ರಾಜ್ಯ

ಗಮನಿಸಿ : ‘ಇಂದು ದ್ವಿತೀಯ ಪಿಯುಸಿ ಫಲಿತಾಂಶ’ ಎಂಬ ಸುದ್ದಿ ಸುಳ್ಳು : ಪರೀಕ್ಷಾ ಮಂಡಳಿ ಸ್ಪಷ್ಟನೆ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 23 ರವರೆಗು ನಡೆಸಲಾಗಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ, ತಕ್ಷಣ ಶುರುವಾಗಿತ್ತು. ಕರ್ನಾಟಕದ 1,124 ಕೇಂದ್ರಗಳಲ್ಲಿ ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಹೀಗಾಗಿ ಇಂದು ಫಲಿತಾಂಶವು ಹೊರ ಬೀಳಲಿದೆ, ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆನ ನಡೆಸಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು. ಅದು ಸುಳ್ಳು ಎಂದು ಈಗ …

Read More »

ವಾಹನ ಸವಾರರ ಗಮನಕ್ಕೆ : ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಫಿಕ್ಸ್

 ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಬೀಳುವುದಂತು ಗ್ಯಾರಂಟಿ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, …

Read More »

ಮೈಮೇಲೆ ಬಿದ್ದ ಕೇಬಲ್ ವೈರ್‌- ನರ್ಸ್ ಬಲಿ..!!

 ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್‌ವೊಬ್ಬರನ್ನ ಕೇಬಲ್ ವೈರ್  ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್(36) ಮೃತ ದುರ್ದೈವಿ. ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್‌ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ …

Read More »

ರೀಲ್ಸ್ ರಾಣಿ ಸೋನು ಶ್ರೀನಿವಾಸ್‌ ಗೌಡ ಅರೆಸ್ಟ್

ಸೋನು ಶ್ರೀನಿವಾಸ್‌ ಗೌಡ ಸೇವಂತಿ ಎನ್ನುವ ಬಡ ಹುಡುಗಿಯನ್ನು ದತ್ತು ತೆಗೆದುಕೊಂಡಿರುವ ವಿಚಾರ ಗೊತ್ತೇ ಇದೆ. ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ವಿಚಾರವಾಗಿ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಉತ್ತರ ಕರ್ನಾಟಕದ 8 ವರ್ಷದ ಮಗುವನ್ನ ಸೋನು ದತ್ತು ತೆಗೆದುಕೊಂಡಿದ್ದು, ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ ಸೋನುಗೌಡ ವಿಡಿಯೊದಲ್ಲಿ ಮಗುವಿನ ಮಾಹಿತಿ ಹಂಚಿಕೊಂಡಿದ್ದರು. ಈಗ ಪೊಲೀಸರು ಸೋನು ಗೌಡ ಅವರನ್ನು ಬಂಧಿಸಿದ್ದಾರೆ. ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Read More »

ಕಾಂಗ್ರೆಸ್ ಸೇರುವುದಿಲ್ಲ ; ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ: ಡಿವಿ ಸದಾನಂದಗೌಡ ಶಪಥ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಸಂಸದ ಡಿವಿ ಸದಾನಂದಗೌಡ ಅವರು ಸುದ್ದಿಗೋಷ್ಠಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಶುದ್ಧೀಕರಣ ಮಾಡುವುದಾಗಿ ಶಪಥ ಮಾಡಿದ್ದಾರೆ. ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ. ಎನ್​ಡಿಎಗೆ ಜೆಡಿಎಸ್ …

Read More »

ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಜೆಪಿ ನಗರದ 3 ನೇ ಹಂತದಲ್ಲಿ ಈ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಘಟನೆ ನಡೆದ ಸ್ಥಳಕ್ಕೆ ಜೆಪಿ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.   ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಪತಿ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More »

ದ್ವಿತೀಯ ಪಿಯು ಮೌಲ್ಯಮಾಪನಕ್ಕೆ ವಿರೋಧ

ಬೆಂಗಳೂರು: ಮಾರ್ಚ್‌ 22ರಂದು ದ್ವಿತೀಯ ಪಿಯು ಪರೀಕ್ಷೆ ಮುಕ್ತಾಯಗೊಳ್ಳಲಿದ್ದು, ಮಾರ್ಚ್‌ 23ರಂದೇ ಮೌಲ್ಯಮಾಪನ ಆರಂಭ ಗೊಳ್ಳುತ್ತಿರುವುದಕ್ಕೆ ಉಪನ್ಯಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮೌಲ್ಯಮಾಪನ ಬಹಿ ಷ್ಕರಿಸಬೇಕೆಂಬ ತೀರ್ಮಾನದಿಂದ ರಾಜ್ಯ ಪ.ಪೂ. ಕಾಲೇಜುಗಳ ಉಪನ್ಯಾ ಸಕರ ಸಂಘ ಹಿಂದೆ ಸರಿದಿದೆ.ರಾಜ್ಯದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸುಮಾರು 6.98 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, 36 ಲಕ್ಷ ಪತ್ರಿಕೆಗಳ ಮೌಲ್ಯಮಾಪನ ನಡೆಯಬೇಕಿದೆ. ವಾರ್ಷಿಕ ಪರೀಕ್ಷೆ-1 ಪೂರ್ಣಗೊಳಿಸಿ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ನಡೆಸಿ ವಾರ್ಷಿಕ ಪರೀಕ್ಷೆ-2ಕ್ಕೆ ತಯಾರಿ ನಡೆಸುವುದು ಮತ್ತು ಚುನಾವಣ ಪ್ರಕ್ರಿಯೆಯಲ್ಲಿ ಉಪನ್ಯಾಸಕರು …

Read More »

ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ

ಶಿವಮೊಗ್ಗ: ಎರಡು ದಿನಗಳ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕಲಬುರಗಿಯಲ್ಲಿ ರಣಕಹಳೆ ಮೊಳಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇಂದು(ಮಾ.18) ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕರುನಾಡ ಕಣವನ್ನು ರಂಗೇರಿಸಲಿದ್ದಾರೆ. ಇಂದು ಮಧ್ಯಾಹ್ನ 1.15ಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸುವ ಪ್ರಧಾನಿ ಅವರು 40 ಎಕರೆ ವಿಸ್ತೀರ್ಣವಿರುವ ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗ ವಹಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ …

Read More »

ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಹೆಸರು ಘೋಷಣೆ-ಈಶ್ವರಪ್ಪ ಆಕ್ರೋಶ; ಶಿವಮೊಗ್ಗದಿಂದ ಬಂಡಾಯ?

ಶಿವಮೊಗ್ಗ: ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗುತ್ತಿದ್ದಂತೆ ಹಾವೇರಿ ಕ್ಷೇತ್ರಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾದುದನ್ನು ಕಂಡು ಮಾಜಿ ಸಿಎಂ ಕೆ.ಎಸ್. ಈಶ್ವರಪ್ಪ ಅವರು ಭಾರೀ ಆಕ್ರೋಶ ಹೊರ ಹಾಕಿ ಬೆಂಬಲಿಗರ ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ”ಯಡಿಯೂರಪ್ಪ ಅವರು ನನಗೆ ಮೋಸ ಮಾಡಿದ್ದಾರೆ. ಕಾಂತೇಶ್ ಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಮಾರ್ಚ್ 15 ರಂದು ಸಂಜೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸುತ್ತೇನೆ. ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ನಾನು …

Read More »

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ – ಬಾಂಬರ್‌ಗೆ ಪರಿಚಯವಿದ್ದ ವ್ಯಕ್ತಿ NIA ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ ಶಂಕಿತ ಆರೋಪಿಯನ್ನು ಬಳ್ಳಾರಿ ಮೂಲದ ಶಬ್ಬೀರ್ ಎಂದು ಗುರುತಿಸಲಾಗಿದ್ದು, ಈತನನ್ನು ಎನ್‌ಐಎ ವಶಕ್ಕೆ ಪಡೆದಿದೆ. ಬಳ್ಳಾರಿಯ ಕೌಲ್‌ ಬಜಾರ್‌ ನಿವಾಸಿ ಶಬ್ಬೀರ್‌ನನ್ನು ಇಂದು ಮುಂಜಾನೆ 4 ಗಂಟೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ್ ಎನ್ನಲಾಗಿದೆ. ಮಾರ್ಚ್ 1 ರಂದು ಪ್ರಸಿದ್ಧ ವೈಟ್‌ಫೀಲ್ಡ್ ಉಪಾಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ IED …

Read More »

You cannot copy content of this page.