

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ ಕಾರ್ಯಕರ್ತ ನವೀನ್ (39) ಸ್ಥಳದಲ್ಲೇ ಮೃತಪಟ್ಟಿದ್ದು, ದಯಾನಂದ್, ಪದ್ಮನಾಭ್ ಎಂಬುವರಿಗೆ ಗಂಭೀರ ಗಾಯಾಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ನಡುವೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಿನ್ನೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯ ಕೋಮಿನ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹೀಗಾಗಿ ಇಂದು ಸಾಗರ ಪಟ್ಟಣ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.