
ವೇಣೂರು, ಮೇ. 1: ವೇಣೂರು-ಮೂಡಬಿದಿರೆ ರಾಜ್ಯಹೆದ್ದಾರಿ ಪೆರಿಂಜೆ ಬಂಡಸಾಲೆ ಬಳಿ ಇಂದು ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯೊಡೆದು ರಿಕ್ಷಾದಲ್ಲಿದ್ದ ಚಾಲಕ ಸೇರಿದಂತೆ ಐವರು ಗಂಭೀರ ಗಾಯಗೊಂಡಿದ್ದಾರೆ.

ಆಟೋ ರಿಕ್ಷಾ (ಕೆಎ ೨೦, ಎಎ೭೯೫೬) ಮೂಡಬಿದಿರೆ ಕಡೆಯಿಂದ ವೇಣೂರು ಕಡೆಗೆ ಬರುತ್ತಿದ್ದ ವೇಳೆ ಪೆರಿಂಜೆ ಬಂಡಸಾಲೆ ಬಳಿ ವೇಣೂರು ಕಡೆಯಿಂದ ಬಂದ ಕಾರು ಡಿಕ್ಕಿಯೊಡೆಯಿತು ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿಯೊಡೆದು ಜಖಂಗೊಂಡಿದೆ. ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸಿದ್ದ ಮಹಿಳೆ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದರಲ್ಲಿ ಓರ್ವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಯಾವುದೇ ಗಾಯಗಳಾಗಿಲ್ಲ.

ಕಾರು ಚಾಲಕ ತುಮಕೂರಿನ ಪ್ರಸಾದ್ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
