ಮಂಗಳೂರು : ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು. ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಜುಲೈ 30 ರಂದು ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಬರ್ಕೆ ಪೊಲೀಸ್ ಇನ್ಸ್ಪೆಕ್ಟರ್ ತಂಡ, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಕಾಣೆಯಾದ ಹುಡುಗಿ ಈ ಹಿಂದೆ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದ ಬಗ್ಗೆ ಮಾಹಿತಿ ಪಡೆದು ಸುಮಾರು 3000 ಇನ್ಸ್ಟ ಗ್ರಾಂ ಮತ್ತು ಮೋಜೋ ಅಪ್ ನ ಖಾತೆಗಳನ್ನು ಗಳನ್ನು ಪರಿಶೀಲಿಸಿ ಅನುಮಾನಾಸ್ಪದ ವ್ಯಕ್ತಿಗಳ ಪರಿಶೀಲನೆ ಸಂದರ್ಭದಲ್ಲಿ ಮಹತ್ತರ ತಿರುವು ಸಿಕ್ಕಿದೆ. ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು, ಗಜೇಂದ್ರ ಬೈಲ್ ಗ್ರಾಮದ 23ವರ್ಷದ ಸೂರಜ್ ಪೂಜಾರಿ ಎಂಬ ಹುಡುಗನೊಂದಿಗೆ ಆತನ ಮನೆಯಲ್ಲಿ ಹುಡುಗಿ ಸಿಕ್ಕಿದ್ದಾಳೆ. ನಂತರ ಇಬ್ಬರನ್ನೂ ಬರ್ಕೆ ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದಾರೆ. ಈ ವೇಳೆ ಅವರಿಬ್ಬರು ಪ್ರೀತಿಸುತ್ತಿರುವುದಾಗಿ ತಿಳಿದು ಬಂದಿದೆ. ವಿಚಾರಣೆ ಸಂದರ್ಭದಲ್ಲಿ ಹುಡುಗಿ ಮಾನಸಿಕವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮರ್ಥಳಿಲ್ಲದೆ ಇರುವುದು ಕಂಡು ಬಂದಿರುತ್ತೆ. ಹುಡುಗಿಯು ತಂದೆ – ತಾಯಿ ರವರ ಜೊತೆ ಹೋಗುವುದಿಲ್ಲ ವೆಂದ ಕಾರಣಕ್ಕೆ ಸ್ವಾದಾರ ಕೇಂದ್ರಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.