
ಮೂಡುಬಿದಿರೆ: ಬೃಹತ್ ಕ್ರೇನ್‌ವೊಂದು ಕಾರೊಂದಕ್ಕೆ ಢಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ನಡೆದಿದೆ.
ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ.
ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
