

ನವದೆಹಲಿ: ಮಹಾಕುಂಭ ಮೇಳಕ್ಕೆ ತೆರಳಲು ಎರಡು ರೈಲುಗಳು ವಿಳಂಬವಾಗಿದ್ದರಿಂದ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಾಧಿಕಾರಿ ಈ ಸಾವುಗಳನ್ನು ದೃಢಪಡಿಸಿದ್ದಾರೆ. ಘಟನೆಯಲ್ಲಿ 10 ಮಹಿಳೆಯರು, ಮೂವರು ಮಕ್ಕಳು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೇಡಿ ಹಾರ್ಡಿಂಗ್ ಆಸ್ಪತ್ರೆಯಲ್ಲಿ ಇನ್ನೂ ಮೂರು ಸಾವುಗಳು ವರದಿಯಾಗಿವೆ. ರೈಲ್ವೇಸ್ ತನಿಖೆಗೆ ಆದೇಶಿಸಿದ್ದು, ಬಲಿಪಶುಗಳ ಕುಟುಂಬಗಳಿಗೆ 10 ಲಕ್ಷ ರೂ., ತೀವ್ರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದೆ.