ದಕ್ಷಿಣ ಕನ್ನಡ

ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024

ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ ಜಿ ಕೆ ರಂಗಪುರಸ್ಕಾರ’ -2024 ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತರಚನೆಕಾರ ಬರೆದ ನಾಟಕಗಳು- ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್ ನಂಬರ್ 252, ಐಸಿಯು, ಸರದಾರನ ಸ್ವಗತ, ಸಂಪಿಗೆನಗರ ಪೋಲೀಸ್ ಸ್ಟೇಶನ್, ದಾಟ್ಸ್ ಆಲ್ ಯುವರ್ ಆನರ್, ಮಿನುಗೆಲೆ ಮಿನುಗೆಲೆ ನಕ್ಷತ್ರ, ವ್ಯೂಹ, ಮರಗಿಡಬಳ್ಳಿ, ಪರಶುರಾಮ, …

Read More »

ಉಪ್ಪಿನಂಗಡಿ:  2 ಕಾರುಗಳಿಗೆ ಲಾರಿ ಢಿಕ್ಕಿ- ನಾಲ್ವರು ಗಂಭೀರ

ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ. ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ ಮನೋಹರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮನೆಯವರೊಂದಿಗೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನಕ್ಕೆಂದು ಕಾರಿನಲ್ಲಿ ತೆರೆಳುತ್ತಿದ್ದ ವೇಳೆ, ಲಾರಿಯೊಂದು ಎದುರಿನಲ್ಲಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು ದೂಡಿಕೊಂದು ಬಂದು ಇವರಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದ ನಾರಾಯಣ, ದಮಯಂತಿ, ಕೂಸಮ್ಮ ಎಂಬವರಿಗೆ ಗಂಭೀರ …

Read More »

ಉಪ್ಪಿನಂಗಡಿ: ಬಹುಮಹಡಿ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ- 5ಕ್ಕೂ ಹೆಚ್ಚು ಅಂಗಡಿಗಳಿಗೆ ಹಾನಿ..!

ಉಪ್ಪಿನಂಗಡಿ: ಇಲ್ಲಿನ ಬ್ಯಾಂಕ್‌ ರಸ್ತೆಯ ಬಹುಮಹಡಿ ಕಟ್ಟಡಕ್ಕೆ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು, 5ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಲ್ಲಿನ ಅಂಚೆ ಕಚೇರಿ ಸಮೀಪದ ಪೃಥ್ವೀ ಮಹಲ್‌ ಕಟ್ಟಡಕ್ಕೆ ಅಗ್ನಿ ಸ್ಪರ್ಶವಾಗಿದ್ದು, ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಕಟ್ಟಡದ ತಳ ಅಂತಸ್ತಿನಲ್ಲಿರುವ ಬೇಕರಿ, ಮೊಬೈಲ್‌ ಅಂಗಡಿ, ಚಪ್ಪಲಿ ಅಂಗಡಿ, ಫ್ಯಾನ್ಸಿ ಸಹಿತ ಹಲವು ಅಂಗಡಿಗಳು ಬೆಂಕಿ ಹಬ್ಬಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದ್ದಾರೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಕಾಲಿಕ …

Read More »

ವ್ಯಕ್ತಿ ಬದುಕಿದ್ದರೂ ಮೃತಪಟ್ಟಿದ್ದಾರೆಂದು ಮಾಹಿತಿ ರವಾನಿಸಿದ ಪೊಲೀಸರು..!

ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ ಎಂಬ ಸುದ್ದಿ ಭಾರಿ ಗೊಂದಲ ಉಂಟು ಮಾಡಿ ಕೊನೆಗೆ ಶವಗಾರಾದಲ್ಲಿ ಹೆಣ ಸಿಗದೆ ವ್ಯಕ್ತಿ ಇನ್ನೂ ಬದುಕಿದ್ದಾರೆ ಎಂಬ ಸುದ್ದಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶೇಖರ್‌ ಗೌಡ ಅವರು ವೆಂಕಪ್ಪ ಗೌಡ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಜೂನ್ 9ರಂದು ಸ್ಥಳೀಯ ಪೇಟೆಗೆ ಹೋದಾಗ ಮೆದುಳು ನರದ ಸಮಸ್ಯೆಯಿಂದ ಅನಾರೋಗ್ಯಕ್ಕೊಳಗಾಗಿ ಬಿದ್ದರು. ತಕ್ಷಣ ಅವರನ್ನು ಆಟೋ ರಿಕ್ಷಾದವರು ವೆಂಕಪ್ಪ ಗೌಡರಲ್ಲಿಗೆ ಕರೆತಂದಿದ್ದು, ವೆಂಕಪ್ಪ ಗೌಡರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ …

Read More »

ಬೆಲೆ ಏರಿಕೆ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ – ಉಮಾನಾಥ್ ಕೋಟ್ಯಾನ್

ಮುಲ್ಕಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತೈಲ ಬೆಲೆಯ ಮೇಲಿನ ಮಾರಾಟ ತೆರಿಗೆ ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಿದ್ದಾರೆ. ವಾಲ್ಮೀಕಿ ನಿಗಮ ಸಹಿತ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ ಮುಖ್ಯಮಂತ್ರಿಗಳು ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದ್ದಾರೆ. ಕಿನ್ನಿಗೋಳಿಯ ಯುಗಪುರುಷದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮತ ಹಾಕದವರ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, …

Read More »

ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ

ಉಪ್ಪಿನಂಗಡಿ ಸಮೀಪದ ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಹಾಸ್‌ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37) ಮೃತ ಮಹಿಳೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Read More »

ಸುಳ್ಯ: ಶಾಲೆಯ ಜಗಲಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಶಂಕೆ..!

ಸುಳ್ಯ: ಯುವಕನೊಬ್ಬನ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಶವ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಅಜ್ಞಾವರ ಗ್ರಾಮದ ಕಾಂತಮಂಗಲದಲ್ಲಿ ನಡೆದಿದೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 25-30 ವರ್ಷ ಎಂದು ಅಂದಾಜಿಸಲಾಗಿದ್ದು ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸುತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿಯೂ ಕೂಡ ಇದೇ ರೀತಿ ಮಹಿಳೆಯನ್ನು ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದ ಘಟನೆ ನಡೆದಿದ್ದು ಇದಕ್ಕೆ ಸಂಬಂಧಪಟ್ಟ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಅದೇ ರೀತಿಯ ಘಟನೆ ನಡೆದಿದ್ದು ಸ್ಥಳೀಯರಲ್ಲಿ …

Read More »

ಉಡುಪಿ: ಬಕ್ರೀದ್ ಸಂದರ್ಭ ಅನಧಿಕೃತ ಜಾನುವಾರುಗಳ ವಧೆ ,ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ

ಉಡುಪಿ: ಬಕ್ರೀದ್‌ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಕ್ರೀದ್‌ ಹಬ್ಬದ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಟ ಕಂಡುಬಂದಲ್ಲಿ ಹತ್ತಿರದ ಪೋಲೀಸ್‌ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ …

Read More »

ಪುತ್ತೂರು: ತಾಳಿಯನ್ನು ಮನೆಯಲ್ಲಿಟ್ಟು ವಿವಾಹಿತೆ ನಾಪತ್ತೆ..!

ಪುತ್ತೂರು: ಪುತ್ತೂರು ಸಮೀಪ ತಾಳಿಯನ್ನು ಮನೆಯಲ್ಲಿಟ್ಟು ವಿವಾಹಿತೆ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ವೆ ಗ್ರಾಮದ ಭಕ್ತಕೋಡಿಯ ಕಲ್ಲಗುಡ್ಡೆಯ ಹರೀಶ ಅವರ ಪತ್ನಿ ದೀಪಿಕಾ (23) ನಾಪತ್ತೆಯಾದವರು ಎಂದು ತಿಳಿಯಲಾಗಿದೆ. ಜೂ.13ರಂದು ಮನೆಯಿಂದ ಕಾಣೆಯಾಗಿದ್ದು ಮನೆಯ ಸುತ್ತ ಮುತ್ತಲ ಪರಿಸರ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡುಕಾಡಿದರೂ ಆಕೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೂರು ತಿಂಗಳ ಹಿಂದೆ ಕಡಬದ ಕರ್ಮಾಯಿ ನಿವಾಸಿ ಪ್ರಶಾಂತ್‌ ಜತೆಗೆ ಹೋಗಿದ್ದ ದೀಪಿಕಾ ಅವರನ್ನು ಮಂಗಳೂರಿನಲ್ಲಿ ಪತ್ತೆ ಮಾಡಿ ಅಲ್ಲಿಂದ ಕರೆದುಕೊಂಡು ಬರಲಾಗಿತ್ತು. ಈ …

Read More »

ಬೆಳ್ತಂಗಡಿ : ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಜ್ವರ ಹಾವಳಿ- ಓರ್ವ ಮೃತ್ಯು..!

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬದ್ಯಾರು ಸಮೀಪದ ಮಲ್ನೋಡಿ ಎಂಬಲ್ಲಿಯ ನಿವಾಸಿ ದಿವಾಕರ ಶೆಟ್ಟಿ (50) ಎಂಬವರು ಡೆಂಗಿ ಜ್ವರಕ್ಕೆ ತುತ್ತಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಇವರು ಕಳೆದ 15 ದಿನಗಳಿಂದ ಡೆಂಗಿ ಜ್ವರದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ – ಅವರನ್ನು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕವಾಗಿ …

Read More »

You cannot copy content of this page.