March 21, 2026
AA-230624-car

ಉಪ್ಪಿನಂಗಡಿ: ಲಾರಿಯೊಂದು ಎರಡು ಕಾರುಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಎರಡು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರವಾಗಿ ಗಾಯಗಳಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ನಡೆದಿದೆ.

ಈ ಬಗ್ಗೆ ಬಜತ್ತೂರು ಗ್ರಾಮದ ರೆಂಜಾಲ ಮನೆ ನಿವಾಸಿ ಮನೋಹರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮನೆಯವರೊಂದಿಗೆ ಶಿರಾಡಿ ಗ್ರಾಮದ ಗಡಿ ದೇವಸ್ಥಾನಕ್ಕೆಂದು ಕಾರಿನಲ್ಲಿ ತೆರೆಳುತ್ತಿದ್ದ ವೇಳೆ, ಲಾರಿಯೊಂದು ಎದುರಿನಲ್ಲಿದ್ದ ಕಾರೊಂದಕ್ಕೆ ಢಿಕ್ಕಿ ಹೊಡೆದು ದೂಡಿಕೊಂದು ಬಂದು ಇವರಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದ ನಾರಾಯಣ, ದಮಯಂತಿ, ಕೂಸಮ್ಮ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಎದುರುಗಡೆಯ ಕಾರಿನಲ್ಲಿದ್ದ ಮಹೇಶ್ ಎಂಬವರಿಗೂ ತೀವ್ರ ಗಾಯಗಳಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.