ಉಡುಪಿ

ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ 3 ವಿದ್ಯಾರ್ಥಿನಿಯರ ಅಮಾನತು

ಉಡುಪಿ: ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೊ ಚಿತ್ರೀಕರಣ ಮಾಡಿದ  ಆರೋಪದ ಸಂಬಂಧ ಎರಡು ಕೋಮಿನ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವಿಡಿಯೊ ಚಿತ್ರೀಕರಿಸಿದ್ದರು. ಅದನ್ನು ವಾಟ್ಸ್‌ಆಯಪ್‌ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದರು. ಇದು ಗೊತ್ತಾಗುತ್ತಿದ್ದಂತೆ ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಇವರ ಮಧ್ಯೆ ತೀವ್ರತರದ ವಾಗ್ವಾದ ನಡೆದಿತ್ತು. ಆಸ್ಪತ್ರೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ …

Read More »

ಕಾರ್ಕಳ: ಮಹಿಳೆ ಆತ್ಮಹತ್ಯೆ ಪ್ರಕರಣ- ಪ್ರಚೋದನೆ ನೀಡಿದ ಆರೋಪಿಯು ಆತ್ಮಹತ್ಯೆ

ಕಾರ್ಕಳ:ಜು.14ರಂದು ಮಹಿಳೆಯೋರ್ವರು ಸೊಸೈಟಿಯ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಸಂತೋಷ್ ಯಾನೆ ಹರಿತನಯ ದೇವಾಡಿಗ ಹೊಸ್ಮಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಹರಿತನಯ ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬುವವರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಪ್ರಮೀಳಾರವರು‌ ಸೊಸೈಟಿಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತಂತೆ ಪ್ರಮೀಳಾರವರ ಸಹೋದರ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಯುತ್ತಿತ್ತು. ಶನಿವಾರದಿಂದ ನಾಪತ್ತೆಯಾಗಿದ್ದ ಸಂತೋಷ್ ಈದುವಿನ ಮನೆಯೊಂದರಿಂದ ಸೀರೆ ತೆಗೆದುಕೊಂಡು ಹೋಗಿದ್ದ …

Read More »

ಉಡುಪಿ: ಫಲಿಸಿದ ಹೋರಾಟ, ನಿಖಿತಾ ಕುಟುಂಬಕ್ಕೆ ಸಾಂತ್ವಾನ ನಿಧಿ ಹಸ್ತಾಂತರ

ಉಡುಪಿ: ಗರಿಷ್ಠ ಪ್ರಯತ್ನಗಳ ಹೊರತಾಗಿಯೂ ನಿಖಿತಾಳನ್ನು ಉಳಿಸಿಕೊಳ್ಳಲಾಗಿಲ್ಲ ಎಂಬ ನೋವಿನೊಂದಿಗೆ ಮಾನವೀಯ ನೆಲೆಯಲ್ಲಿ ರೂ.20  ಲಕ್ಷ ಸಾಂತ್ವನ ಧನವನ್ನು ನಿಖಿತಾ ಕುಟುಂಬಕ್ಕೆ ಇಂದು ಉಡುಪಿಯ ಖಾಸಗಿ ಆಸ್ಪತ್ರೆ ನಿಖಿತಾ ಕುಟುಂಬಕ್ಕೆ ಹಸ್ತಾಂತರಿಸಿದೆ. ನ್ಯಾಯಯುತ ಹೋರಾಟಕ್ಕೆ ಕೊನೆಗೂ ಜಯ ಲಭಿಸಿದೆ.

Read More »

ಉಡುಪಿ: ನಿಷೇದಿತ ಪ್ಲಾಸ್ಟಿಕ್‌ ಮಾರಾಟ – ಸಾವಿರಾರು ರೂ.ದಂಡ ವಸೂಲಿ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 52 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು, 18,000 ರೂ. ದಂಡ ವಿಧಿಸಲಾಯಿತು. ಹಾಗೂ ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್ ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್ ಗಳನ್ನು ಉಪಯೋಗಿಸುತ್ತಿರುವುದು ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ಯನ್ನು …

Read More »

ಉಡುಪಿ: ನಡುರಸ್ತೆಯಲ್ಲಿ ಕಾಡುಕೋಣ ತಿರುಗಾಟ – ಆತಂಕಗೊಂಡ ವಾಹನ ಸವಾರರು

ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ರಸ್ತೆಯಲ್ಲಿ ಪ್ರತ್ಯಕ್ಷ ವಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿರ್ವ ಸಮೀಪದ ಪಿಲಾರು ಕಾಡಿನ ಬಳಿ ಇರುವ ರಸ್ತೆಯ ಪಕ್ಕದಲ್ಲಿ ಈ ಕಾಡು ಕೋಣ ಕಂಡು ಬಂದಿದೆ. ಆಹಾರ ಅರಸಿಕೊಂಡು ನಾಡಿಗೆ ಬಂದಿರುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ವಿಜಯ್ , ಧೀರಜ್ ಮತ್ತು ಸಂಗಡಿಗರು ಕಾಡುಕೋಣವನ್ನು ಮತ್ತೆ ಕಾಡಿಗೆ ಕಳಿಸುವಲ್ಲಿ ಸಫಲರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಡು …

Read More »

ಉಡುಪಿ :ಟಿಪ್ಪರ್ ಲಾರಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಚಾಲಕ- ಭಯಾನಕ ವಿಡಿಯೋ ವೈರಲ್

ಉಡುಪಿ : ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ. ಈ ವೇಳೆ ಹೆದರಿಕೆಯಿಂದ ಟಿಪ್ಪರ್ ಚಾಲಕ ಲಾರಿಯನ್ನು ವೇಗವಾಗಿ ಚಲಾಯಿಸಿದ್ದಾನೆ. ಆದರೆ ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿಲ್ಲ, ಈ ನಡುವೆ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದ ಸಾರ್ವಜನಿಕರು ಟಿಪ್ಪರ್ ಚಾಲಕನಿಗೆ ಬೈದು ನಿಲ್ಲಿಸಿದ ಸಾರ್ವಜನಿಕರು. ಬಳಿಕ ಟಿಪ್ಪರನ್ನು …

Read More »

ಉಡುಪಿ: ಬಾವಿಗೆ ಬಿದ್ದ ನವಿಲನ್ನು ರಕ್ಷಣೆ ಮಾಡಿದ ತಂದೆ ಮಗ

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ನವಿಲೊಂದನ್ನು ತಂದೆ ಮಗ ಸೇರಿ ರಕ್ಷಣೆ ಮಾಡಿರುವ ಉಡುಪಿ ಜಿಲ್ಲೆಯ ಉದ್ಯಾವರದ ಸಮೀಪದ ಕಲಾಯಿಬೈಲ್ ಎಂಬಲ್ಲಿ ನಡೆದಿದೆ. ಇಲ್ಲಿನ ಕಲಾಯಿಬೈಲ್ ನಿವಾಸಿಯಾಗಿರುವ ವಿಜಯಕುಮಾರ್ ಹಾಗು ಅವರ ಮಗ ವಿಶಾಲ್ ನವಿಲನ್ನು ರಕ್ಷಣೆ ಮಾಡಿವರಾಗಿದ್ದಾರೆ. ನವಿಲೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು ಒದ್ದಾಡುತ್ತಿರುವುದನ್ನು ಗಮನಿಸಿದ ತಕ್ಷಣ ಅದರ ರಕ್ಷಣೆಗೆ ಮುಂದಾಗಿದ್ದಾರೆ. ವಿಶಾಲ್ ಹಗ್ಗದ ಸಹಾಯದಿಂದ ಬಾವಿಗೆ ಇಳಿದು, ಕಾಲಿನ ಮೂಲಕ ನವಿಲನ್ನು ಮೇಲೆತ್ತಿದರು. ಬಳಿಕ ವಿಜಯಕುಮಾರ್ ನವಿಲನ್ನು ಹಿಡಿದು ಬಾವಿಯ ಹೊರಗೆ ತಂದರು. ತಂದೆ ಮತ್ತು ಮಗನ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ …

Read More »

ಉಡುಪಿ: ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ – ಜಾಗ್ರತೆ ವಹಿಸಲು ಎಸ್‌ಪಿ ಸೂಚನೆ

ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ನ್ನು ಬಳಸಬಾರದು. ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾವುದೇ …

Read More »

ಬ್ರಹ್ಮಾವರ: ಬೈಕ್ ನಿಂದ ಬಿದ್ದು ಮಹಿಳೆ ಸಾವು

ಬ್ರಹ್ಮಾವರ: ಬೈಕ್ ನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಸಾವನಪ್ಪಿರುವ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ನಂತರ ಇವರು ಕಾಲೇಜಿನ ಲ್ಯಾಬ್ ಟೆಕ್ನಿಷಿಯನ್ ಸುಧೀಂದ್ರ ಎಂಬವರ ಬೈಕಿ ನಲ್ಲಿ ಬ್ರಹ್ಮಾವರದವರೆಗೆ ಹೊರಟಿದ್ದರು. ದಾರಿ ಮಧ್ಯೆ ಇವರು ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ …

Read More »

ಕುಂದಾಪುರ: ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ತಂದೆಯ ಬಂಧನ

ಕುಂದಾಪುರ: ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಮಹಿಳೆಯ ಅಪ್ರಾಪ್ತ ವಯಸ್ಕ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬೆಳಕಿಗೆ ಬಂದಿದೆ. ದೂರು ದಾಖಲಾದ ಹಿನ್ನಲೆಯಲ್ಲಿ ತನಿಖೆ ನಡೆಸಿದ ಕುಂದಾಪುರ ಪೊಲೀಸರ ತಂಡ ಪೊಕ್ಸೋ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. ಆರೊಪಿಯನ್ನು ಬೈಂದೂರಿನ ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪತಿಯನ್ನು ತ್ಯಜಿಸಿದ್ದ ಇಬ್ಬರು ಮಕ್ಕಳಿದ್ದ ಹೊರ ರಾಜ್ಯದ ಮಹಿಳೆಯನ್ನು ಸೊಹೇಲ್ ಪ್ರೀತಿಸಿ ಮದುವೆಯಾಗಿದ್ದ. ನಂತರ ಇವರಿಬ್ಬರು ಕುಂದಾಪುರ …

Read More »

You cannot copy content of this page.