ಐತಿಹಾಸಿಕ ಕೀಳಂಜೆ ದೇವಸ್ಥಾನ : ಮುಷ್ಟಿ ಕಾಣಿಕೆ ಸಮರ್ಪಣೆ ಸಂಪನ್ನ

ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಹೋಮಾದಿಗಳು
ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ
ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ
22.01.2024 ರ ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ , ಗಣಹೋಮ , ಭದ್ರದೀಪ ಸಮರ್ಪಣೆ ,ಮುಷ್ಟಿ ಕಾಣಿಕೆ
ಸಮರ್ಪಣೆ ಹಾಗು ಇತರ ಧಾರ್ಮಿಕ ವಿಧಿಗಳೊಂದಿಗೆ ಪ್ರಾರಂಭಗೊಂಡಿತು .

ಅಂದು ಜೈನ ಮುನಿ ಗಾಲವ ಋಷಿ ತಪಸ್ಸು ಮಾಡಿದ್ದ ಗುಹೆ – “ದಾಸನಗುಳಿ “ಎಂಬಲ್ಲಿ ಊರಿನ ಎಲ್ಲ ಭಕ್ತರು ಸೇರಿ ದೀಪ ಪ್ರಜ್ವಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು .

23.01.2024 ರ ಮಂಗಳವಾರದಂದು ಬೆಳಿಗ್ಗೆ ನವಕ ಪ್ರಧಾನ ಹೋಮ , ನವಗ್ರಹ ಶಾಂತಿ , ಮಧ್ಯಾನ್ಹ್ನ ಅನ್ನ ಸಂತರ್ಪಣೆ , ಸಂಜೆ ದುರ್ಗಾ ನಮಸ್ಕಾರ ಪೂಜೆ ನೆರವೇರಿತು .

ಹಾಗೆಯೇ 31.01.2024 ರ ಬುಧವಾರ ಸರ್ಪ ಸಂಸ್ಕಾರ ಕ್ರಿಯೆಯ ಮಂಗಳ , ಆಶ್ಲೇಷ ಬಲಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು
ದೇವಸ್ಥಾನದ ಪ್ರಕಟಣೆ ತಿಳಿಸಿದೆ .

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.