
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.