ಬಂಟ್ವಾಳ: ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ.
ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ಪೊಲೀಸರು ಘಟನೆಯ ಸತ್ಯಾಸತ್ಯತೆಯ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.