ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು..!

ಬೆಳ್ತಂಗಡಿ: ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ನಡೆದಿದೆ.

ಜನವರಿಯಲ್ಲಿ ವರ್ಷಂಪ್ರತಿ ಬೆಳ್ತಂಗಡಿ-ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಇಲ್ಲಿಯ ಬಾಡಾರುವಿನಲ್ಲಿ ದೊಂಪದಬಲಿ ಉತ್ಸವ ಜರಗಿದ ಮರುದಿನ ಈ ಕೊರಗಜ್ಜನ ಗುಡಿಯಲ್ಲಿ ಸಾರ್ವಜನಿಕವಾಗಿ ನೇಮೋತ್ಸವ ನಡೆಯುತ್ತ ಬರುತ್ತಿತ್ತು ಎನ್ನಲಾಗಿದೆ. ಗುಡಿಯ ಜಾಗದ ವಿಚಾರ ಮತ್ತು ಆಡಳಿತದ ವಿಚಾರದಲ್ಲಿ ತಗಾದೆಗಳು ನಡೆಯುತ್ತಿತ್ತು ಎನ್ನಲಾಗಿದೆ. ಇದೀಗ ಆರಾಧ್ಯ ಶಕ್ತಿ ಗುಡಿಗೆ ಬೆಂಕಿ ಇಟ್ಟಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆಯಿಂದಷ್ಟೇ ಖಚಿತ ಮಾಹಿತಿ ತಿಳಿದು ಬರಬೇಕಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.