ಉಡುಪಿ

ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಕೇಸ್: ಆರೋಪಿ ಅರೆಸ್ಟ್

ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು. ಈ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿಯಲ್ಲಿ ಕೆಲ ದಿನಗಳ ಹಿಂದೆ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಂತ ಘಟನೆ ನಡೆದಿತ್ತು. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಹತ್ಯೆ ಮಾಡಲಾಗಿತ್ತು. ಕೊಲೆಯಾದವರನ್ನು ಹಸೀನಾ (46 ), ಅಫ್ನಾನ್ (23 ), ಅಯ್ನಾಝ್ (21 ), ಆಸಿಂ (12 ) ಎಂದು ಗುರುತಿಸಲಾಗಿತ್ತು. …

Read More »

ಹೆಬ್ರಿ: ದೀಪ ಇಡುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಗದ್ದೆ ಹಾಗೂ ಬಾವಿಗೆ ದೀಪ ಇಡಲು ಹೋದಾಗ ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಆವರಣವಿಲ್ಲದ ಬಾವಿ ಬಳಿ ದೀಪ ಇಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಹೆಬ್ರಿ ತಾಲೂಕು ಚಾರ ಗ್ರಾಮದ ಚಾರ ಬಸದಿ ಬಳಿ ನಿವಾಸಿ ಸಚಿನ್‌ (35) ಮೃತಪಟ್ಟಿದ್ದಾನೆ. ನ. 12ರಂದು ಸಂಜೆ ದೀಪಾವಳಿ ಸಂದರ್ಭ ಮನೆಯ ಹತ್ತಿರದ ಬಾವಿ ಬಳಿ ಘಟನೆ ನಡೆದಿದ್ದು, ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ- 7 ದೋಣಿಗಳು ಬೆಂಕಿಗಾಹುತಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದರೂ ನಿಖರ ಕಾರಣ ತಿಳಿದುಬಂದಿಲ್ಲ.

Read More »

ನಾಲ್ವರ ಹತ್ಯೆ ಪ್ರಕರಣ: ಸಂತೆಕಟ್ಟೆಯಿಂದ ರಿಕ್ಷಾದಲ್ಲಿ ಬಂದಿದ್ದ ಕೊಲೆ ಆರೋಪಿ ಕನ್ನಡ ಮಾತನಾಡುತ್ತಿದ್ದ: ರಿಕ್ಷಾ ಚಾಲಕ ಮಾಹಿತಿ

ಉಡುಪಿ : ನೇಜಾರುವಿನ ತೃಪ್ತಿ ಲೇಔಟ್ ನಲ್ಲಿ  ಮೂವರು ಮಹಿಳೆಯರ ಸಹಿತ ಒಂದೇ ಕುಟುಂಬದ ನಾಲ್ವರನ್ನು ಕೊಲೆಗೈದ ಪ್ರಕರಣದ ಆರೋಪಿ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಗೆ ಆಟೋ ರಿಕ್ಷಾದಲ್ಲಿ ಆಗಮಿಸಿದ್ದು ಬೆಳಕಿಗೆ ಬಂದಿದೆ. ಆರೋಪಿ ಸಂತೆಕಟ್ಟೆಯಿಂದ ಶ್ಯಾಮ್ ಎಂಬವರು ಆಟೋ ರಿಕ್ಷಾದಲ್ಲಿ ಕೊಲೆಯಾದ ಹಸೀನಾ ಅವರ ಮನೆಗೆ ಆಗಮಿಸಿದ್ದಾನೆ. ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಶ್ಯಾಮ್, “ಬೆಳಗ್ಗೆ 8:30ರಿಂದ 9 ಗಂಟೆಯ ಮಧ್ಯೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯೋರ್ವ ಕ್ವೀನ್ಸ್ ರಸ್ತೆಯಲ್ಲಿ ನನ್ನ ರಿಕ್ಷಾವನ್ನು ಏರಿದ್ದಾನೆ. ನೇಜಾರುವಿನ ತೃಪ್ತಿ ಲೇಔಟ್ ಗೆ ಕರೆದೊಯ್ಯುವಂತೆ …

Read More »

ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಮಲ್ಪೆ: ಉಡುಪಿಯ ನೇಜಾರು ಸಮೀಪ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿದ್ದು ಹಬ್ಬದ ದಿನ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ.ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಹಸೀನಾ 46,ಅಫ್ನಾನ್ 23,ಅಯ್ನಾಝ್ 21 ,ಆಸಿಂ 12 ಕೊಲೆಗೀಡಾದವರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

Read More »

ಉಡುಪಿ: ಬುಲೆಟ್ ಢಿಕ್ಕಿ – ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಉಡುಪಿ: ಗುಂಡಿಬೈಲು ಪಾಡಿಗಾರ ಎಂಬಲ್ಲಿ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಗೋವಿಂದ (50) ಎಂದು ಗುರುತಿಸಲಾಗಿದೆ. ಮನೆಗೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ಗೋವಿಂದ ಅವರಿಗೆ ಕಲ್ಸಂಕ ಕಡೆಯಿಂದ ಗುಂಡಿಬೈಲ್ ಕಡೆಗೆ ಹೋಗುತ್ತಿದ್ದ ಬುಲೆಟ್ ಢಿಕ್ಕಿ ಹೊಡೆಯಿದ್ದು, ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೋವಿಂದ ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನು ಅಪಘಾತ ದಿಂದ ಬುಲೆಟ್ ಸವಾರ ದರ್ಶಿತ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರ …

Read More »

ಕಾರ್ಕಳ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ..!

ಕಾರ್ಕಳ: ನವವಿವಾಹಿತೆಯೊಬ್ಬಳು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಹಿರ್ಗಾನ ಗ್ರಾಮದ ಮನೋಜ್ ಆಚಾರ್ಯ ಎಂಬವರ ಪತ್ನಿ ಅಶ್ವಿನಿ (25) ಎಂದು ಗುರುತಿಸಲಾಗಿದೆ. ಈದು ಗ್ರಾಮದ ಮುಳಿಕಾರು ಎಂಬಲ್ಲಿನ ಅಶ್ವಿನಿಗೆ ಹಿರ್ಗಾನ ಗ್ರಾಮದ ಮನೋಜ್ ಎಂಬವರ ಜತೆ ಕಳೆದ ಮೂರು ತಿಂಗಳ ಹಿಂದಷ್ಟೇ ಮದುವೆಯಾದ್ದು, ಇದೀಗ ನವವಿವಾಹಿತೆ ಅಶ್ವಿನಿ ಸಾವಿನ ಕುರಿತು ಆಕೆಯ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ …

Read More »

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಹೃದಯಘಾತದಿಂದ ನಿಧನ

ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಅವರನ್ನ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಅಂಬುಲ್ಯೆನ್ಸ್ ನಲ್ಲಿ ಕರೆದೊಯ್ಯಲಾಯಿತು.ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಟೆಯುತ್ತಿದ್ದ ಹೆಮ್ಮಣ್ಣರವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು. 1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು.ಬಳಿಕ ಈ …

Read More »

ಉಡುಪಿ: ಅಕ್ರಮ ಪಟಾಕಿ ದಾಸ್ತಾನು- ಪೊಲೀಸರಿಂದ ದಾಳಿ

ಉಡುಪಿ: ಅಕ್ರಮವಾಗಿ ವಾಹನಕ್ಕೆ ಲೋಡ್ ಮಾಡುತ್ತಿದ್ದ ಪಟಾಕಿಗಳನ್ನು ಉಡುಪಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಆರೋಪಿ ಬಡಾನಿಡಿಯೂರಿನ ಪ್ರಕಾಶ್ ಎಂಬಾತ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಹಾಗೂ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಫೋಟಕಗಳನ್ನು ಅಪಾಯಕಾರಿ ರೀತಿಯಲ್ಲಿ ದಾಸ್ತಾನು ಇಟ್ಟುಕೊಂಡಿದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಾಳಿ ನಡೆಸಿದ ಪೊಲೀಸರು ಒಟ್ಟು 455ಕೆ.ಜಿ ತೂಕದ 87,500ರೂ. ಮೌಲ್ಯದ ಪಟಾಕಿ ಸುಡುಮದ್ದುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ‌. ತಮಿಳುನಾಡಿನ ಶಿವಕಾಶಿಯ ಫ್ಯಾಕ್ಟರಿಯವರು ಪರವಾನಿಗೆ ಇಲ್ಲದ ವ್ಯಕ್ತಿಗೆ ಅಕ್ರಮವಾಗಿ ಪಟಾಕಿ ಸ್ಫೋಟಕಗಳನ್ನು …

Read More »

ಉಡುಪಿ: ರಾತ್ರಿ 8 ರಿಂದ 11 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಉಡುಪಿ : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು, ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿದ್ದು, ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ನವೆಂಬರ್ 12 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ …

Read More »

You cannot copy content of this page.