ಮಳಲಿ ಮಸೀದಿ ವಿವಾದ: ವಿಹೆಚ್​ಪಿಗೆ ಮೊದಲ ಗೆಲುವು​..!!

ಮಂಗಳೂರು: ಮಳಲಿ ಮಸೀದಿ ಜಾಗದ ವಿವಾದಕ್ಕೆ ಸಂಬಂದಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಇದರೊಂದಿಗೆ ಈ ಕೇಸ್ ನಲ್ಲಿ ಹಿಂದೂ ಸಂಘಟನೆಗಳಿಗೆ ಮೊದಲ ಗೆಲವು ದೊರೆತಂತಾಗಿದೆ.

ಮಸೀದಿ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಮತ್ತು ವಿಎಚ್​ಪಿ ಅರ್ಜಿ ವಜಾ ಮಾಡಬೇಕು ಎನ್ನುವ ಮಸೀದಿ ಆಡಳಿತ ಮಂಡಳಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿಯೇ ಅರ್ಜಿಯ ವಿಚಾರಣೆ ನಡೆಯಲಿದೆ. ಕೋರ್ಟ್ ಕಮಿಷನರ್ ನೇಮಿಸಿ, ಮಸೀದಿ ಸರ್ವೇ ನಡೆಸಬೇಕು ಎಂದು ವಿಎಚ್​ಪಿ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ವಿಎಚ್​ಪಿ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾಲಯವು ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ.

Check Also

ಉಳ್ಳಾಲ: ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಅಪಘಾತ : ಮೂವರಿಗೆ ಗಾಯ

ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ಇಂದು ಸಂಭವಿಸಿದೆ …

Leave a Reply

Your email address will not be published. Required fields are marked *

You cannot copy content of this page.