ಉಡುಪಿ

ಉಡುಪಿ: ಕಾಮಗಾರಿ ವೇಳೆ ಗುತ್ತಿಗೆದಾರ, ಇಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಅಪಘಾತವಾದರೆ ಕ್ರಿಮಿನಲ್‌ ಮೊಕದ್ದಮೆ – ಡಿಸಿ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರು ಅಥವಾ ಅಭಿಯಂತರ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧ ಪಟ್ಟ ಅಭಿಯಂತರರ ವಿರುದ್ಧವೂ ಕ್ರಿಮಿನಲ್‌ ಕೇಸ್‌ಗಳನ್ನು ಹಾಕುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಉಡುಪಿ ಹೊರವಲಯದ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಜಿಲ್ಲಾ ಪೊಲೀಸ್‌ …

Read More »

ಉಡುಪಿ: ಪಾತ್ರ ಮುಗಿಸಿ ವೇಷ ಕಳಚುತ್ತಿರುವಾಗಲೇ ಯಕ್ಷಗಾನ‌ ಕಲಾವಿದ ಹೃದಯಾಘಾತದಿಂದ ಸಾವು!

ಉಡುಪಿ: ನಾಲ್ಕು ದಶಕಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಅಪರೂಪದ ಕಲಾವಿದರೊಬ್ಬರು, ಯಕ್ಷಗಾನ ಪ್ರಸಂಗದಲ್ಲಿ ತನ್ನ ಕೊನೆಯ ಪಾತ್ರ ನಿರ್ವಹಣೆ ಮುಗಿಸಿ ಕೊನೆಯುಸಿರೆಳೆದ ಅಪರೂಪದ ವಿದ್ಯಮಾನ ಉಡುಪಿಯಲ್ಲಿ ಸಂಭವಿಸಿದೆ. ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (64 ವರ್ಷ) ನಿಧನರಾದವರು. ನಿನ್ನೆ (ಮೇ 1) ಕೋಟ ಗಾಂಧಿ ಮೈದಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ ರಾತ್ರಿ ಸುಮಾರು …

Read More »

ಡಾ‌! ಉಮೇಶ್ ಪ್ರಭು ಮಡಿಲಿಗೆ ಬಾಲ‌ ವಾತ್ಸಲ್ಯ ಸಿಂಧು ಪ್ರಶಸ್ತಿ.

ದೇವರ ಮೇಲೆ ವಿಶ್ವಾಸ ಇಟ್ಟು ಸೆ ಮಾಡಿದರೆ ನಮ್ಮ ಕೆಲಸಗಳು ಸಾ ಸಂಶಯ ಇಲ್ಲ ಎಂದು ಪೇಜಾವರ ಮಠದೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು. ಬುಧವಾರ ಶ್ರೀಕೃಷ್ಣ ಬಾಲನಿಕೇತನದಲ್ಲಿ ಶ್ರೀಕೃಷ್ಣ ಬಾಲನಿಕೇತನ, ವಿಶ್ವೇಶತೀರ್ಥ ಸೇವಾಧಾಮ, ಶ್ರೀ ಕೃಷ್ಣ ಸೇವಾಧಾಮ‌ ಟ್ರಸ್ಟ್ ವತಿಯಿಂದ ಕೊಡಮಾಡುವ ಬಾಲ್ಯ ವಾತ್ಸಲ್ಯ ಸಿಂಧು ಪ್ರಶಸ್ತಿಯನ್ನು ಸಂತೆಕಟ್ಟೆ ಕೃಷ್ಣಾನುಗ್ರಹ ಸಂಸ್ಥೆ ಚೇರ್ಮನ್ ಡಾ! ಉಮೇಶ್ ಪ್ರಭು ಅವರಿಗೆ ಪ್ರಧಾನ ಮಾಡಿ ಆಶೀರ್ವಚನ ನೀಡಿದರು. ಸಮಾಜದಲ್ಲಿ ಎಲ್ಲಿಯೂ ಅನಾಥಾಶ್ರಮ ಹಾಗೂ ವೃದ್ಧಾಶ್ರಮ ಇರಬಾರದು. ಶಿಕ್ಷಣದ ಜತೆಗೆ ಮೌಲ್ಯ ಮತ್ತು ಸಂಸ್ಕಾರ ಕಲಿಸಿಕೊಡಬೇಕು …

Read More »

ಉಡುಪಿ : ಹಾರ್ನ್ ಹಾಕಿದ್ದಕ್ಕೆ ಎಕ್ಸ್ ಪ್ರೆಸ್ ಬಸ್ ಚಾಲಕನಿಗೆ ಕಾರು ಚಾಲಕನಿಂದ ಹಲ್ಲೆ..!

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ  ಬಸ್ ಡ್ರೈವರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇರಿತಕ್ಕೊಳಗಾದ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್  ಪಡುಬಿದ್ರೆ ಯ ಎರ್ಮಾಳ್ ಬಳಿ ಮುಂದಿನಿಂದ ಹೋಗುತ್ತಿದ್ದ ಕಾರು ಚಾಲಕನಿಗೆ ಹಾರ್ನ್ ಹಾಕಿ ಓವರ್ ಡೇಕ್ ಮಾಡಲು ಯತ್ನಿಸಿದ್ದಾನೆ. ಬಸ್ಸಿನ ಕರ್ಕಶ ಹಾರ್ನ್‌ಗೆ  ಆಕ್ರೋಶಗೊಂಡ ಕಾರು ಚಾಲಕ ಬಸ್ಸನ್ನು ಅಡ್ಡಗಟ್ಟಿ ಚಾಲಕನ …

Read More »

ಉಡುಪಿಯ ಕುಮಾರಿ ಶ್ರದ್ಧಾ ಕೆ. ಭಟ್ ಇವರಿಂದ ಕಣ್ಮನ ಸೆಳೆಯುವ ನೃತ್ಯ ಪ್ರದರ್ಶನ

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ 22.04.2024 ರ ಸಂಜೆ ಕಾರ್ಯಕ್ರಮದಲ್ಲಿ ಉಡುಪಿಯ ಕುಮಾರಿ ಶ್ರದ್ಧಾ ಕೆ. ಭಟ್ ಇವರು ನೃತ್ಯ ಪ್ರದರ್ಶನ ನೀಡಿದರು . ಸಾಂಪ್ರದಾಯಿಕ ಪುಷ್ಪಅಂಜಲಿ ನೃತ್ಯದೊಂದಿಗೆ ಹೆಜ್ಜೆ ಹಾಕಿದ ಶ್ರದ್ಧಾ ಅವರು ತಿಲ್ಲಾನದೊಂದಿಗೆ ಕೊನೆಗೊಳಿಸಿದರು . ನಡುವೆ ಪ್ರದರ್ಶಿಸಿದ “ಆಡಿಸಿದಳೇ ಯಶೋಧ -ಜಗದೋದ್ಧಾರನ ” ಮತ್ತು “ದುರ್ಗೆ ” ನೃತ್ಯವು ಪ್ರೇಕ್ಷಕರನ್ನು ಕಣ್ಮನಗೊಳಿಸಿತ್ತು . ಕೀಳಂಜೆ ಶ್ರೀ ಕೃಷ್ಣರಾಜ …

Read More »

ಕರಂಬಳ್ಳಿ : ಮಲ್ಲಿಗೆ ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ,ಸನ್ಮಾನ

ಉಡುಪಿ ಜಿಲ್ಲಾ ಕೃಷಿಕ ಸಂಘ , ಕರಂಬಳ್ಳಿ ವಲಯ , ಕರಂಬಳ್ಳಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ಜಂಟಿ ಆಶ್ರಯದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ಪ್ರಾತ್ಯಾಕ್ಷಿಕೆ , ತೋಟಗಾರಿಕಾ ಹಣ್ಣು ಬೆಳೆಸುವ ಬಗ್ಗೆ ಮಾಹಿತಿ , ತಾರಸಿ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು . ಸಂಪನ್ಮೂಲ ವ್ಯಕ್ತಿಗಳಾಗಿ ರಾಮಕೃಷ್ಣ ಶರ್ಮ , ಬಂಟಕಲ್ಲು. (ಮಲ್ಲಿಗೆ ಕೃಷಿ ) ಕುದಿ ಶ್ರೀನಿವಾಸ ಭಟ್ (ಹಣ್ಣ್ಣಿನ ಬೆಳೆ ) ಹಾಗು ಕುಮಾರಸ್ವಾಮಿ ಉಡುಪ (ತಾರಸಿ ಕೃಷಿ) ಅವರು ವೈಜ್ಞಾನಿಕ ಪದ್ದತಿಯಲ್ಲಿ …

Read More »

ರಮಾಕಾಂತ ಪುರಾಣಿಕರಿಗೆ ಪಿಎಚ್ ಡಿ ಪದವಿ

ರಮಾಕಾಂತ ಪುರಾಣಿಕ್ ಹೆಚ್. ಇವರು ಮಂಡಿಸಿದ ‘Studies on the physical and NLO properties of Halogen substituted novel Chalcones’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಘಟಿಕೋತ್ಸವದಲ್ಲಿ ಪಿಎಚ್ ಡಿ ಪದವಿಯನ್ನು (ಡಾಕ್ಟರೇಟ್) ಪ್ರಧಾನ ಮಾಡಲಾಯಿತು. ರಮಾಕಾಂತ ಪುರಾಣಿಕರು ಎಂಎಸ್ಸಿ, ಎಂಟೆಕ್,ಎಂಫಿಲ್ ಪದವೀಧರರಾಗಿದ್ದು, ಡಾ ರವೀಂದ್ರ ಹೆಚ್ .ಜೆ (ಭೌತಶಾಸ್ತ್ರಮುಖ್ಯಸ್ಥರು, SMVITM ಬಂಟಕಲ್) ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇವರುಪ್ರಸ್ತುತ ಮಂಗಳೂರಿನ ರಥಬೀದಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದು, ಹಟ್ಟಿಯಂಗಡಿ …

Read More »

ಕುಂದಾಪುರ: ಇನ್ನೋವಾ ಕಾರು ಮರಕ್ಕೆ ಡಿಕ್ಕಿಯಾಗಿ ಯುವತಿ ಸಾವು ,ನಾಲ್ವರಿಗೆ ಗಾಯ

ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಯಿತು. ಪರಿಣಾಮ ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), …

Read More »

ಉಡುಪಿ : ವಿದ್ಯುತ್‌ ಕಂಬಕ್ಕೆ ಢಿಕ್ಕಿ – ಮಹಿಳೆ ಸಾವು..!

ಪಡುಬಿದ್ರಿ: ನಗರ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ಬೆಳಗ್ಗೆ ಕೆಂಪು ಬಣ್ಣದ ವ್ಯಾಗನರ್‌ ಕಾರು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್‌. ಆಭ್ಯಂಕರ್‌ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ. ರಾಜ್ಯ ಹೆದ್ದಾರಿ-1ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಅಪಘಾತ ಸಂಭವಿಸಿದೆ. ಈ ದಂಪತಿ ಕಾರ್ಕಳ ಮಾಳದಲ್ಲಿನ ಉಪನಯನ ಕಾರ್ಯಕ್ರಮಕ್ಕೆ ಮಂಗಳೂರು ಕಾವೂರಿನಿಂದ ಹೊರಟು ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ. ರಾಜ್ಯ …

Read More »

ಉಡುಪಿ: ಅಷ್ಟ ಮಠಾಧೀಶರಿಂದ ಮತ ಚಲಾವಣೆ..!

ಉಡುಪಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮತದಾರರು ಪ್ರಜಾಪ್ರಭುತ್ವದ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಮತ ಚಲಾವಣೆಗಾಗಿ ಮುಂಬಯಿ, ಬೆಂಗಳೂರು ಭಾಗದಿಂದ ಉಡುಪಿ ಜಿಲ್ಲೆಗೆ ಮತದಾರರು ಬಂದಿದ್ದಾರೆ. ಈಗಾಗಲೇ ಉಡುಪಿ ಅಷ್ಟ ಮಠಾಧೀಶರು ಉಡುಪಿಯಲ್ಲಿ ಮತ ಚಲಾವಣೆ ಮಾಡಿದ್ದಾರೆ. ಇನ್ನು ಮತದಾರರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರಿಗೆ, ವಿಕಲ ಚೇತನರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

Read More »

You cannot copy content of this page.