ಬೆಳ್ತಂಗಡಿ: ಯುವಕನೊಬ್ಬನ ಶವ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಶವ ಪತ್ತೆಯಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.