ಸುಳ್ಯ: ಎರಡು ಪ್ರತ್ಯೇಕ ಪ್ರಕರಣ: ವೃದ್ಧ ಮತ್ತು ಗರ್ಭಿಣಿ ಮಹಿಳೆ ಆತ್ಮಹತ್ಯೆ…!

ಸುಳ್ಯ: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಓರ್ವ ವೃದ್ಧ ಹಾಗೂ ಗರ್ಭಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣ-1: ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದು, ಗಣರಾಜ್ಯೋತ್ಸವ ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣ.2: ವೃದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ಜಟ್ಟಿಪಳ್ಳದಲ್ಲಿ ನಡೆದಿದೆ.ವಿಶ್ವನಾಥ ಭಂಡಾರಿ(72ವ) ಎಂಬುವವರು ಮೃತ ದುರ್ದೈವಿ. ಮನೆಯ ಜಗಲಿಯಲ್ಲಿ ಕಬ್ಬಿಣದ ರಾಡ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇವರು ಕೆಲ ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದು ಮನೆಯಲ್ಲೇ ಇದ್ದರು. ಹೀಗಾಗಿ ಹೊರಗಡೆ ಹೋಗುವುದಕ್ಕೆ ಅಸಾಧ್ಯವಾಗುತ್ತಿತ್ತು ಎನ್ನಲಾಗಿದೆ. ಜ. 26ರಂದು ಪತ್ನಿ ಕಾರ್ಯಕ್ರಮ ನಿಮಿತ್ತ ಹೊರಗೆ ಹೋದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬರೇ ಇದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Check Also

ಉಳ್ಳಾಲ: ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಅಪಘಾತ : ಮೂವರಿಗೆ ಗಾಯ

ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ಇಂದು ಸಂಭವಿಸಿದೆ …

Leave a Reply

Your email address will not be published. Required fields are marked *

You cannot copy content of this page.