ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತನ ಜೊತೆ ಗಲಾಟೆಯಾಗಿ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಪಿಲ್ಯ ಗ್ರಾಮ ನಿವಾಸಿ ದೀಕ್ಷಿತ್ ಮೂಗು ತುಂಡರಿಸಿಕೊಂಡ ಯುವಕ. ಮೂಗು ತುಂಡರಿಸಿದ ಆರೋಪಿ ರಾಕೇಶ್ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು, ಬೆಳ್ತಂಗಡಿಯಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ನಿನ್ನೆ ರಾತ್ರಿ ಹೊಸ ವರ್ಷದ
ಸಂದರ್ಭದಲ್ಲಿ ಮದ್ಯ ಸೇವಿಸಿ ಕುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್,
ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …