ವಿದ್ಯಾರ್ಥಿನಿಗೆ ಗರ್ಭ ಕರುಣಿಸಿದ ನಾರಾವಿಯ ವ್ಯಕ್ತಿ ಅಂದರ್!

ನಾರಾವಿ, ಎ. 15: ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ನಾರಾವಿಯ ಮಂಜುನಗರ ನಿವಾಸಿ ಸಂದೇಶ್ (೨೩)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪರಿಚಯಸ್ಥ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೈಹಿಕ ಸಂಪರ್ಕ ಬೆಳೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ. 13ರಂದು ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Check Also

ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ-ಮುಸ್ಲಿಂ ಯುವಕನ ಬರ್ಬರ ಹತ್ಯೆ

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ …

Leave a Reply

Your email address will not be published. Required fields are marked *

You cannot copy content of this page.