ಮಂಗಳೂರು:ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಎಂಬಲ್ಲಿ ನಡೆದಿದೆ
ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹೆಚ್ಚು ಮೊಬೈಲ್ ಪೋನ್ ಬಳಕೆ ಮಾಡುತ್ತಿದ್ದ.ಇದಕ್ಕೆ ತಾಯಿ ಮೊಬೈಲ್ ಬಳಸದಂತೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಗಿಲು ಹಾಕಿಕೊಂಡು ಜ್ಞಾನೇಶ್ ಕುಳಿತುಕೊಂಡಿದ್ದ.ಕೆಲ ಸಮಯದ ಬಳಿಕ ಪೋಷಕರು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.
ತಕ್ಷಣ ಬಾಗಿಲು ತೆರೆದು ನೇಣನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ಕಂಡು ಬಂದಿದೆ.