಟಿ ಇದ್ದರು.
Read More »ವೇಣೂರು ಗ್ರಾ.ಪಂ.: ರಾಜೀನಾಮೆಯ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಬೆಂಬಲಿತ ಸದಸ್ಯ!
ವೇಣೂರು, ಮೇ 27: ಒಂದಲ್ಲೊಂದು ವಿಚಾರಗಳಲ್ಲಿ ಸದಾ ಸುದ್ದಿಯಾಗುತ್ತಿರುವ ವೇಣೂರು ಗ್ರಾ.ಪಂ. ಪ್ರಸ್ತುತ ಆಡಳಿತದ ಚುಕ್ಕಾಣಿಯ ಬಳಿಕ ತಣ್ಣಗಾಗಿತ್ತು. ಇದೀಗ ಮತ್ತೆ ಸದಸ್ಯರಿಂದ ರಾಜೀನಾಮೆಯ ಮಾತು ಕೇಳಿ ಬಂದಿದ್ದು, ಆಡಳಿತ ಮಂಡಳಿಯಲ್ಲಿ ಹೊಂದಾಣಿಕೆ ಕೊರತೆ ಉಂಟಾಗಿದೆಯೇ ಅನ್ನುವ ಅನುಮಾನ ಕಾಡತೊಡಗಿದೆ.ಹೌದು ಹೋರಾಟಗಳ ಹಾದಿಯಲ್ಲೇ ಸಾಗುತ್ತಿರುವ ಅನೂಪ್ ಜೆ. ಪಾಯಸ್ ಅವರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಗ್ರಾ.ಪಂ.ನ ಸದಸ್ಯ ಸ್ಥಾನಕ್ಕೆ ರಾಜೀರಾಮೆ ನೀಡುವ ಬಗ್ಗೆ ಕ್ಲೂ ನೀಡಿದ್ದಾರೆ.ಅವರು ಕಾಂಗ್ರೆಸ್ ನಾಯಕರ ಮುನಿಸಿನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ವೇಣೂರು ಗ್ರಾ.ಪಂ.ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯ ಸ್ಥಾನಕ್ಕೆ ಬಹುಮತಗಳಿಂದ ಚುನಾಯಿತರಾಗಿದ್ದರು. …
Read More »