ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 11ರಂದು ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ.
ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಬಿಜೆಪಿ ನಾಯಕರ ದಂಡೇ ಸಮಾವೇಶಕ್ಕೆ ಆಗಮಿಸಲಿದೆ.
ದ.ಕ ಜಿಲ್ಲೆಯಾದ್ಯಂತ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರೂ ಈ ಸಮಾವೇಶದಲ್ಲಿ ಆಗಮಿಸಲಿದ್ದು, ಬಿಜೆಪಿ ಚಾಣಕ್ಯ ಮುಂದಿನ ಚುನಾವಣೆಗಾಗಿ ರಣತಂತ್ರ ರೂಪಿಸಲಿದ್ದಾರೆ.