ರಾಜ್ಯ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ಬಿಎಸ್​ವೈ ಪ್ರತಿಕ್ರಿಯೆ

ಚಿಕ್ಕಮಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು. ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೊಂದಲವಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್​ವೈ, ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ. ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು. ಹೀಗಾಗಿ ಕರ್ನಾಟಕದ …

Read More »

ಕಸ ಎಸೆಯಲು ಹೋದ ಯುವತಿಗೆ ‘ಲೈಂಗಿಕ ಕಿರುಕುಳ’ : ಖಾಸಗಿ ಭಾಗ ಮುಟ್ಟಿ, ಕಿಡಿಗೇಡಿಗಳಿಂದ ಹಲ್ಲೆ

ಸ್ನೇಹಿತನೊಂದಿಗೆ ರಾತ್ರಿಯ ವೇಳೆ ಯುವತಿಯವರು ಕಸ ಎಸೆಯಲು ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ಯುವತಿಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕವಾಗಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲದಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ ವೇಳೆ ಕಸ ಎಸೆಯುವುದಕ್ಕೆ ಹೋಗಿದ್ದ ಯುವತಿಯನ್ನು ಕಿಡಿಗೇಡಿಗಳು ತಬ್ಬಿಕೊಂಡು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ.ಫೆ.18ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ರಾತ್ರಿ ಯುವತಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಮಧ್ಯರಾತ್ರಿ ವೇಳೆ ಕಸ ಎಸೆಯಲು ಹೋಗಿದ್ದಳು. ಈ ವೇಳೆ ಕೊರಮಂಗಲ ಆಟೋ ಸ್ಟಾಂಡ್ …

Read More »

ಲೋಕಸಭೆ ಚುನಾವಣೆ: ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ :5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ‌‌

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಚರ್ಚೆ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಈ ಬೆಳವಣಿಗೆಯ ಮಧ್ಯೆಯೇ ʼಗೋಬ್ಯಾಕ್ ಶೋಭಾʼ ಪತ್ರ ಅಭಿಯಾನ ಶುರುವಾಗಿದೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವ ಬೆನ್ನಲ್ಲೇ ʼಗೋಬ್ಯಾಕ್ ಶೋಭಾʼ ಪತ್ರ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಆರಂಭಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರ ನಾಯಕರಿಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ. ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದರೂ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯೇನೂ ನೀಡಿಲ್ಲ. ಈ ಹಿನ್ನಲೆಯಲ್ಲಿ …

Read More »

SSLC, PUC 2024 ಪರೀಕ್ಷೆಗೆ ಡೇಟ್ ಫಿಕ್ಸ್ ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ  ಪರೀಕ್ಷೆ ಹಿನ್ನೆಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಟಿ ಮಾಡಿ ವೇಳಾಪಟ್ಟಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1/03/24 ರಿಂದ 22/03/24 ರವರೆಗೆ ನಡೆಯುತ್ತೆ. SSLC 25/03/24 ರಿಂದ 6/4/ 24 ವರೆಗೆ ನಡೆಯುತ್ತೆ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ನೋಂದಣಿ ಮಾಡಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ. SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ ಎಲ್ಲ ಪರೀಕ್ಷೇಗೆ ನೋಂದಣಿ …

Read More »

ಗೃಹಲಕ್ಷ್ಮಿ ಯೋಜನೆ 2000 ರೂ. : ತಕ್ಷಣ ಹಣ ಬರಲು ಈ ಕೆಲಸ ಮಾಡಿ

ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣವನ್ನು ಕೂಡ ಫೆಬ್ರವರಿ ಆರನೇ ತಾರೀಖಿನಿಂದ ಬಿಡುಗಡೆ ಮಾಡಲಾಗಿದೆ. ಎಲ್ಲ ಮಹಿಳೆಯರ ಖಾತೆಗೆ 6ನೇ ಕಂತಿನ ಹಣ ಬಿಡುಗಡೆ ಆಗುವ ಹೊತ್ತಿಗೆ ಫೆಬ್ರವರಿ ತಿಂಗಳ ಕೊನೆ ತಲುಪಬಹುದು. ನಿಮ್ಮ ಖಾತೆಗೆ ಹಣ ಬರಬೇಕು ಅಂದ್ರೆ ತಕ್ಷಣ ಬ್ಯಾಂಕ್ ಗೆ ಹೋಗಿ ಇ-ಕೆವೈಸಿ ಪ್ರಕ್ರಿಯೆ ಹಾಗೂ NPCI ಸರಿಯಾಗಿದೆಯೋ ಇಲ್ಲವೋ ಎನ್ನುವುದನ್ನು ಚೆಕ್ ಮಾಡಿಕೊಳ್ಳಿ. ಇದನ್ನು ನೀವು ಸರಿ ಮಾಡಿಸಿಕೊಳ್ಳದಿದ್ರೆ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ.

Read More »

ಹೊಸ ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್; ಸಿದ್ದರಾಮಯ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಹೊಸ ರೇಷನ್ ಕಾರ್ಡ್‌ಗಾಗಿ ಕಾಯುತ್ತಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಡಲಾಗಿದೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ‌ ಮಾತ್ರ ತಕ್ಷಣ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಎಂದಿದ್ದಾರೆ. ಹೊಸ ಪಡಿತರ ಚೀಟಿಗಾಗಿ ಸಲ್ಲಿಸಿದ 2.95 ಲಕ್ಷ ಅರ್ಜಿ ಇನ್ನೂ ಬಾಕಿ‌ ಇವೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಕಾರ್ಡ್‌ಗೆ ಅರ್ಜಿ‌ ಸಲ್ಲಿಕೆ ಸ್ಥಗಿತವಾಗಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೂ 57 ಸಾವಿರ ಹೊಸ ಕಾರ್ಡ್‌ಗಳನ್ನು …

Read More »

BUDGET BREAKING: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್ ಯೋಜನೆ’ ಪ್ರಕಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ …

Read More »

‘ಓ ನಲ್ಲ, ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ’ಎಂದ ಪತ್ನಿ, ನೊಂದ ಪತಿ ಆತ್ಮಹತ್ಯೆ..!

ಎಲ್ಲಾರ ಬಾಯಲ್ಲಿ ಬರೋದು ಈ ಹಾಡು.. ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದ್ದು ಯುವಕರೆಲ್ಲ ರೀಲ್ಸ್ ನಲ್ಲೆ ಪ್ರಚಾರಗಿಟ್ಟಿಸಿಕೊಂಡಿದಂತೂ ನಿಜ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಮಹಿಳೆಯೋರ್ವಳು ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ  ಹಾಡಿಗೆ ರೀಲ್ಸ್​ ಮಾಡಿದ್ದು ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ,ಮೃತರನ್ನು ಕುಮಾರ್ (33) ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ …

Read More »

ಮಾಜಿ ಪ್ರಧಾನಿ ದೇವೇಗೌಡ ದಿಢೀರ್‌ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 90 ವರ್ಷದ ದೇವೇಗೌಡರಿಗೆ ಗುರುವಾರ ಬೆಳಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದರು ಎನ್ನಲಾಗಿದೆ. ದೇವೇಗೌಡರು ಆರೋಗ್ಯವಾಗಿಯೇ ಇದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೀಗಾಗಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅವರು ಆಹಾರ …

Read More »

2 ವರ್ಷದ ಕಂದಮ್ಮನ ಕೊಂದು ತಾನು ನೇಣಿಗೆ ಶರಣಾದ ತಾಯಿ..!

ಕೌಟುಂಬಿಕ ಕಲಹಕ್ಕೆ ತನ್ನ 2 ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಲೀಲಾ (23) ವರ್ಷಿತಾ (2) ಎಂದು ಗುರುತಿಸಲಾಗಿದೆ. ಶಿವಲೀಲಾ ಚಿಂಚೋಳಿ ತಾಲ್ಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮೂರು ವರ್ಷದ ಹಿಂದೆ ಮದುವೆಯಾಗಿದೆ. ಆದರೆ ನಿನ್ನೆ ಸಂಜೆ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಲೀಲಾ ಮದುವೆಯಾದ ಬಳಿಕ ಗಂಡ, ಅತ್ತೆ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ಗಂಡ, ಅತ್ತೆಯ ಕಿರುಕುಳಕ್ಕೆ ತವರು ಮನೆಗೆ ಶಿವಲೀಲಾ ಬಂದಿದ್ದಳು. ಎರಡು …

Read More »

You cannot copy content of this page.