ಉಡುಪಿ

ಎಳೆವೆಯಲ್ಲಿಯೇ ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕು- ರವಿರಾಜ್ ಹೆಚ್ ಪಿ.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಸುನಾಗ್ ಆಸ್ಪತ್ರೆ ಆಶ್ರಯದಲ್ಲಿ ಸುನಾಗ್ ನವ್ಯಹಿತ ಬೇಸಿಗೆ ಶಿಬಿರವು ಉಡುಪಿ ಕುಂಜಿಬೆಟ್ಟು ಪರಿಸರದ ಐಡನ್ ಸ್ಟೆ ಹೂಮ್ ನಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳ ಶಿಬಿರಗಳಿಗೆ ಸಹಕಾರವನ್ನು ನೀಡುತ್ತಿದ್ದು, ಈ ಶಿಬಿರದ ಮೂಲಕ ಕನ್ನಡ ನಾಡು-ನುಡಿ ಸಂಸ್ಕೃತಿಯ ಅರಿವನ್ನು ಮಕ್ಕಳಿಗೆ ತಿಳಿಸುವ ಸಲುವಾಗಿ ನಾಡಿನ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು ಒಂದು ಪರಿಪೂರ್ಣ ಶಿಬಿರವಾಗುತ್ತದೆ .ಆಟದ ಮೂಲಕ …

Read More »

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರ ಭೀಕರ ಅಪಘಾತ ಪ್ರಕರಣ: ದಂಪತಿ ಸಾವು- ಬದುಕುಳಿದ ಮಗ

ಕುಂದಾಪುರ: ಬೊಬ್ಬರ್ಯನಕಟ್ಟೆ ಎದುರಿನ ಮೇಲ್ಸೇತುವೆ ಮೇಲೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಪುತ್ರ ಬದುಕುಳಿದಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ವೇಗವಾಗಿ ಬಂದ ಕಾರು ಮೇಲ್ಸೇತುವೆಯಿಂದ ಸರ್ವಿಸ್ ರಸ್ತೆಗೆ ಬಿದ್ದಿದೆ. ಮೃತರನ್ನು ಕೇರಳದ ಕಣ್ಣೂರು ಮೂಲದ ಮುನ್ನಾವರ್ (49), ಅವರ ಪತ್ನಿ ಸಮೀರ (41) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅವರ ಪುತ್ರ ಸುಹೇಲ್ (18) ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಅಪಾಯದಿಂದ ಪಾರಾಗಿದ್ದಾನೆ. ಅವರ ಪತ್ನಿ ಸಮೀರಾ ಕೇರಳದ ಕಣ್ಣೂರಿನವರಾದ ಕಾರಣ ಮುನ್ನಾವರ್ ಮತ್ತು ಅವರ ಕುಟುಂಬ ಕೊಲ್ಲಾಪುರದಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದರು. …

Read More »

ಕುಂದಾಪುರ : ಭೀಕರ ಅಪಘಾತ -ಮೂವರ ಸ್ಥಿತಿ ಗಂಭೀರ

ಕುಂದಾಪುರ :ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಕುಂದಾಪುರ ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಎದುರುಗಡೆ ಫ್ಲೈ …

Read More »

ಉಡುಪಿ: ರೈಲಿನಲ್ಲಿ ಅಕ್ರಮ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ: ಮುಂಬಯಿಯಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್‌ಪ್ರಸ್‌ ರೈಲಿನಲ್ಲಿ ಪ್ರಯಾಣಿಕನೊಬ್ಬ ಸಾಗಿಸುತ್ತಿದ್ದ 24,99,500 ರೂ. ಹಣ ವನ್ನು ಉಡುಪಿ ರೈಲ್ವೇ ರಕ್ಷಣಾ ದಳ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.ಭಟ್ಕಳ ನಿವಾಸಿ ಫಹಾದ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ‌. ಮುಂಜಾನೆ ಕರ್ತವ್ಯದಲ್ಲಿದ್ದ ಆರ್‌ಎಎಫ್ಒ ಎಎಸ್‌ಐ ಯು.ಡಿ. ಸುಧೀರ್‌ ಶೆಟ್ಟಿ ಜನರಲ್‌ ಕೋಚ್‌ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು ಎನ್ನಲಾಗಿದೆ‌ ಇಂದ್ರಾಳಿ ನಿಲ್ದಾಣಕ್ಕೆ ರೈಲು ತಲುಪಿದ ಬಳಿಕ ಚುನಾವಣ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣ ಕೋಶಕ್ಕೆ ಮಾಹಿತಿ ನೀಡಲಾಯಿತು. ಫ್ಲೈಯಿಂಗ್ ಸ್ಕ್ವಾಡ್‌ ಎಫ್‌ಎಸ್ಟಿ …

Read More »

ಉಡುಪಿ: KTM ಬೈಕ್ ಡೀಲರ್‌ ಸಂಸ್ಥೆಯ ಮ್ಯಾನೇಜರ್‌ನಿಂದ 18 ಲಕ್ಷ ರೂ. ವಂಚನೆ- ಪ್ರಕರಣ ದಾಖಲು

ಉಡುಪಿ: ಕೆಟಿಎಂ ಬೈಕ್‌ ಕಂಪೆನಿಯ ಮಾರ್ಕೆಟಿಂಗ್ ಮ್ಯಾನೇಜರ್ 18 ಲಕ್ಷ ರೂ. ಹಣವನ್ನು ದುರುಪಯೋಗಪಡಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ. ನಗರದ ಗುಂಡಿಬೈಲುನಲ್ಲಿರುವ ಕೆಟಿಎಂ ಬೈಕ್‌ಗಳ ಅಧಿಕೃತ ಡೀಲರ್ ಸಂಸ್ಥೆ ಸಾನ್ವಿ ಟ್ರೇಡರ್ಸ್‌ನ ಮಾರಾಟ ವಿಭಾಗದ ಮ್ಯಾನೇಜರ್ ರೋಶನ್ ಕಳೆದ ತಿಂಗಳಿನಲ್ಲಿ ಕೆಲಸಕ್ಕೆ ಬಾರದೆ ಅನಾರೋಗ್ಯ ಕಾರಣವನ್ನು ಹೇಳಿ ಗೈರು ಹಾಜರಾಗುತ್ತಿದ್ದನು. ಈತ ಕೆಲಸಕ್ಕೆ ಬಾರದೆ, ಫೋನ್ ಸಂಪರ್ಕಕ್ಕೂ ಸಿಗದಿರುವ ಕಾರಣ ಅನುಮಾನಗೊಂಡು ಸಂಸ್ಥೆಯ ಮ್ಯಾನೇಜರ್ ಶರತ್ ಟಿ. ಮಾರಾಟದ ಹಣಕಾಸಿನ ದಾಖಲೆಗಳನ್ನು ಪರಿಶೀಲಿಸಿದರು. ಆಗ ರೋಶನ್ ಜನವರಿ 3ರಿಂದ ಮಾರ್ಚ್ 13ರವರೆಗೆ 18,14,750ರೂ. …

Read More »

ಉಡುಪಿ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಢಿಕ್ಕಿ ಹೊಡೆದು ಮೃತ್ಯು..!

ಉಡುಪಿ: ಖಾಸಗಿ ಬಸ್ ವೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಾವನ್ನಪ್ಪಿದ ವ್ಯಕ್ತಿ ಬ್ಯಾಂಡ್ ವಾದಕ ಕಟಪಾಡಿ ತೇಕಲತೋಟದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕುಮಾರ್‌ (55) ಎಂದು ತಿಳಿದು ಬಂದಿದೆ. ಪಾದಚಾರಿಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಮೇಲೆ ಏರಿ …

Read More »

ಉಡುಪಿ: ಅಮೆಝಾನ್ ಕಸ್ಟಮರ್‌ಕೇ‌ರ್ ಹೆಸರಿನಲ್ಲಿ 90 ಸಾವಿರ ರೂ. ಆನ್‌ಲೈನ್‌ ವಂಚನೆ

ಉಡುಪಿ: ಅಮೆಝಾನ್ ಕಂಪೆನಿಯ ಕಸ್ಟಮರ್‌ಕೇರ್ ಹೆಸರಿನಲ್ಲಿ ಆನ್‌ಲೈನ್ ಮೂಲಕ ಸಾವಿರಾರು ರೂ.ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬೆಳ್ಳೆಯ ರೋಶನ್ ಜಾಯ್(43) ಎಂಬವರು ಅಮೆಝಾನ್ ಕಂಪನಿಯಲ್ಲಿ ಆನ್‌ಲೈನ್ ಮೂಲಕ ಗ್ಲೀಸರ್ ಬುಕ್ ಮಾಡಿದ್ದು ಈ ವಸ್ತು ಬಾರದ ಕಾರಣ ಗೂಗಲ್‌ನಲ್ಲಿ ಅಮೆಝಾನ್ ಕಂಪನಿಯ ಕಸ್ಟಮರ್ ಕೇರ್ ನಂಬ‌ರ್ ಹುಡುಕಿ ನಂಬ್ರಕ್ಕೆ ಕರೆ ಮಾಡಿದ್ದರು. ಈ ವೇಳೆ ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ರೋಶನ್, ತನ್ನ ವೈಯಕ್ತಿಕ ಮಾಹಿತಿ, ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ನಮೂದಿಸಿದರು. ತದನಂತರದಲ್ಲಿ ರೋಶನ್ ಅವರ ಗಮನಕ್ಕೆ ಬಾರದೇ ಅವರ …

Read More »

ಪಡುಬಿದ್ರಿ: ಟೈಮಿಂಗ್ ಕುರಿತಾಗಿ ವಾಗ್ವಾದ- ಬಸ್ಸನ್ನು ಹೆದ್ದಾರಿಗೆ ಅಡ್ಡಲಾಗಿ ನಿಲ್ಲಿಸಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತ ಡ್ರೈವರ್

ಪಡುಬಿದ್ರಿ : ಖಾಸಗಿ ಬಸ್ ಡ್ರೈವರ್ ಬಸ್ ನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸೀದ ಹೋಗಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತಿದ್ದಾನೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಈ ಗಲಾಟೆ ನಡೆದಿದೆ. ಟೈಮಿಂಗ್ ಕುರಿತಾಗಿ ನಡೆದಿದ್ದ ಗಲಾಟೆ ಪಡುಬಿದ್ರಿ ತಲುಪಿದ ವೇಳೆ ಜೋರಾಗಿದೆ. ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ಬಸ್ ನ್ನು ರಸ್ತೆ ಅಡ್ಡಲಾಗಿ …

Read More »

ಉಡುಪಿ: ಬಟ್ಟೆ ಅಂಗಡಿಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳ ಬಂಧನ

ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ಮೊಹಮ್ಮದ್ ರಯ್ಯಾನ್ (18) ಬಂಧಿತ ಆರೋಪಿಗಳು. ಇನ್ನು ಕಳ್ಳತನ ಕೃತ್ಯದಲ್ಲಿ ಭಾಗಿಯಾದ ಕಾನೂನು ಸಂಘರ್ಷಕ್ಕೊಳಗಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಎದುರು ಪೊಲೀಸರು ಹಾಜರು ಪಡಿಸಿದ್ದಾರೆ. ಬಂಧಿತರಿಂದ ಮೊಬೈಲ್ ಫೋನ್, 52,000 ರೂ. ಹಣ ಹಾಗೂ 1 ಬೈಕ್ ಹಾಗೂ 1 …

Read More »

ಉಡುಪಿ: ರೌಡಿಶೀಟರ್ ನಿವಾಸದ ಮೇಲೆ ಪೊಲೀಸರ ದಾಳಿ..!

ಉಡುಪಿ: ರೌಡಿ ದಿವಾಕರ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ ಸಜೀವ ಗುಂಡುಗಳು ಸೇರಿದಂತೆ ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಮಧು ಬಿ.ಇ ಅವರಿಗೆ ಹಿರಿಯಡ್ಕ ಠಾಣಾ ವ್ಯಾಪ್ತಿಯ ರೌಡಿ ದಿವಾಕರ ಎಂಬಾತನು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಈ ಹಿನ್ನೆಲೆ ಮಂಗಳವಾರ ಸಿಬ್ಬಂದಿಯವರೊಂದಿಗೆ ಆತನ ಮನೆಗೆ ತೆರಳಿ ಪರಿಶೀಲಿಸಿದಾಗ ಕಪ್ಪು ಬಣ್ಣದ ಬಟ್ಟೆ ಪೌಚ್‌, ಸಜೀವ ಮದ್ದು ಗುಂಡುಗಳು, ಮಸಿ ಕೋವಿಗೆ ಬಳಸುವ ಮದ್ದುಗುಂಡುಗಳು, ಪ್ಲಾಸ್ಟಿಕ್‌ ಪೌಚ್‌ ನಲ್ಲಿ …

Read More »

You cannot copy content of this page.