March 4, 2026
WhatsApp Image 2026-01-01 at 5.05.42 PM

ಮೂಡುಬಿದಿರೆ: ಹೊಸಂಗಡಿ ಬಳಿ ಇಂದು ಮಧ್ಯಾಹ್ನ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ.ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು ಇಂದು ಮಧ್ಯಾಹ್ನ ಅಂಗಡಿಗೆಂದು ನಡೆದುಕೊಂಡು ಹೋಗುತ್ತಿದ್ದನೆನ್ನಲಾಗಿದೆ.ಈ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.ಪರಿಣಾಮ ಝಾಹಿರ್ ಮೃತಪಟ್ಟಿದ್ದಾನೆ.ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.