ಉಡುಪಿ

ಪಡುಬಿದ್ರಿ : ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು..!

ಉಡುಪಿ :ವಾಹನವೊಂದು ಅಪರಿಚಿತ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ ಕಾರಣ ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ. ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

Read More »

ಮಣಿಪಾಲ: ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ  ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ. ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿದ್ದರು. ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮನ್ ರನ್ನು ಪರೀಕ್ಷಾ ಮೇಲ್ವಿಚಾರಕರು …

Read More »

ದಿವಂಗತ ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ – 2024

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ,ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ  ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ’-2024 ಆಯೋಜಿಸಲಾಗಿದೆ. 18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಯಾರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕಥೆ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 30, 2024. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ. 5000 ಹಾಗೂ 3000 ದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ …

Read More »

ಕಾಪು : ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವ ಪತ್ತೆ..!

ಉಡುಪಿ ಜಿಲ್ಲೆಯ ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ. ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅಥಿತಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೆರೆಯ ದಡದಲ್ಲಿ ಲ್ಯಾಪ್‌ಟಾಪ್ ಸಹಿತ ಕೆಲ ಪರಿಕರಗಳು ಪತ್ತೆಯಾಗಿದೆ. ದೇವಳದ ಸಿಸಿ …

Read More »

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಯ ರಕ್ಷಣೆ

ಉಡುಪಿ: ಚಲಿಸುತ್ತಿರುವ ರೈಲಿನಲ್ಲಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ರಕ್ಷಿಸಿರುವ ಘಟನೆ ಸೋಮವಾರ ರಾತ್ರಿ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಡೆದಿದೆ. ದೆಹಲಿಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಯೋರ್ವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಗರ್ಭಿಣಿ ಅಸಹಾಯಕ ಪರಿಸ್ಥಿತಿಯಲ್ಲಿದ್ದರು. ಇಂದ್ರಾಳಿ ನಿಲ್ದಾಣದಲ್ಲಿ ರೈಲು ನಿಲುಗಡೆಯಾದಾಗ ರೈಲ್ವೆ ಮುಖ್ಯ ಆರೋಗ್ಯಾಧಿಕಾರಿ ಸ್ಟಿವನ್ ಜಾರ್ಜ್ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡುವರು ಗರ್ಭಿಣಿಯನ್ನು ಸರಕಾರಿ ಮಹಿಳಾ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲುಪಡಿಸಿದರು. ಮಹಿಳೆಯ ಜೊತೆ ಪತಿ ಇದ್ದರು. ಕೇರಳ …

Read More »

ಕಾರ್ಕಳ: ಛಾಯಾಗ್ರಾಹಕ ದೀಪಕ್ ಶೆಟ್ಟಿ ಹೃದಯಾಘಾತದಿಂದ ನಿಧನ..!

ಕಾರ್ಕಳ: ತಾಲೂಕಿನ ತೆಳ್ಳಾರು ನಿವಾಸಿ ಛಾಯಾಗ್ರಾಹಕ ದೀಪಕ್ ಶೆಟ್ಟಿ (45) ಹೃದಯಾಘಾತದಿಂದ ನಿನ್ನೆ ನಿಧನ ಹೊಂದಿದ್ದಾರೆ. ಕಡ್ತಲ ಗ್ರಾಮದ ಕುಕ್ಕುಜೆಯಲ್ಲಿ ಗೃಹಪ್ರವೇಶದ ವಿಡಿಯೋಗ್ರಫಿ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ದೀಪಕ್ ಕೊನೆಯುಸಿರೆಳೆದಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More »

ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ 2.76 ಲಕ್ಷ ಮೌಲ್ಯದ ಗಾಂಜಾ ನಾಶ

ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000 ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್‌ ಕೆ., ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪಿ.ಎ.ಹೆಗಡೆ, ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಪೊಲೀಸ್‌ ಉಪಾಧೀಕ್ಷಕರಾದ …

Read More »

ಉಡುಪಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಸರ್ಚ್ ವಾರೆಂಟ್ ನೊಂದಿಗೆ ಲೋಕಾಯುಕ್ತ ಎಂಟ್ರಿ..!

ಉಡುಪಿ : ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ ಘಟನೆ ನಡೆದಿದೆ  ಎಂದು ತಿಳಿದು ಬಂದಿದೆ. ಉಡುಪಿ ಉಪನೋಂದಾವಣೆ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ತಾಲೂಕು ಕಚೇರಿಗಳಲ್ಲಿ ಭ್ರಷ್ಟಾ ಚಾರ ತಾಂಡವಾಡುತ್ತಿದೆ ಎಂದು ಇತ್ತೀಚೆಗೆ ವಕೀಲರೋಬ್ಬರು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರಿಗೆ ದೂರು ನೀಡಿದ್ದರು.  ಈ ಹಿನ್ನಲೆ ಲೋಕಾಯುಕ್ತ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲನೆ ನಡೆಸಿದ್ದಾರೆ. …

Read More »

ಉಡುಪಿ: ಮಂಗನ ಕಾಯಿಲೆ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್‌ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆರೆ ಜಿಲ್ಲೆಯಾದ ಶಿವಮೊಗ್ಗದಲ್ಲಿ 47, ಉತ್ತರ ಕನ್ನಡ ಜಿಲ್ಲೆಯಲ್ಲಿ 22 ಪ್ರಕರಣಗಳು ವರದಿಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಮಂಗನ …

Read More »

ಉಡುಪಿ:  ಅಯೋಧ್ಯೆ ಬಾಲರಾಮನಿಗೆ ತೊಟ್ಟಿಲು ಸೇವೆ – ರಘುಪತಿ ಭಟ್ ಕೊಡುಗೆ

ಉಡುಪಿ: ಶ್ರೀ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯಾ ರಾಮನ ಸನ್ನಿಧಿಯಲ್ಲಿ ನಡೆಯುತ್ತಿರುವ ಮಂಡಲೋತ್ಸವದ ವೈಭವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶ್ರೀಗಳ ಮಾರ್ಗದರ್ಶನದಂತೆ ಶ್ರೀಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗುತ್ತಿರುವಂತೆ ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ. ರಾಜಸ್ಥಾನದಲ್ಲಿ ಬೀಟಿಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಲಾಗಿದ್ದು, ಇದೀಗ ಅಯೋಧ್ಯೆಯತ್ತ ಹೊರಟಿದೆ. ಫೆ. 6 ರ ಸಂಜೆ ತೊಟ್ಟಿಲು …

Read More »

You cannot copy content of this page.